ಕಾಮಿಡಿ ಕಿಂಗ್ ಚಿಕ್ಕಣ್ಣ ಹಸೆಮಣೆ ಏರಲು ಸಜ್ಜು: ಮದುವೆ ಸ್ಥಳ ಎಲ್ಲಿ? ದಿನಾಂಕ ಯಾವಾಗ? ಇಲ್ಲಿದೆ ಮಾಹಿತಿ

Published : Jul 29, 2026, 06:32 PM IST
Chikkanna Pavana Marriage

ಸಾರಾಂಶ

ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ ಅವರ ಅಭಿಮಾನಿಗಳಿಗೆ ಕೊನೆಗೂ ಗುಡ್‌ನ್ಯೂಸ್ ಸಿಕ್ಕಿದೆ. ಹಲವು ದಿನಗಳಿಂದ ಕುತೂಹಲ ಮೂಡಿಸಿದ್ದ ಚಿಕ್ಕಣ್ಣ ಅವರ ವಿವಾಹ ದಿನಾಂಕ ಇದೀಗ ಅಂತಿಮವಾಗಿದೆ.

ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ ಅವರ ಅಭಿಮಾನಿಗಳಿಗೆ ಕೊನೆಗೂ ಗುಡ್‌ನ್ಯೂಸ್ ಸಿಕ್ಕಿದೆ. ಹಲವು ದಿನಗಳಿಂದ ಕುತೂಹಲ ಮೂಡಿಸಿದ್ದ ಚಿಕ್ಕಣ್ಣ ಅವರ ವಿವಾಹ ದಿನಾಂಕ ಇದೀಗ ಅಂತಿಮವಾಗಿದೆ ಎನ್ನಲಾಗಿದ್ದು, ಆಗಸ್ಟ್‌ 29 ಮತ್ತು 30ರಂದು ಮೈಸೂರಿನಲ್ಲಿ ಅದ್ಧೂರಿ ವಿವಾಹ ಸಂಭ್ರಮ ನಡೆಯಲಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಹಾಸ್ಯ ಶೈಲಿ, ವಿಭಿನ್ನ ಬಾಡಿ ಲಾಂಗ್ವೇಜ್‌ ಮತ್ತು ಪಂಚಿಂಗ್ ಡೈಲಾಗ್‌ಗಳ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿರುವ ಚಿಕ್ಕಣ್ಣ, ಇದೀಗ ವೈಯಕ್ತಿಕ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

ಆಗಸ್ಟ್‌ನಲ್ಲಿ ಚಿಕ್ಕಣ್ಣ-ಪಾವನಾ ಮದುವೆ

ಚಿಕ್ಕಣ್ಣ ಮತ್ತು ಪಾವನಾ ಅವರ ವಿವಾಹ ಕಾರ್ಯಕ್ರಮಗಳು ಮೈಸೂರಿನ ಸ್ಪೆಕ್ಟ್ರಮ್ ಹಾಲ್‌ನಲ್ಲಿ ಎರಡು ದಿನಗಳ ಕಾಲ ನಡೆಯಲಿದೆ ಎಂದು ತಿಳಿದುಬಂದಿದೆ. ಕುಟುಂಬದವರು, ಆಪ್ತರು ಹಾಗೂ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಮದುವೆ ಸಂಭ್ರಮ ನಡೆಯುವ ನಿರೀಕ್ಷೆಯಿದೆ. ಈ ಹಿಂದೆ 2025ರಲ್ಲಿ ಚಿಕ್ಕಣ್ಣ ಮತ್ತು ಪಾವನಾ ಅವರ ನಿಶ್ಚಿತಾರ್ಥ ನಡೆದಿತ್ತು. ಕುಟುಂಬದವರ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಆದರೆ ಮದುವೆಯ ದಿನಾಂಕ ಮಾತ್ರ ಅಧಿಕೃತವಾಗಿ ಬಹಿರಂಗವಾಗಿರಲಿಲ್ಲ. ಇದೀಗ ವಿವಾಹ ಮುಹೂರ್ತ ನಿಗದಿಯಾಗಿರುವ ಸುದ್ದಿ ಹೊರಬಿದ್ದಿದೆ.

ಯಾರು ಈ ಪಾವನಾ?

ಚಿಕ್ಕಣ್ಣ ಅವರ ಬಾಳ ಸಂಗಾತಿಯಾಗಲಿರುವ ಪಾವನಾ ಮೂಲತಃ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದವರು. ಇಂಜಿನಿಯರಿಂಗ್ ಪದವಿ ಪಡೆದಿರುವ ಪಾವನಾ ಅವರೊಂದಿಗೆ ಚಿಕ್ಕಣ್ಣ ಹೊಸ ಜೀವನ ಆರಂಭಿಸಲಿದ್ದಾರೆ.

