Arjun Gowda: ಬೆಳ್ಳಿಪರದೆ ಮೇಲೆ ಎಂಟ್ರಿ ಕೊಡಲು ಸಜ್ಜಾದ ಪ್ರಜ್ವಲ್ ದೇವರಾಜ್

By Suvarna News  |  First Published Nov 29, 2021, 4:51 PM IST

ಕೋಟಿ ನಿರ್ಮಾಪಕ ರಾಮು ನಿರ್ಮಾಣದ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಪ್ರಿಯಾಂಕಾ ತಿಮ್ಮೇಶ್ ಜೊತೆಯಾಗಿ ನಟಿಸಿರುವ ಅರ್ಜುನ್ ಗೌಡ ಚಿತ್ರ ಡಿಸೆಂಬರ್‌ನಲ್ಲಿ ಬೆಳ್ಳಿಪರದೆ ಮೇಲೆ ಬರಲು ಸಜ್ಜಾಗಿದೆ.


ಕೊರೊನಾ (Corona) ಮುಗಿದ ನಂತರ ಸ್ಯಾಂಡಲ್‌ವುಡ್‌ನಲ್ಲಿ ಹಲವಾರು ಸಿನಿಮಾಗಳು ತೆರೆಕಾಣುತ್ತಿದ್ದು, ಇದೀಗ ಆ ಸಾಲಿಗೆ 'ಅರ್ಜುನ್ ಗೌಡ' (Arjun Gowda) ಚಿತ್ರವು ಒಂದು. ಹೌದು ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ಹಾಗೂ ಪ್ರಿಯಾಂಕಾ ತಿಮ್ಮೇಶ್ (Priyanka Thimmesh) ಜೊತೆಯಾಗಿ ನಟಿಸಿರುವ 'ಅರ್ಜುನ್ ಗೌಡ' ಚಿತ್ರದ ಬಗ್ಗೆ ಪ್ರಜ್ವಲ್ ವಿಶೇಷ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಫಸ್ಟ್‌ಲುಕ್, ಟೀಸರ್, ಹಾಗೂ ಟ್ರೇಲರ್ ಬಿಡುಗಡೆಯಾಗಿ ಸಾಕಷ್ಟು ಗಮನ ಸೆಳೆದಿದೆ. ಆ್ಯಕ್ಷನ್ ಕಥಾಹಂದರವನ್ನು ಹೊಂದಿರುವ ಈ ಚಿತ್ರಕ್ಕೆ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಅದ್ಧೂರಿ ಚಿತ್ರಗಳನ್ನು ನಿರ್ಮಿಸಿ ಹೆಸರಾದ ರಾಮು ಫಿಲಂಸ್ ಸಂಸ್ಥೆಯ ಕೋಟಿ ನಿರ್ಮಾಪಕ ಎಂದೇ ಹೆಸರುವಾಸಿಯಾದ ರಾಮು (Ramu) ಅವರು ಬಂಡವಾಳ ಹೂಡಿದ್ದಾರೆ.

ಆ್ಯಕ್ಷನ್ ಕಥಾಹಂದರ ಹೊಂದಿರುವ 'ಅರ್ಜುನ್ ಗೌಡ' ಚಿತ್ರವು ಡಿಸೆಂಬರ್‌ನಲ್ಲಿ ತೆರೆ ಕಾಣಲಿದೆ ಎಂದು ಪ್ರಜ್ವಲ್ ದೇವರಾಜ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟರ್‌ವೊಂದನ್ನು ಹಂಚಿಕೊಂಡಿದ್ದಾರೆ. ಈಗಾಗಲೇ ಅರ್ಜುನ್ ಗೌಡ ಸಿನಿಮಾದ ಟ್ರೇಲರ್ (Trailer) ರಿವೀಲ್ ಆಗಿದ್ದು, ಬೇರೆ ಭಾಷೆಯ ವಿತರಕರು ಹಾಗೂ ನಿರ್ಮಾಪಕರು ಈ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಲಾಕ್​ಡೌನ್​ ಆಗದೆ ಹೋಗಿದ್ದರೆ ಈ ಚಿತ್ರ ಏಪ್ರಿಲ್​​ನಲ್ಲಿ ಬಿಡುಗಡೆಯಾಗಬೇಕಿತ್ತು. ಅಲ್ಲದೇ ಚಿತ್ರದ ನಿರ್ಮಾಪಕರಾದ ರಾಮು ಅವರು ಕೊರೊನಾಗೆ ಬಲಿಯಾಗಿದ್ದರಿಂದ ಸಿನಿಮಾದ ಬಿಡುಗಡೆಗೆ ತಡವಾಯಿತು. 

