
ಕರಾವಳಿ ಮೂಲದ ಯುವ ಪ್ರತಿಭೆ ಶ್ರೀಷ ನಟನೆ ಹಾಗೂ ನಿರ್ದೇಶನದ ಚೊಚ್ಚಲ ಚಿತ್ರ ‘ತರಂಗಾಂತರಂಗ’ದ ಮೊದಲ ಟೀಸರ್ ಬಿಡುಗಡೆಯಾಗಿದೆ. ಉಡುಪಿಯ ಬೈಂದೂರು ಮೂಲದ ಯುವಪ್ರತಿಭೆ ಶ್ರೀಷ ಅವರೀಗ 'ತರಂಗಾಂತರಂಗ' ಚಿತ್ರದ ಮೂಲಕ ನಾಯಕ ನಟ ಮತ್ತು ನಿರ್ದೇಶಕನಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ.
ಶ್ರೀಷ ಮಾತನಾಡಿ, ‘ಇದೊಂದು ಪುನರ್ಜನ್ಮದ ಕಥೆ ಹೊಂದಿರುವ ಚಿತ್ರ. ನಾವು ದೇವರಿಗೆ ಕಟ್ಟಿಕೊಂಡ ಹರಕೆ ಅಥವಾ ಸೇವೆಗಳನ್ನು ತೀರಿಸಲು ವಿಫಲವಾದರೆ, ಅದರಿಂದ ಏನು ಆಗಬಹುದು ಎಂಬ ಕಥೆಯ ಎಳೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಹಿಸ್ಟರಿ, ಸಸ್ಪೆನ್ಸ್, ಥ್ರಿಲ್ಲರ್ ಶೈಲಿಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾವನ್ನು ನಿರ್ದೇಶನ ಮಾಡಿ, ತೆರೆ ಮೇಲೆ ಒಂದು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದೇನೆ. ನೋಡುಗರಿಗೆ ಈ ಸಿನಿಮಾ ಹೊಸ ಅನುಭವ ಕೊಡಲಿದೆ’ ಎಂದರು.
ಒಂದು ಒಳ್ಳೆಯ ಅನುಭವ
ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಪ್ರಮೋದ್ ಶೆಟ್ಟಿ, ‘ಯುವ ನಟ, ನಿರ್ದೇಶಕ ಶ್ರೀಷ ಮತ್ತು ಅವರ ತಂಡ ಸೇರಿಕೊಂಡು ಒಂದು ಒಳ್ಳೆಯ ಸಿನಿಮಾ ಮಾಡಿದ್ದಾರೆ. ನಾನು ಈ ಚಿತ್ರತಂಡದ ಭಾಗವಾಗಿರುವುದಕ್ಕೆ ಖುಷಿಯಿದೆ. ಯುನಿಫಾರ್ಮ್ ಧರಿಸಿಕೊಂಡು ಈ ಸಿನಿಮಾದ ಪಾತ್ರದಲ್ಲಿ ಅಭಿನಯಿಸಿದ್ದೇನೆ.ಈ ಚಿತ್ರತಂಡದ ಜೊತೆ ಕೆಲಸ ಮಾಡಿದ್ದು ಒಂದು ಒಳ್ಳೆಯ ಅನುಭವ’ ಎಂದರು.
ನಾಯಕಿಯರಾಗಿ ಚೆರಿಕಾ ಮೂರ್ತಿ ಹಾಗೂ ಯಶಸ್ವಿನಿ ಸ್ವಾಮಿ ಸಾಥ್ ನೀಡಿದ್ದಾರೆ. ರಮೇಶ್ ಪಂಡಿತ್, ಪ್ರಭಾಕರ ಕುಂದರ್, ಲಿಖಿತಾ ಶೆಟ್ಟಿ, ಮುರಳಿ ತಾರಾಗಣದಲ್ಲಿದ್ದಾರೆ. ದಿನೇಶ್ ಮಂಗಳೂರು ಹಾಗೂ ರಾಕೇಶ್ ಪೂಜಾರಿ ಬಣ್ಣಹಚ್ಚಿದ ಕೊನೆಯ ಚಿತ್ರ ಇದಾಗಿದೆ. ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್.ಆರ್.ಕೆ ವಿಶ್ವನಾಥ್ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.