'ಹೌದು, ನಾನು ಪ್ರೀತಿಸುತ್ತಿದ್ದೇನೆ' ಎಂದ ರಶ್ಮಿಕಾ ಮಂದಣ್ಣ

Published : Nov 20, 2019, 03:16 PM ISTUpdated : Nov 20, 2019, 03:31 PM IST
'ಹೌದು, ನಾನು ಪ್ರೀತಿಸುತ್ತಿದ್ದೇನೆ' ಎಂದ ರಶ್ಮಿಕಾ ಮಂದಣ್ಣ

ಸಾರಾಂಶ

ರಶ್ಮಿಕಾ ಮಂದಣ್ಣ ತೆಲುಗು ಇಂಡಸ್ಟ್ರಿಗೆ ಹೋದ ನಂತರ ಅವರ ಬಗ್ಗೆ ಇದ್ದ ಇಮೇಜ್ ಬದಲಾಗಿ ಹೋಗಿದೆ. ವಿಜಯ ದೇವರಕೊಂಡ ಜೊತೆಗೆ ಕುಚ್ ಕುಚ್ ಹೋ ರಹಾ ಹೇ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ರಶ್ಮಿಕಾ ಉತ್ತರ ಕೊಟ್ಟಿದ್ದಾರೆ. 

'ಕಿರಿಕ್ ಪಾರ್ಟಿ' ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ರಶ್ಮಿಕಾ ಮಂದಣ್ಣ ಆಮೇಲೆ ಹೆಸರು ಮಾಡಿದ್ದು ಮಾತ್ರ ತೆಲುಗು ಇಂಡಸ್ಟ್ರಿಯಲ್ಲಿ. ಕನ್ನಡಕ್ಕಿಂತ ಹೆಚ್ಚಾಗಿ ಟಾಲಿವುಡ್‌ ಕಡೆಗೆ ಹೆಚ್ಚು ಒಲವು ತೋರಿದರು. ಗೀತಾ ಗೋವಿಂದಂ, ಡಿಯರ್ ಕಾಮ್ರೆಡ್ ನಂತರ ಅವರ ಸ್ಟಾರೇ ಬದಲಾಗಿ ಹೋಯಿತು. ವಿಜಯ್ ದೇವರಕೊಂಡ ಜೊತೆ ಹೆಚ್ಚಾಗಿ ಕಾಣಿಸಿಕೊಂಡ ನಂತರ ಅವರಿಬ್ಬರೂ ಪ್ರೀತಿಸುತ್ತಿದ್ದಾರೆ ಎಂಬ ಸುದ್ದಿ ಓಡಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ಹೌದು ಪ್ರೀತಿಸುತ್ತಿದ್ದೇನೆ ಎಂದಿದ್ದಾರೆ. 

ಸ್ಯಾಂಡಲ್‌ವುಡ್‌ ಕ್ಯೂಟಿ ಕಾರುಣ್ಯ ರಾಮ್‌ ಫೋನ್‌ನಲ್ಲಿ ಇದ್ನೆಲ್ಲ ಇಟ್ಕೊಂಡಿದ್ದಾರಾ?

ಇತ್ತೀಚಿಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಮಾತನಾಡುತ್ತಾ, ವಿಜಯ್ ದೇವರಕೊಂಡರನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆ ಉತ್ತರಿಸಿದ್ದಾರೆ. 

'ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಅದು ಯಾವುದೇ ವ್ಯಕ್ತಿಯಲ್ಲ. ಬದಲಾಗಿ ಸಿನಿಮಾವನ್ನು.  ಬೇರೆ ಬೇರೆ ಪಾತ್ರಗಳಲ್ಲಿ ಕಾಣಿಸಿಕೊಳ್ಳಬೇಕು ಎನ್ನುವ ಆಸೆಯಿದೆ.  ದೊಡ್ಡ ದೊಡ್ಡ ನಟರ ಜೊತೆ ಅಭಿನಯಿಸಲು ಅವಕಾಶ ಸಿಕ್ಕಿದ್ದು ಖುಷಿ ಕೊಟ್ಟಿದೆ. ನಾನು ಸಿನಿಮಾಗಳನ್ನು ಮಾತ್ರ ಪ್ರೀತಿಸುತ್ತಿದ್ದೇನೆ' ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. 

ರಶ್ಮಿಕಾ ಮಂದಣ್ಣ - ವಿಜಯ್ ದೇವರಕೊಂಡ ಡಿಯರ್ ಕಾಮ್ರೆಡ್ ರೊಮ್ಯಾಂಟಿಕ್ ಫೋಟೋಗಳಿವು

 

ರಶ್ಮಿಕಾ ಇತ್ತೀಚಿಗೆ ಸಿನಿಮಾಗಿಂತ ಹೆಚ್ಚಾಗಿ ಟ್ರೋಲ್‌ಗಳಿಂದಲೇ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಬಾಲ್ಯದ ಫೋಟೋವನ್ನು ಶೇರ್ ಮಾಡಿಕೊಂಡಿದ್ದು ಅದು ಕೂಡಾ ಟ್ರೋಲ್ ಆಗಿತ್ತು. ಅದೇ ರೀತಿ ತಮಿಳು ಕಾರ್ಯಕ್ರಮವೊಂದರಲ್ಲಿ ಸಾಲುಮರದ ತಿಮ್ಮಕ್ಕ ಜೊತೆ ವೇದಿಕೆ ಮೇಲೆ ನಡೆದುಕೊಂಡ ರೀತಿಗೆ ಚರ್ಚೆಗೆ ಒಳಗಾಗಿದ್ದರು. 
 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಟಾಕ್ಸಿಕ್ ಪೋಸ್ಟರ್ ರಿಲೀಸ್ ಮಾಡಿ ಕುತೂಹಲ ಹೆಚ್ಚಿಸಿದ ಯಶ್, ಸಿನಿಮಾ ಬಿಡುಗಡೆ ಕೌಂಟ್‌ಡೌನ್ ಶುರು
ಕನ್ನಡಿಗರ ಪ್ರೀತಿಯ ಪುಟ್ಟಿ ಯಾಕ್ ಹೀಗಾದ್ರು? Rukmini Vasanth ನ್ಯೂ ಲುಕ್ ವೈರಲ್