Shiva Rajkumar: ಡಿಸೆಂಬರ್ 23ಕ್ಕೆ ಓಟಿಟಿಯಲ್ಲಿ ಭಜರಂಗಿ 2 ಸಿನಿಮಾ ರಿಲೀಸ್

By Suvarna NewsFirst Published Dec 19, 2021, 6:15 PM IST
Highlights

ಸ್ಯಾಂಡಲ್‌ವುಡ್‌ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಎ.ಹರ್ಷ ಕಾಂಬಿನೇಷನ್​ನಲ್ಲಿ ಮೂಡಿ ಬಂದಿದ್ದ 'ಭಜರಂಗಿ 2' ಸಿನಿಮಾ ಓಟಿಟಿ ಪ್ಲಾಟ್​ಫಾರ್ಮ್‌ನಲ್ಲಿ ಇದೇ ಡಿಸೆಂಬರ್ 23ರಂದು ಬಿಡುಗಡೆಯಾಗಲಿದೆ. 
 

ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್ ನಟರ ಸಿನಿಮಾಗಳು, ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಒಟಿಟಿ ಪ್ಲಾಟ್ ಫಾರ್ಮ್​ಗೆ (OTT Platform) ಬರುವ ಟ್ರೆಂಡ್ ಹೆಚ್ಚಾಗಿದೆ‌. ಕೋವಿಡ್​ ನಂತರದ ಪರಿಸ್ಥಿತಿಯಲ್ಲಿ ಓಟಿಟಿಗಳ ಕಡೆಗೆ ಜನರ ಆಸಕ್ತಿ ಹೆಚ್ಚಿದೆ. ಇದೀಗ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ಹಾಗೂ ಎ.ಹರ್ಷ (A.Harsha) ಕಾಂಬಿನೇಷನ್​ನಲ್ಲಿ ಮೂಡಿ ಬಂದಿದ್ದ 'ಭಜರಂಗಿ 2' (Bhajarangi 2) ಸಿನಿಮಾ ಒಟಿಟಿಯಲ್ಲಿ ಪ್ರಸಾರವಾಗಲಿದ್ದು, ಥಿಯೇಟರ್​ನಲ್ಲಿ ಈ ಚಿತ್ರವನ್ನು ನೋಡಲು ಮಿಸ್​ ಮಾಡಿಕೊಂಡವರು ಈಗ ಕುಟುಂಬದ ಜೊತೆ ಮನೆಯಲ್ಲಿಯೇ ಕುಳಿತು ನೋಡಬಹುದು.

ಹೌದು! ಬೆಳ್ಳಿಪರದೆಯ ಮೇಲೆ ಮ್ಯಾಜಿಕ್​ ಮಾಡಿದ್ದ ಶಿವಣ್ಣನ ಭಜರಂಗಿಗೆ ಅಭಿಮಾನಿಗಳು​​​ ಜೈಕಾರ ಹಾಕಿದ್ದರು. ಶಿವಣ್ಣನ ನಟನೆಗೆ, ಹರ್ಷ ಡೈರೆಕ್ಷನ್​ಗೆ ಸಖತ್ ರೆಸ್ಪಾನ್ಸ್ ಸಿಕ್ಕಿತ್ತು. ಹಾಗೇ ಬಾಕ್ಸಾಫೀಸಿನಲ್ಲೂ ಸದ್ದು‌ ಮಾಡಿತ್ತು. ಚಿತ್ರಮಂದಿರಗಳಲ್ಲಿ ಯಶಸ್ವಿ 50 ದಿನಗಳನ್ನು ಪೂರೈಸಿದ 'ಭಜರಂಗಿ 2' ಸಿನಿಮಾವನ್ನು ಈಗ ಒಟಿಟಿಯಲ್ಲಿ ನೋಡುವ ಸೌಭಾಗ್ಯ ಅಭಿಮಾನಿಗಳಿಗೆ ಸಿಗಲಿದೆ. ಇದೇ ಡಿಸೆಂಬರ್ 23ರಂದು 'ಜೀ5' (Zee5) ಒಟಿಟಿ ಮೂಲಕ  'ಭಜರಂಗಿ 2' ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾಗೆ ಖ್ಯಾತ ನಿರ್ಮಾಪಕರಾದ ಜಯಣ್ಣ-ಭೋಗೇಂದ್ರ ಬಂಡವಾಳ ಹೂಡಿದ್ದಾರೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್​ ಜನ್ಯಾ (Arjun Janya) ಸಂಗೀತ ನಿರ್ದೇಶನ ಮಾಡಿದ್ದಾರೆ.

