ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ಗೆ ಪತ್ರ ಬರೆದ 'ಮೊಗ್ಗಿನ ಮನಸು' ನಿರ್ದೇಶಕ ಶಶಾಂಕ್: ಮನವಿ ಮಾಡಿದ್ದೇನು?

Published : Jun 13, 2023, 05:47 PM ISTUpdated : Jun 13, 2023, 05:48 PM IST
ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ಗೆ ಪತ್ರ ಬರೆದ 'ಮೊಗ್ಗಿನ ಮನಸು' ನಿರ್ದೇಶಕ ಶಶಾಂಕ್: ಮನವಿ ಮಾಡಿದ್ದೇನು?

ಸಾರಾಂಶ

ಉಪಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್‌ಗೆ 'ಮೊಗ್ಗಿನ ಮನಸು' ನಿರ್ದೇಶಕ ಶಶಾಂಕ್ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಎರಡು ಮನವಿ ಮಾಡಿಕೊಂಡಿದ್ದಾರೆ. 

ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಶಶಾಂಕ್ ಉಪಮುಖ್ಯ ಮಂತ್ರಿ, ಬೆಂಗಳೂರು ನಗರಾಭಿವೃದ್ಧಿ ಸಚಿವರಾದ  ಡಿ ಕೆ ಶಿವಕುಮಾರ್‌ ಅವರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಶಶಾಂಕ್ ಬರೆದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತನ್ನ ಪತ್ರದಲ್ಲಿ ನಿರ್ದೇಶಕ ಶಶಾಂಕ್, ಡಿ ಕೆ ಶಿವಕುಮಾರ್‌ ಬಳಿ ಎರಡು ಮನವಿ ಮಾಡಿದ್ದಾರೆ.  

'ನಮ್ಮೆಲ್ಲರ ಹೆಮ್ಮೆಯ ಬೆಂಗಳೂರು ನಗರ, ಹಲವಾರು ಮೂಲಭೂತ ಸೌಲಭ್ಯಗಳ ಕೊರತೆಯಿಂದ ನರಳುತ್ತಿರುವುದು ತಮಗೆ ಗೊತ್ತೇ ಇದೆ. ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ಇದರ ನಿವಾರಣೆಯ ಕುರಿತಾಗಿ ಕಾರ್ಯಪ್ರವೃತ್ತರಾಗಿರುವುದು ನಿಜಕ್ಕೂ ಶ್ಲಾಘನೀಯ. ಇದೀಗ, ಕನ್ನಡಿಗರು ಅತ್ಯಂತ ತುರ್ತಾಗಿ ಎದುರು ನೋಡುತ್ತಿರುವ ಎರಡು ಯೋಜನೆಗಳನ್ನು ನಿಮ್ಮ ಗಮನಕ್ಕೆ ತರುವುದು ನನ್ನ ಈ ಪತ್ರದ ಮೂಲ ಉದ್ದೇಶ’ ಎಂದಿದ್ದಾರೆ.  

ಮೊದಲನೆಯದು- ನೆಲಮಂಗಲ ರಸ್ತೆಯ ಗೊರಗುಂಟೆಪಾಳ್ಯ ಜಂಕ್ಷನ್. ರಾಜಧಾನಿಯಿಂದ ಮುಕ್ಕಾಲು ಭಾಗ ಕರ್ನಾಟಕಕ್ಕೆ ಹೋಗಲು, ಇದೇ ಹೆಬ್ಬಾಗಿಲು. ಹಲವಾರು ವರ್ಷಗಳಿಂದ ಇಲ್ಲಿ ಆಗುತ್ತಿರುವುದು ಟ್ರಾಫಿಕ್ ಜಾಮ್. ಅಸಹನೀಯವಾಗಿದೆ. ಶೀಘ್ರವೇ ಇದಕ್ಕೆ ಪರಿಹಾರ ಕಲ್ಪಿಸಿ ಎಂದು ಮೊದಲ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. 

ಎರಡನೆಯದು- ನೆಲಮಂಗಲ ಫ್ಲೈ ಓವರ್ ಮೇಲಿನ ಹೊರೆ ತಗ್ಗಿಸಲು ಅಭಿವೃದ್ಧಿಪಡಿಸಲಾಗುತ್ತಿರುವ ಮಾಗಡಿ ರಸ್ತೆ ವಿಚಾರ. ಒಮ್ಮೆ ಈಗಿನ ರಸ್ತೆ ಕಾಮಗಾರಿ ಪೂರ್ತಿಯಾಗಿ ಸಂಚಾರಕ್ಕೆ ಮುಕ್ತಗೊಂಡರೆ, ಅದೇ ರಸ್ತೆಯಲ್ಲಿರುವ ಸುಂಕದಕಟ್ಟೆ ಈಗಿನ ಗೊರಗುಂಟೆ ಪಾಳ್ಯ ಜಂಕ್ಷನಂತೆ ಮುಂದಿನ ದಿನಗಳಲ್ಲಿ ಟ್ರಾಫಿಕ್ ಸಮಸ್ಯೆಗಳನ್ನು ಸೃಷ್ಟಿಸುವುದು ಖಂಡಿತ. ಆದ್ದರಿಂದ ಈಗಲೇ ಅದಕ್ಕೆ ಪರಿಹಾರ   ಕಂಡುಕೊಳ್ಳುವುದು ಸೂಕ್ತ. 