Tap to resize

Latest Videos

undefined

ನಂದ ಕಿಶೋರ್ ನಿರ್ದೇಶನದಲ್ಲಿ ಡೈನಾಮಿಕ್ ಪ್ರಿನ್ಸ್ ಹೊಸ ಚಿತ್ರ!

'ಅರ್ಜುನ್ ಗೌಡ' ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣಪತ್ರ (U/A Certificate) ಸಿಕ್ಕಿದ್ದು, ನಿರ್ದೇಶಕ ಶಂಕರ್ (Shankar) ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಕವಿರಾಜ್, ರಾಘವೇಂದ್ರ ಕಾಮತ್, ಶಂಕರ್ ಈ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಈಶ್ವರಿ ಕುಮಾರ್ ಕಲಾ ನಿರ್ದೇಶನ ಹಾಗೂ ಮೋಹನ್, ಕಂಬಿ‌ರಾಜು ಅವರ ನೃತ್ಯ ನಿರ್ದೇಶನ ಅರ್ಜುನ್ ಗೌಡ ಚಿತ್ರಕ್ಕಿದೆ. ಅಲ್ಲದೇ ಸಾಹಸ ನಿರ್ದೇಶಕ ಮಾಸ್ ಮಾದ ಈ ಚಿತ್ರದಲ್ಲಿ ಏಳು ಸಾಹಸ ಸನ್ನಿವೇಶಗಳನ್ನ ಕಂಪೋಸ್ ಮಾಡಿದ್ದಾರೆ. 

ಬಾಲಿವುಡ್​​ನ ರಾಹುಲ್ ದೇವ್, ಸ್ಪರ್ಶ ರೇಖಾ, ಸಾಧುಕೋಕಿಲ, ಕಡ್ಡಿಪುಡಿ ಚಂದ್ರು, ದೀಪಕ್ ಶೆಟ್ಟಿ, ದಿನೇಶ್ ಮಂಗಳೂರು, ಶೋಭಿತ್, ಜೀವನ್, ಹನುಮಂತೇ ಗೌಡ, ಮೋಹನ್ ಜುನೇಜ ಸೇರಿದಂತೆ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಇನ್ನು ಪ್ರಜ್ವಲ್ ದೇವರಾಜ್ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದು, ಕೊನೆಯದಾಗಿ 'ಇನ್ಸ್​ಪೆಕ್ಟರ್​ ವಿಕ್ರಂ' (Inspector Vikram) ಚಿತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ಸಿನಿಪ್ರಿಯರಿಂದ ಮೆಚ್ಚುಗೆಯನ್ನು ಪಡೆದುಕೊಂಡಿತ್ತು. ಹಾಗೂ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾದ 'ಡ್ಯಾನ್ಸ್ ಡ್ಯಾನ್ಸ್' (Dance Dance) ಹೆಸರಿನ ರಿಯಾಲಿಟಿ ಶೋನಲ್ಲಿ ಪ್ರಜ್ವಲ್ ತೀರ್ಪುಗಾರರಾಗಿ ಕಾಣಿಸಿಕೊಂಡಿದ್ದರು.

'ಅರ್ಜುನ್ ಗೌಡ' ನಿರ್ಮಾಪಕ ಕೋಟಿ ಕನಸುಗಾರ ರಾಮು ಬಗ್ಗೆ ಇಂಟ್ರೆಸ್ಟಿಂಗ್ ವಿಚಾರಗಳು!

ಇನ್ನು ಪ್ರಜ್ವಲ್ ತಮ್ಮ 35ನೇ ಚಿತ್ರ 'ಮಾಫಿಯಾ'ದ (Mafia) ಚಿತ್ರೀಕರಣದಲ್ಲಿ ತೊಡಗಿದ್ದು. ಗುರುದತ್‌ ಗಾಣಿಗ (Gurudat Ganiga) ಅವರು ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ, ಪ್ರಜ್ವಲ್ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ (Aditi Prabhudeva) ನಟಿಸುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆಯಿದೆ. ಹಾಗೂ ಖದರ್‌ ಕುಮಾರ್‌ ನಿರ್ದೇಶನದ 'ವೀರಂ' (Veeram) ಸಿನಿಮಾದಲ್ಲಿ  ಪ್ರಜ್ವಲ್​ ದೇವರಾಜ್ ನಟಿಸುತ್ತಿದ್ದು, ಶಿಷ್ಯ ಚಿತ್ರದ ದೀಪಕ್‌ (Deepak) ಈ ಚಿತ್ರದಲ್ಲಿ ಖಡಕ್ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಜ್ವಲ್‌ಗೆ ನಾಯಕಿಯಾಗಿ ಡಿಂಪಲ್ ಕ್ಚೀನ್ ರಚಿತಾ ರಾಮ್‌ (Rachita Ram) ನಟಿಸುತ್ತಿದ್ದಾರೆ.
 

click me!