ಅಪ್ಪುಗೆ ಭಜರಂಗಿ 2 ನೋಡುವ ಆಸೆ ಇತ್ತು: ಶಿವರಾಜ್‌ಕುಮಾರ್‌

ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಸಖತ್ ಹೈಪ್ ಕ್ರಿಯೇಟ್ ಮಾಡಿದ್ದ ಹಾಗೂ ರೋಮಾಂಚನಗೊಳಿಸುವ ಅದ್ಭುತ ದೃಶ್ಯ ವೈಭವವಿರುವ 'ಭಜರಂಗಿ 2' ಚಿತ್ರ ಅಕ್ಟೋಬರ್ 29ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ, ಎಲ್ಲೆಡೆ ಹೌಸ್​ಫುಲ್​ ಪ್ರದರ್ಶನವಾಗಿ, ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್​ ಸಿಕ್ಕಿತ್ತು. ಈ ಹಿನ್ನಲೆಯಲ್ಲಿ ಹಲವು ಚಿತ್ರಮಂದಿರಗಳಿಗೆ ಶಿವಣ್ಣ ಭೇಟಿ ನೀಡಿದ್ದರು. ಅದಾಗಿ ಕೆಲವೇ ಗಂಟೆಗಳು ಕಳೆಯುವುದರೊಳಗೆ ಕನ್ನಡ ಚಿತ್ರರಂಗದ ಪಾಲಿಗೆ ಕಹಿ ಸುದ್ದಿಯೊಂದು ಸಿಡಿಲಿನಂತೆ ಬಂದೆರಗಿತ್ತು. ಪುನೀತ್​ ರಾಜ್​ಕುಮಾರ್ (Puneeth Rajkumar)​ ಹೃದಯಾಘಾತದಿಂದ ನಿಧನರಾದರು ಎಂಬ ಸುದ್ದಿ ಕೇಳಿ ಎಲ್ಲವೂ ಸ್ತಬ್ದವಾದಂತಾಗಿತ್ತು. ಆ ಘಟನೆ ಬಳಿಕ ಚಿತ್ರಮಂದಿರದ ಕಡೆಗೆ ಬರಲು ಬಹುತೇಕರು ಹಿಂದೇಟು ಹಾಕಿದ್ದರು.