ಮಹಾಕಾಳನಿಗೆ ಡಿಕೆಶಿ ಭಸ್ಮಾರತಿ ಸಮರ್ಪಣೆ: ಡಿಸಿಎಂ ಉಜ್ಜಯಿನಿ ಭೇಟಿ ಹಿಂದೆ ಇರುವ ರಹಸ್ಯವೇನು ?

ಈ ಎರಡೂ ಯೋಜನೆಗಳು ರಾಜಧಾನಿಯನ್ನು ಬಹುತೇಕ ಕರ್ನಾಟಕಕ್ಕೆ ಸಂಪರ್ಕಿಸುವ ಮತ್ತು  ಕನ್ನಡಿಗರು ಅತೀ ಹೆಚ್ಚು ವಾಸವಿರುವ ಭಾಗಗಳು. ಇವುಗಳ ಅನುಷ್ಠಾನ, ಆ ಭಾಗದ ಕನ್ನಡಿಗರಿಗೆ ನೀವು ನೀಡುವ ಉತ್ತಮ ಕಾಣಿಕೆಯಾಗುತ್ತವೆ ಎಂದು ಶಶಾಂಕ್ ಪತ್ರದಲ್ಲಿ ಬರೆದಿದ್ದಾರೆ.

ಇವು ಸಾರ್ವಜನಿಕ ಸಮಸ್ಯೆಗಳಾಗಿದ್ದರಿಂದ ಮನವಿಯನ್ನೂ ಸಹ ಸಾರ್ವಜನಿಕವಾಗಿ ಮಾಡುತ್ತಿದ್ದೇನೆ. ಇದನ್ನು ನೀವು ಪರಿಗಣಿಸುತ್ತೀರಾ ಎಂದು ಭಾವಿಸಿದ್ದೇನೆ' ಎಂದು ಉಪಮುಖ್ಯ ಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್‌ ತಡೆ

ನಿರ್ದೇಶಕ ಶಶಾಂಕ್ ಅನೇಕ ಸಿನಿಮಾಗಳನ್ನು ಮಾಡಿದ್ದಾರೆ. ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಸಿಕ್ಸರ್ ಸಿನಿಮಾ ಮೂಲಕ ಶಶಾಂಕ್ ನಿರ್ದೇಶನದ ಜರ್ನಿ ಪ್ರಾರಂಭಿಸಿದ್ದಾರೆ. ಬಳಿಕ ಬಂದ ಮೊಗ್ಗಿನ ಮನಸು ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿತು. ರಾಧಿಕಾ ಪಂಡಿತ್ ಮತ್ತು ಯಶ್ ಜೋಡಿಯ ಈ ಸಿನಿಮಾ ಕನ್ನಡ ಚಿತ್ರಾಭಿಮಾನಿಗಳ ಹೃದಯ ಗೆದ್ದಿತು. ಕೃಷ್ಣ ಲೀಲಾ, ಮುಂಗಾರು ಮಳೆ -2 ಸೇರಿದಂತೆ ಅನೇಕ ಸಿನಿಮಾಗಳನ್ನು ಮಾಡಿದ್ದಾರೆ. ಕೊನೆಯದಾಗಿ ಲವ್ 360 ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಸದ್ಯ ಎರಡು ಸಿನಿಮಾಗಳಲ್ಲಿ ಶಶಾಂಕ್ ಬ್ಯುಸಿಯಾಗಿದ್ದಾರೆ. 
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಆರ್ಯನ್ ಖಾನ್‌ಗೆ ಝೈದ್ ಖಾನ್ ಸಪೋರ್ಟ್; ಆದ್ರೂ ಪಬ್ಲಿಕ್‌ ಪ್ಲೇಸ್‌ನಲ್ಲಿ 'ಮಿಡ್ಲ್ ಫಿಂಗರ್' ಎತ್ತಿದ್ದು ತಪ್ಪು ಅಂತಿರೋ ನೆಟ್ಟಿಗರು!
ರಿಷಬ್ ಶೆಟ್ಟಿ ದೈವದ ಮುಂದೆ ಅತ್ಬಿಟ್ರಾ? ಅಳಬೇಡ ಅಂತ ಸಂತೈಸಿದ್ದೇಕೆ ಪಂಜುರ್ಲಿ ದೈವ?