
ವಿಶ್ವವಿಖ್ಯಾತ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಇದೇ ತಿಂಗಳ 29ರಿಂದ ಮಾರ್ಚ್ 7ರವೆರೆಗ ಚಿತ್ರೋತ್ಸವ ನಡೆಯಲಿದೆ. 15ನೇ ಬೆಂಗಳೂರು ಸಿನಿಮೋತ್ಸವದಲ್ಲಿ ಕನ್ನಡ ಸೇರಿದಂತೆ ವಿಶ್ವದ ಹಲವು ಭಾಷೆಗಳ ಸಿನಿಮಾ ಪ್ರದರ್ಶನಗೊಳ್ಳಲಿವೆ. ಜೊತೆಗೆ ಚಿತ್ರೋತ್ಸವದಲ್ಲಿ ಸ್ಪರ್ಧಾ ವಿಭಾಗವೂ ಇದ್ದು, ಮೂರು ವಿವಿಧ ಸ್ಪರ್ಧಾ ವಿಭಾಗದಲ್ಲಿ ಹಲವು ಕನ್ನಡ ಸಿನಿಮಾಗಳು ಇತರೆ ಭಾಷೆಯ ಸಿನಿಮಾಗಳೊಟ್ಟಿಗೆ ಪ್ರಶಸ್ತಿಗಾಗಿ ಸೆಣೆಸಲಿವೆ.
ಕನ್ನಡ ಸ್ಪರ್ಧಾ ವಿಭಾಗ, ಭಾರತೀಯ ಸ್ಪರ್ಧಾ ವಿಭಾಗ ಹಾಗೂ ಏಷಿಯನ್ ಸ್ಪರ್ಧಾ ವಿಭಾಗ ಎಂಬ ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಕನ್ನಡ ವಿಭಾಗದಲ್ಲಿ ಈ ಬಾರಿ 12 ಸಿನಿಮಾ ಕಣಕ್ಕಿಳಿಯುತ್ತಿವೆ. ಈ ಪೈಕಿ ಟಕ್ಕರ್ ಹಾಗೂ ರನ್ ಆಂಟೋನಿ ಖ್ಯಾತಿಯ ರಘು ಶಾಸ್ತ್ರೀ ನಿರ್ದೇಶನದ 'ಲೈನ್‌ಮ್ಯಾನ್' ಸಿನಿಮಾ ಸ್ಪರ್ಧೆಗಿಳಿಯುತ್ತಿದೆ.
ತ್ರಿಗುಣ್ ನಾಯಕ ನಾಯಕನಾಗಿ ನಟಿಸಿರುವ ಈ ಚಿತ್ರ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಪ್ರದರ್ಶನದ ಜೊತೆಗೆ ಪ್ರಶಸ್ತಿಗಳ ಬೇಟೆಗಿಳಿದಿದೆ. ಭಿನ್ನ, ಡಿಯರ್ ಸತ್ಯ ಸಿನಿಮಾಗಳನ್ನು ನಿರ್ಮಿಸಿರುವ ಪರ್ಪಲ್ ರಾಕ್ ಸಂಸ್ಥೆಯಡಿ ಯತೀಶ್ ವೆಂಕಟೇಶ್, ಗಣೇಶ್ ಪಾಪಣ್ಣ, ಶ್ರೀನಿವಾಸ್ ಬಿಂಡಿಗನವಿಲೆ ಹಾಗೂ ಅಜಯ್ ಅಪರೂಪ್ ಲೈನ್ ಮ್ಯಾನ್ ಚಿತ್ರಕ್ಕೆ ಹಣ ಹಾಕಿದ್ದಾರೆ.
ನಾನು ಯಾವ್ದೇ ವಿಷ್ಯದಲ್ಲಿ ಚೀಟ್ ಮಾಡಲ್ಲ; ರಾಕಿಂಗ್ ಸ್ಟಾರ್ ಯಶ್ ಹೀಗೆ ಹೇಳಿದ್ಯಾಕೆ?
ಆರ್‌ಜಿವಿ ನಿರ್ದೇಶನದ 'ಕೊಂಡ' ಚಿತ್ರ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ತ್ರಿಗುಣ್‌ಗೆ ಇದು ನಾಯಕನಾಗಿ ಮೊದಲ ಚಿತ್ರವಾಗಿದೆ. ಕಾಜಲ್ ಕುಂದರ್ ನಾಯಕಿಯಾಗಿ ಅಭಿನಯಿಸಿದ್ದು, ಹಿರಿಯ ನಟಿ ಬಿ.ಜಯಶ್ರೀ, ಮೈಕೋ ನಾಗರಾಜ್, ಹರಿಣಿ, ಅಂಜಲಿ, ಅಪೂರ್ವಶ್ರೀ ಸೇರಿದಂತೆ ದೊಡ್ಡ ತಾರಾಬಳಗ ಲೈನ್ ಮ್ಯಾನ್ ಚಿತ್ರದಲ್ಲಿದ್ದಾರೆ. ಚಾಮರಾಜನಗರ ಚಂದಕವಾಡಿಯಲ್ಲಿ ಶೂಟಿಂಗ್ ನಡೆಸಲಾಗಿದ್ದು, ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಚಿತ್ರ ತಯಾರಾಗಿದೆ.
ಕಾರಿನ ಪಕ್ಕದಲ್ಲಿದ್ದ ಮಕ್ಕಳ ಬಳಿ ಬಂದು 'ಚುಕ್ಕಿ ತಾರೆ' ಬರೆದ ಸಿಂಗರ್ ನವೀನ್ ಸಜ್ಜು!
ಹಳ್ಳಿ ಕಡೆ ದಿನಾ ಬೀದಿ ದೀಪ ಹಾಕುವ, ಅರಿಸುವ ಹಾಗೂ ವಿದ್ಯುತ್ ಸಂಬಂಧಿಸಿ ತೊಂದರೆ ಸರಿಪಡಿಸುವ 'ಲೈನ್ ಮ್ಯಾನ್' ಸುತ್ತ ಈ ಕಥೆ ನಡೆಯಲಿದೆ. ತ್ರಿಗುಣ್ 'ಲೈನ್ ಮ್ಯಾನ್' ಪಾತ್ರದಲ್ಲಿದ್ದಾರೆ. ಮೂರು ಹಾಡುಗಳಿರುವ ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನೀಡುತ್ತಿದ್ದಾರೆ. ಶಾಂತಿ ಸಾಗರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಪ್ರಚುರ ಪಿ.ಪಿ. , ಜ್ಯೋತಿ ರಘು ಶಾಸ್ತ್ರೀ ಹಾಗೂ ಮಣಿಕಾಂತ್ ಕದ್ರಿ ಅವರ ಸಹ ನಿರ್ಮಾಣವಿದೆ. ಸೆನ್ಸಾರ್ ಪಾಸಾಗಿರುವ ಲೈನ್ ಮ್ಯಾನ್ ಮುಂದಿನ ತೆರೆಗೆ ತರುವ ತಯಾರಿಯಲ್ಲಿದೆ ಚಿತ್ರತಂಡ.
ಕಲರ್ಸ್ ಕನ್ನಡದಲ್ಲಿ ಬಿಗ್ ಬಾಸ್ ಬಳಿಕ ಮತ್ತೊಂದು ಶೋ 'ಶಾಂತಂ ಪಾಪಂ' ಸೀಸನ್ 6 ಶುರು!
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.