ಕೋವಿಡ್ ಸಂಕಷ್ಟದಲ್ಲಿ ನಿರ್ಮಾಪಕರು ಕಷ್ಟಪಟ್ಟು ಸಿನಿಮಾ ಮಾಡಿದ್ದಾರೆ. ಹೀಗಾಗಿ ಸಿನಿಮಾ ಪ್ರದರ್ಶನ ಮತ್ತೆ ಶುರು ಮಾಡಿ ಎಂದು ಶಿವಣ್ಣ ಅವರು ಹೇಳಿದ ನಂತರವೇ ರಾಜ್ಯದ ಚಿತ್ರಮಂದಿರಗಳಲ್ಲಿ 'ಭಜರಂಗಿ 2' ಚಿತ್ರ ಮರು ಪ್ರದರ್ಶನ ಆರಂಭವಾಗಿತ್ತು. ಪುನೀತ್‌ ರಾಜ್‌ಕುಮಾರ್‌ ನಿಧನದಿಂದ ಆಘಾತಗೊಂಡಿದ್ದ ಸಿನಿಪ್ರೇಕ್ಷಕರು  ಶಿವರಾಜ್‌ ಕುಮಾರ್‌ ಮೇಲಿನ ಪ್ರೀತಿಯಿಂದ ಚಿತ್ರಮಂದಿರಕ್ಕೆ ಮತ್ತೆ ಮರಳಿ ಬಂದಿದ್ದರು. 'ಭಜರಂಗಿ 2' ಚಿತ್ರದಲ್ಲಿ ಜಾಕಿ ಭಾವನಾ (Bhavana), ಸೌರವ್ ಲೋಕೇಶ್ (Sourav Lokesh), ಹಿರಿಯ ನಟಿ ಶ್ರುತಿ  (Shruti), ಚೆಲುವ ರಾಜು (Cheluva Raju), ಶಿವರಾಜ್ ಕೆ.ಆರ್.ಪೇಟೆ, ಕುರಿ ಪ್ರತಾಪ್ ಸೇರಿದಂತೆ ವಿಶೇಷವಾದ ತಾರಾಗಣವಿದೆ. 

Crazy Star Ravichandran: ಡಿಸೆಂಬರ್ 17ಕ್ಕೆ ಓಟಿಟಿಯಲ್ಲಿ ಕನ್ನಡಿಗ ಸಿನಿಮಾ ರಿಲೀಸ್

ಇನ್ನು ಇತ್ತೀಚೆಗೆ ಕ್ರೇಜಿಸ್ಟಾರ್​ ವಿ.ರವಿಚಂದ್ರನ್ (V.Ravichandran)​ ಅಭಿನಯದ 'ಕನ್ನಡಿಗ' (Kannadiga) ಸಿನಿಮಾ ಕೂಡ ಓಟಿಟಿ ಮೂಲಕ ಬಿಡುಗಡೆ ಆಗಿದೆ.  'ಜಟ್ಟ', 'ಮೈತ್ರಿ' ಸಿನಿಮಾಗಳ ಮೂಲಕ ಖ್ಯಾತಿ ಪಡೆದ ಗಿರಿರಾಜ್ (Giriraj)​ ಗಿರಿರಾಜ್​ ಅವರು ಆಕ್ಷನ್ ಕಟ್ ಹೇಳಿರುವ ಈ ಸಿನಿಮಾದಲ್ಲಿ ಲಿಪಿಕಾರ ಗುಣಭದ್ರನ ಪಾತ್ರದಲ್ಲಿ ರವಿಚಂದ್ರನ್​ ಕಾಣಿಸಿಕೊಂಡಿದ್ದಾರೆ. ಕನ್ನಡ ಭಾಷೆ, ಲಿಪಿಯ ಬಗ್ಗೆ ಹಾಗೂ ಇದನ್ನು ಹೇಗೆ ಉಳಿಸಿಕೊಂಡು ಬಂದಿದ್ದೇವೆ, ಬೆಳೆಸುವುದು ಹೇಗೆ ಎನ್ನುವ ವಿಷಯವನ್ನು ಆಧಾರವಾಗಿಟ್ಟುಕೊಂಡು ಗಿರಿರಾಜ್‌ ಅವರು ಕಥೆ ಹೆಣೆದಿದ್ದು, ಸಂಕಮ್ಮಬ್ಬೆ ಪಾತ್ರದಲ್ಲಿ ಪಾವನಾ ಗೌಡ (Pavana Gowda) ನಟಿಸಿದ್ದಾರೆ. ಡಿಸೆಂಬರ್ 17ರಿಂದ ಜೀ5 ಮೂಲಕ ವೀಕ್ಷಣೆಗೆ ಈ ಚಿತ್ರ ಲಭ್ಯ ಆಗಿದೆ.

click me!