ಗಾರೆ ಕೆಲಸದಿಂದ ಗ್ಲಾಮರ್‌ ಲೋಕದವರೆಗೆ ಚಿಕ್ಕಣ್ಣ ಜರ್ನಿ

ಇಂದು ಕನ್ನಡ ಚಿತ್ರರಂಗದ ಜನಪ್ರಿಯ ಹಾಸ್ಯ ನಟರಲ್ಲಿ ಒಬ್ಬರಾಗಿರುವ ಚಿಕ್ಕಣ್ಣ ಅವರ ಸಿನಿ ಪಯಣ ಅಷ್ಟು ಸುಲಭವಾಗಿರಲಿಲ್ಲ. ಮೈಸೂರಿನ ಬಲ್ಲಹಳ್ಳಿಯಲ್ಲಿ ಜನಿಸಿದ ಚಿಕ್ಕಣ್ಣ, ಎಸ್‌ಎಸ್‌ಎಲ್‌ಸಿ ಬಳಿಕ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆದರೆ ಬಾಲ್ಯದಿಂದಲೇ ಅಭಿನಯದ ಮೇಲೆ ಆಸಕ್ತಿ ಹೊಂದಿದ್ದ ಅವರು, ಶಾಲಾ ನಾಟಕಗಳು ಮತ್ತು ಆರ್ಕೆಸ್ಟ್ರಾ ಕಾರ್ಯಕ್ರಮಗಳಲ್ಲಿ ಹಾಸ್ಯ ಪಾತ್ರಗಳ ಮೂಲಕ ತಮ್ಮ ಪ್ರತಿಭೆ ತೋರಿಸಿದ್ದರು.

ನಂತರ ಕಿರುತೆರೆ ಕಾರ್ಯಕ್ರಮಗಳ ಮೂಲಕ ಗಮನ ಸೆಳೆದ ಚಿಕ್ಕಣ್ಣ, ಬೆಳ್ಳಿತೆರೆಗೆ ಎಂಟ್ರಿ ನೀಡಿದರು. 'ಕಿರಾತಕ' ಸಿನಿಮಾ ಅವರ ಸಿನಿ ಬದುಕಿಗೆ ದೊಡ್ಡ ತಿರುವು ನೀಡಿತು. ಬಳಿಕ 'ರಾಜಾಹುಲಿ', 'ಅಧ್ಯಕ್ಷ', 'ಕೋಟಿಗೊಬ್ಬ 2' ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಹಾಸ್ಯದಿಂದ ಪ್ರೇಕ್ಷಕರ ಮನ ಗೆದ್ದರು.

ಹಾಸ್ಯದಿಂದ ಹೃದಯ ಗೆದ್ದ ನಟನ ಹೊಸ ಅಧ್ಯಾಯ

ಯಶ್ ಅಭಿನಯದ ಕಿರಾತಕ ಮೂಲಕ ದೊಡ್ಡ ಮಟ್ಟದ ಗುರುತಿಸಿಕೊಂಡ ಚಿಕ್ಕಣ್ಣ, ನಂತರ ತಮ್ಮದೇ ಆದ ಕಾಮಿಡಿ ಟೈಮಿಂಗ್ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ವಿಶೇಷ ಸ್ಥಾನ ಪಡೆದುಕೊಂಡರು. ತೆರೆಯ ಮೇಲೆ ಜನರನ್ನು ನಗಿಸುತ್ತಾ ಬಂದ ಚಿಕ್ಕಣ್ಣ, ಇದೀಗ ನಿಜ ಜೀವನದಲ್ಲೂ ಸಂತಸದ ಕ್ಷಣಕ್ಕೆ ಸಾಕ್ಷಿಯಾಗುತ್ತಿದ್ದಾರೆ. ಚಿಕ್ಕಣ್ಣ-ಪಾವನಾ ಅವರ ವಿವಾಹ ಸಂಭ್ರಮಕ್ಕಾಗಿ ಅಭಿಮಾನಿಗಳು ಕೂಡ ಕಾತರದಿಂದ ಕಾಯುತ್ತಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

'ಕಾಂತಾರ' ಸ್ಟಾರ್ ರಿಷಬ್ ಶೆಟ್ಟಿಗೆ ಮತ್ತೊಂದು ಗರಿ: ಮೆಲ್ಬೋರ್ನ್‌ನಲ್ಲಿ 'ಲೀಡರ್‌ಶಿಪ್ ಇನ್ ಸಿನಿಮಾ' ಪ್ರಶಸ್ತಿ!
ವಿಜಯ್ ಕೊನೆ ಸಿನಿಮಾದಲ್ಲಿ 6.3 ಅಡಿ ಎತ್ತರದ ಕನ್ನಡಿಗನ ಖದರ್: ಕಾಲಿವುಡ್‌ನಲ್ಲಿ ವಜ್ರಾಂಗ್ ಶೆಟ್ಟಿ ಅಬ್ಬರ!