'ಸಲಾರ್' ಕಮಾಂಡರ್‌ಗೆ ಶುಭಾಶಯ ತಿಳಿಸಿದ ಪ್ರಶಾಂತ್ ನೀಲ್

Suvarna News   | Asianet News
Published : Oct 23, 2021, 06:15 PM IST
'ಸಲಾರ್' ಕಮಾಂಡರ್‌ಗೆ ಶುಭಾಶಯ ತಿಳಿಸಿದ ಪ್ರಶಾಂತ್ ನೀಲ್

ಸಾರಾಂಶ

42ನೇ ವಸಂತಕ್ಕೆ ಕಾಲಿಟ್ಟಿರುವ ಟಾಲಿವುಡ್ ಹ್ಯಾಂಡ್ಸಮ್‌,  ರೆಬೆಲ್ ಸ್ಟಾರ್ ಪ್ರಭಾಸ್ ಅವರಿಗೆ ಅಭಿಮಾನಿಗಳು ಸೇರಿದಂತೆ ಚಿತ್ರರಂಗದ ಗಣ್ಯರು ಶುಭಕೋರಿದ್ದಾರೆ. 

ಟಾಲಿವುಡ್‌ (Tollywood) ರೆಬೆಲ್ ಸ್ಟಾರ್ ನಟ ಪ್ರಭಾಸ್ (Prabhas) ಇಂದು 42ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ಸೇರಿದಂತೆ ಚಿತ್ರರಂಗದ ಗಣ್ಯರು ಶುಭಕೋರಿದ್ದಾರೆ. ಪ್ರಭಾಸ್‌ಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ನಟಿ ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ, ನಟರಾದ ರವಿತೇಜಾ, ವೆಂಕಟೇಶ್‌, ಸುನೀಲ್‌ ಸೇರಿದಂತೆ ಹಲವಾರು ಸಿನಿಮಾ ಸ್ಟಾರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಹಾರೈಸಿದ್ದಾರೆ.

'ರಾಧೆ ಶ್ಯಾಮ್'ನಲ್ಲಿ ವಿಕ್ರಮಾದಿತ್ಯನ ಲುಕ್‌ ರಿವೀಲ್

ತೆಲುಗಿನ ಬಹು ನಿರೀಕ್ಷಿತ ಚಿತ್ರ 'ರಾಧೆ ಶ್ಯಾಮ್' (Radhe Shyam) ಚಿತ್ರತಂಡ ಟೀಸರ್‌ ಬಿಡುಗಡೆ ಮಾಡುವ ಮೂಲಕ ಪ್ರಭಾಸ್‌ ಹುಟ್ಟುಹಬ್ಬಕ್ಕೆ ಭರ್ಜರಿ ಉಡುಗೊರೆ ನೀಡಿದೆ. ರಾಧಾಕೃಷ್ಣ ಕುಮಾರ್​ ನಿರ್ದೇಶನದ ಈ ಸಿನಿಮಾದಲ್ಲಿ ಪೂಜಾ ಹೆಗ್ಡೆ (Pooja Hegde) ನಾಯಕಿಯಾಗಿ ನಟಿಸಿದ್ದಾರೆ. ತೆಲುಗಿನ ಬಹು ನಿರೀಕ್ಷಿತ ಚಿತ್ರಗಳಲ್ಲಿ ಇದು ಒಂದಾಗಿದ್ದು, ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಮುಂದಿನ ವರ್ಷ ಜನವರಿ 14ರಂದು ಚಿತ್ರ ಬಿಡುಗಡೆಯಾಗಲಿದೆ.

