
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರೂ ಆಗಿದ್ದ ಬಿ.ವಿಜಯ್ ಕುಮಾರ್ (63) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೆಲ ತಿಂಗಳುಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ ತಡ ರಾತ್ರಿ ಎದೆ ನೋವು ಕಾಣಿಸಿಕೊಂಡು ನಿಧರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಮೃತ ವಿಜಯ್ ಕುಮಾರ್ ಅವರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ವಿಷ್ಣುವರ್ಧನ್ ಅಭಿನಯದ ‘ಸಿಂಹಾದ್ರಿಯ ಸಿಂಹ’, ‘ಲಯನ್ ಗಜಪತಿ ರಾವ್’, ‘ಮೌನಗೀತೆ’, ‘ಅವತಾರ ಪುರುಷ’ ಸೇರಿದಂತೆ ಹಲವು ಚಿತ್ರಗಳನ್ನು ಇವರು ನಿರ್ಮಿಸಿದ್ದಾರೆ. ಇನ್ನೂ ಬಿಡುಗಡೆಯಾಗಬೇಕಿರುವ ಸ್ವಚ್ಛ ಭಾರತ ಹೆಸರಿನ ಚಿತ್ರಕ್ಕೂ ಇವರೇ ನಿರ್ಮಾಪಕರಾಗಿದ್ದಾರೆ.
ವಿಜಯ್ ಕುಮಾರ್ ಅವರ ನಿಧನಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ ಸೇರಿದಂತೆ ಚಿತ್ರರಂಗದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಅಂತ್ಯಕ್ರಿಯೆ ಆ.16ರ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಟಿ.ಆರ್.ಮಿಲ್‌ನಲ್ಲಿ ನಡೆಯಲಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.