Murali Krishna: ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಕನ್ನಡ ಸಿನಿಮಾ ನಿರ್ದೇಶಕ ಮುರಳಿ ಕೃಷ್ಣ ನಿಧನ

Published : Nov 15, 2022, 10:41 AM ISTUpdated : Nov 15, 2022, 10:52 AM IST
Murali Krishna: ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಕನ್ನಡ ಸಿನಿಮಾ ನಿರ್ದೇಶಕ ಮುರಳಿ ಕೃಷ್ಣ ನಿಧನ

ಸಾರಾಂಶ

KR Murali Krishna Death: ಸ್ಯಾಂಡಲ್‌ವುಡ್ ನಿರ್ದೇಶಕ ಮುರಳಿ ಕೃಷ್ಣ ಸೋಮವಾರ (ನವೆಂಬರ್ 14) ನಿಧನ ಹೊಂದಿದ್ದಾರೆ. ಸೋಮವಾರ ರಾತ್ರಿ 7.30ರ ಸುಮಾರಿಗೆ ನಿಧನರಾದರು ಎನ್ನುವ ಮಾಹಿತಿ ತಿಳಿದುಬಂದಿದೆ.

ಸ್ಯಾಂಡಲ್‌ವುಡ್ ನಿರ್ದೇಶಕ ಮುರಳಿ ಕೃಷ್ಣ ಸೋಮವಾರ (ನವೆಂಬರ್ 14) ನಿಧನ ಹೊಂದಿದ್ದಾರೆ. ಸೋಮವಾರ ರಾತ್ರಿ 7.30ರ ಸುಮಾರಿಗೆ ನಿಧನರಾದರು. ಕನ್ನಡದಲ್ಲಿ ಗರ ಸಿನಿಮಾ ಸೇರಿದಂತೆ ಅನೇಕ ಚಿತ್ರಗಳಿಗೆ ಮುರಳಿ ಕೃಷ್ಣ ಆಕ್ಷನ್ ಕಟ್ ಹೇಳಿದ್ದರು. ನಿರ್ದೇಶನದ ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಿರ್ದೇಶಕ ಮುರಳಿ ಕೃಷ್ಣ ಅವರು ಬ್ರೈನ್ ಟ್ಯೂಮರ್‌ ಶಸ್ತ್ರಚಿಕಿತ್ಸೆ ಬಳಿಕ  ಹೃದಯಾಘಾತದಿಂದ ನಿಧನಹೊಂದಿದ್ದಾರೆ ಎಂದು ಕುಟುಂಬದವರು ಮಾಹಿತಿ ತಿಳಿಸಿದ್ದಾರೆ. 

ಕೆ.ಆರ್​. ಮುರಳಿ ಕೃಷ್ಣ ಅವರಿಗೆ ಬ್ರೈನ್​ ಟ್ಯೂಮರ್​ ಆಗಿತ್ತು. ಅದರ ಸಲುವಾಗಿ ಇತ್ತೀಚೆಗೆ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿತ್ತು. ಆದರೆ ಸರ್ಜರಿ ಬಳಿಕ ಅವರಿಗೆ ಹೃದಯಾಘಾತ ಸಂಭವಿಸಿದ ಪರಿಣಾಮವಾಗಿ ನಿಧನರಾಗಿದ್ದಾರೆ. ಕೃಷ್ಣ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಚಿತ್ರರಂಗದ ಅನೇಕರು ಸಾಮಾಜಿಕ ಜಾಲತಾಣದ ಮೂಲಕ ಹೇಳುತ್ತಿದ್ದಾರೆ. 