ಪ್ರಭಾಸ್ ಹುಟ್ಟುಹಬ್ಬಕ್ಕೆ ರಾಧೆ ಶ್ಯಾಮ್ ಟೀಸರ್ ರಿಲೀಸ್

ಸದ್ಯ ಪ್ರಭಾಸ್ ಸಾಲು-ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದು, 'ಕೆಜಿಎಫ್' ನಿರ್ದೇಶಕ ಪ್ರಶಾಂತ್​ ನೀಲ್​ (Prashanth Neel) ಡೈರೆಕ್ಷನ್‌ನಲ್ಲಿ 'ಸಲಾರ್' (Salaar) ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ  'ಸಲಾರ್' ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್, ಪ್ರಭಾಸ್ ಹುಟ್ಟುಹಬ್ಬಕ್ಕೆ ಚಿತ್ರದ ಹೊಸ ಪೋಸ್ಟರನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದು, 'ನಮ್ಮ ಕಮಾಂಡರ್ ಪ್ರಭಾಸ್ ಅವರಿಗೆ ಸಲಾರ್ Territoryಯಿಂದ ಹುಟ್ಟುಹಬ್ಬದ ಶುಭಾಶಯಗಳು' ಎಂದು ಟ್ವೀಟ್ (Tweet) ಮಾಡಿದ್ದಾರೆ. ಹೊಂಬಾಳೆ ಫಿಲ್ಮ್ಸ್​ ಸಂಸ್ಥೆಯ ವಿಜಯ್​ ಕಿರಗಂದೂರು (Vijay Kiragandur) ಅವರು ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.
 


'ಸಲಾರ್' ಚಿತ್ರದಲ್ಲಿ ಪ್ರಭಾಸ್‌ಗೆ  ಶ್ರುತಿ ಹಾಸನ್ (Shruti Haasan) ಜೋಡಿಯಾಗಿದ್ದು, ಕನ್ನಡ, ತೆಲುಗು, ತಮಿಳು ಚಿತ್ರಗಳಲ್ಲಿ ವಿಲನ್‌ ಆಗಿ ಮಿಂಚುತ್ತಿರುವ ಜಗಪತಿ ಬಾಬು (Jagapati Babu) ಈ ಚಿತ್ರದಲ್ಲಿ ಖಡಕ್ ವಿಲನ್ ಆಗಿ ಅಬ್ಬರಿಸುತ್ತಿದ್ದಾರೆ. ಮತ್ತು ಚಿತ್ರದಲ್ಲಿರುವ ಸ್ಪೆಷಲ್ ಹಾಡಿಗೆ ಬಾಲಿವುಡ್ ಬ್ಯೂಟಿ ಕತ್ರಿನಾ ಕೈಫ್ (Katrina Kaif) ಹೆಜ್ಜೆ ಹಾಕುತ್ತಿದ್ದು, ಕನ್ನಡ, ತೆಲುಗು, ತಮಿಳು, ಹಿಂದಿ ಭಾಷೆಯಲ್ಲಿ ಚಿತ್ರ ತಯಾರಾಗುತ್ತಿದೆ. ಇನ್ನು ಪ್ರಭಾಸ್ ಬಾಲಿವುಡ್‌ನಲ್ಲಿ 'ಆದಿಪುರುಷ್'​ (AdiPurush) ಸಿನಿಮಾದಲ್ಲಿ ರಾಮನ ಪಾತ್ರಧಾರಿಯಾಗಿ ಅಭಿನಯಿಸುತ್ತಿದ್ದು, ನಾಯಕಿಯಾಗಿ ಕೃತಿ ಸನೋನ್ (Kriti Sanon)​ ಕಾಣಿಸಿಕೊಳ್ಳಲಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಸಿನಿಮಾ: ‘45’ ಟ್ರೇಲರ್ ಬಿಡುಗಡೆಗೆ ಕೌಂಟ್‌ಡೌನ್
ಶಾರುಖ್ ಪುತ್ರ ಆರ್ಯನ್ ಖಾನ್ ಕನ್ನಡಿಗರ ಜೊತೆ ಅಸಭ್ಯ ವರ್ತನೆ ಮಾಡಿಲ್ಲ: ಸಚಿವ ಜಮೀರ್ ಪುತ್ರ ಹೇಳಿದ್ದೇನು?