
ಕನ್ನಡ ಚಿತ್ರರಂಗದ ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಅಗಲಿ ಇಂದಿಗೆ (ಜೂನ್ 7) ಒಂದು ವರ್ಷ. ಕನಕಪುರ ರಸ್ತೆ ನೆಲಗುಳಿ ಬಳಿ ಇರುವ ಬೃಂದಾವನ ಫಾರ್ಮ್ ಹೌಸ್‌ನಲ್ಲಿ ಇಂದು ಕುಟುಂಬಸ್ಥರು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.
ಮೇಘನಾ ಮಾತು:
'ನೀನು ದೇವರ ಮನೆಗೆ ಹೋಗಿ ವರ್ಷವಾಯಿತು. ಎಷ್ಟು ಬೇಗ ಒಂದು ವರ್ಷ! ಈ 365 ದಿನಗಳಲ್ಲಿ ನಿನ್ನ ನೆನೆಯದ ದಿನಗಳೇ ಇಲ್ಲ. ಕನಸಿನಲ್ಲಿ ನಿನ್ನ ಕಾಣದ ರಾತ್ರಿಗಳೇ ಇಲ್ಲ. ಮರೆಯಲಾಗದ ಚಿರು ನೆನಪುಗಳು. ಕುಟುಂಬದ ಮೇಲೆ ನಿನಗಿದ್ದ ಅಪಾರ ಗೌರವ. ಜನನಗಳಿಗೆ ನೀನು ತೋರಿಸುತ್ತಿದ್ದ ಪ್ರೀತಿ, ಪ್ರೇಮ, ಸ್ನೇಹ, ಉದಾರಗುಣ ಮತ್ತು ಅಜಾತ ಶಶ್ರುಗಿದ್ದ ನಿನ್ನ ನೆನಪುಗಳೇ ಈಗ ನಮ್ಮ ಕರಗಲಾರದ ಆಸ್ತಿ. ನೀನೆಲ್ಲಿದ್ದರೂ ಅಲ್ಲಿ ನಗು ತುಂಬಿರಬೇಕು. ನಿನ್ನ ಆತ್ಮ ಸದಾ ಶಾಂತಿಯಿಂದಿರಬೇಕು. ಆ ಪ್ರಾರ್ಥನೆಯಲ್ಲೇ ಎಂದೆಂದೂ ನಿನ್ನ ನೆನಪಿನಲ್ಲೇ,' ಎಂದು ಮೇಘನಾ ಬರೆದುಕೊಂಡಿದ್ದಾರೆ.
ಜೂ. ಚಿರುಗೆ 7ನೇ ತಿಂಗಳು: ಫ್ಯಾನ್ಸ್ ಸೃಷ್ಟಿಸಿದ ಫೋಟೋ ವೈರಲ್!
ಚಿರು ಜೊತೆಗಿರುವ ಕ್ಯಾಂಡಿಡ್ ಫೋಟೋ ಹಂಚಿಕೊಂಡಿರುವ ಮೇಘನಾ 'Us Mine' ಎಂದು ಬರೆದುಕೊಂಡಿದ್ದಾರೆ. ಫೋಟೋದಲ್ಲಿ ಚಿರು ಮೇಘನಾ ನೋಡಿ ನಗುತ್ತಿದ್ದಾರೆ. ಇವರಿಬ್ಬರೂ ಎಷ್ಟು ಪ್ರೀತಿಸುತ್ತಿದ್ದರೆಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.