ಕೆಜಿಎಫ್-2 ಆಡಿಶನ್ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಜನ

Published : Apr 26, 2019, 03:15 PM ISTUpdated : Apr 26, 2019, 03:54 PM IST
ಕೆಜಿಎಫ್-2 ಆಡಿಶನ್ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಜನ

ಸಾರಾಂಶ

ಕೆಜಿಎಫ್-2 ಆಡಿಶನ್‌ಗೆ ಸಿಕ್ಕಾಪಟ್ಟೆ ರೆಸ್ಪಾನ್ಸ್ | ಮಲ್ಲೇಶ್ವರಂನಲ್ಲಿ ನಡೆದ ಆಡಿಶನ್‌ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಜನ | 

ಸ್ಯಾಂಡಲ್‌ವುಡ್‌ನಲ್ಲಿ ದಾಖಲೆ ಬರೆದ ಸಿನಿಮಾ ಕೆಜಿಎಫ್. ಇದೀಗ ಕೆಜಿಎಫ್-2 ಶೂಟಿಂಗ್ ಶುರುವಾಗಿದೆ. ಈ ಸಿನಿಮಾದಲ್ಲಿ ನಟಿಸಬೇಕೆಂಬುದು ಎಲ್ಲರ ಆಸೆಯಾಗಿರುತ್ತದೆ. 

ರಾಕಿಂಗ್ ಸ್ಟಾರ್ ಯಶ್‌ರೊಂದಿಗೆ ಅಭಿನಯಿಸೋ ಸಿಗುವ ಅವಕಾಶವೆಂದರೆ ಯಾರು ತಾನೇ ಬಿಡುತ್ತಾರೆ ಹೇಳಿ. ಒಂದು ಸಾರಿ ಅವಕಾಶ ಸಿಕ್ಕರೆ, ಸಿಗಲೆಂದು ಕಾಯುತ್ತಿರುತ್ತಾರೆ. ಅದಕ್ಕೆ ಕೆಜಿಎಫ್-2 ನಲ್ಲಿ ಅವಕಾಶ ನೀಡುತ್ತಿದ್ದಾರೆ. ಆಡಿಶನ್‌ಗೆ ಕಲಾವಿದರನ್ನು ಆಹ್ವಾನಿಸಲಾಗಿದೆ. ಮಲ್ಲೇಶ್ವರಂನ GM Rejyoj ಹೊಟೇಲಿನಲ್ಲಿ ಆಡಿಶನ್‌ಗೆ ಕರೆಯಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಭಾರೀ ಜನಸಾಗರವನ್ನು ಕಂಡು ಚಿತ್ರತಂಡವೇ ಅಚ್ಚರಿಗೊಂಡಿದೆ. 

8-16 ವರ್ಷದೊಳಗಿನ ಮಕ್ಕಳು ಹಾಗೂ 25 ವರ್ಷ ಮೇಲ್ಪಟ್ಟ ಯುವಕರನ್ನು ಆಡಿಶನ್‌ನಲ್ಲಿ ಭಾಗವಹಿಸಲು ಕೇಳಿ ಕೊಳ್ಳಲಾಗಿತ್ತು. ಅಲ್ಲಿ ಸೇರಿದ್ದ ಜನರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಟಾಕ್ಸಿಕ್ ಪೋಸ್ಟರ್ ರಿಲೀಸ್ ಮಾಡಿ ಕುತೂಹಲ ಹೆಚ್ಚಿಸಿದ ಯಶ್, ಸಿನಿಮಾ ಬಿಡುಗಡೆ ಕೌಂಟ್‌ಡೌನ್ ಶುರು
ಕನ್ನಡಿಗರ ಪ್ರೀತಿಯ ಪುಟ್ಟಿ ಯಾಕ್ ಹೀಗಾದ್ರು? Rukmini Vasanth ನ್ಯೂ ಲುಕ್ ವೈರಲ್