ಕೃಷ್ಣ ಅವರಿಗೆ ಮೊದಲು ಬ್ರೈನ್ ಟೂಮರ್ ಇರುವುದು ಗೊತ್ತಾಗಿರಲಿಲ್ಲ. ಸಿಟಿ ಸ್ಕ್ಯಾನ್ ಬಳಿಕ ತಡವಾಗಿ ಟ್ಯೂಮರ್ ಪತ್ತೆಯಾಗಿದೆ. ತಕ್ಷಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದರು. ಶಸ್ತ್ರ ಚಿಕಿತ್ಸೆ ಫಲಕಾರಿಯಾದರೂ ಹೃದಯಾಘಾತದಿಂದ ನಿಧನಹೊಂದಿರು. ಮುರಳಿ ಕೃಷ್ಣ ಅವರು ಇಬ್ಬರೂ ಹೆಣ್ಣು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ. 

Actor Krishna Death: ಟಾಲಿವುಡ್‌ ಸೂಪರ್‌ಸ್ಟಾರ್‌ ಮಹೇಶ್‌ ಬಾಬು ತಂದೆ ಇನ್ನಿಲ್ಲ

ಮುರಳಿ ಕೃಷ್ಣ ತಮ್ಮ ಸಿನಿಮಾಗಾಗಿ ಬಾಲಿವುಡ್ ನಿಂದ ಖ್ಯಾತ ಕಾಮಿಡಿ ಸ್ಟಾರ್ ಜಾನಿ ಲಿವರ್ ಅವರನ್ನು ಕನ್ನಡಕ್ಕೆ ಕರೆತಂದಿದ್ದರು. ಮುರಳಿ ನಿರ್ದೇಶಕ ಗರ ಸಿನಿಮಾದಲ್ಲಿ ಜಾನಿ ಲಿವರ್ ನಟಿಸಿದ್ದರು. ವೃತ್ತಿಯಲ್ಲಿ ವಕೀಲರಾಗಿದ್ದರೂ ಸಿನಿಮಾ ಪ್ರವೃತ್ತಿಯಾಗಿಸಿಕೊಂಡಿದ್ದರು. ಬಾಳನೌಕೆ, ಕರ್ಣನ ಸಂಪತ್ತು, ಹೃದಯ ಸಾಮ್ರಾಜ್ಯ, ಮರಳಿ ಗೂಡಿಗೆ ಸಿನಿಮಾಗಳನ್ನ ನಿರ್ಮಿಸಿದ್ದರು. 

ಫಲಿಸದ ಚಿಕಿತ್ಸೆ; ಹಿರಿಯ ನಟ ಲೋಹಿತಾಶ್ವ ವಿಧಿವಶ

ಮುರಳಿ ಕೃಷ್ಣ ಅವರ ಪಾರ್ಥಿವ ಶರೀರವನ್ನು ಸಹಕಾರ ನಗರದ ತಮ್ಮ ನಿವಾಸದಲ್ಲಿ ಇರಿಸಲಾಗಿದೆ. ಅಲ್ಲೇ ಅಂತಿಮ ದರ್ಶನಕ್ಕೆ ಅವಕಾಶ ಅವಕಾಶ ಮಾಡಿಕೊಡಲಾಗಿದೆ.  ಇಂದು ಮಧ್ಯಾಹ್ನ 12:30ರ ಸುಮಾರಿಗೆ ಹೆಬ್ಬಾಳ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

'ಧಂ' ಬೇಕಲೇ ಎಂದಿದ್ದ ದರ್ಶನ್‌ಗೆ ಟಾಂಗ್ ಕೊಟ್ರಾ ಸುದೀಪ್? ಏನಿದು ಮಾರ್ಕ್ ಡೈಲಾಗ್ ಮರ್ಮ?
ಸಿನಿಮಾ ರಿಲೀಸ್‌ಗೂ ಮುನ್ನವೇ ಜೈಲಲ್ಲಿ ಡೆವಿಲ್ ರೂಪ ತಾಳಿದ ದರ್ಶನ್; ಸಹ ಕೈದಿಗಳಿಗೆ ಕಾಲಿನಿಂದ ಒದ್ದು ದುರಹಂಕಾರ!