ಸ್ಯಾಂಡಲ್‌ವುಡ್ ಖ್ಯಾತ ನಿರ್ಮಾಪಕ ಸಂದೇಶ್ ನಾಗರಾಜ್ ಅವರಿಗೆ ಕೊರೋನಾ ಸೋಂಕು ಇರುವುದು ದೃಢವಾಗಿದ್ದು ಕುಟುಂಬಸ್ಥರು ಮತ್ತು ಆಪ್ತರು ಕ್ವಾರಂಟೈನ್‌ನಲ್ಲಿದ್ದಾರೆ.
ಕನ್ನಡ ಚಿತ್ರರಂಗದ ಹೆಸರಾಂತ ನಿರ್ಮಾಪಕ ಮತ್ತು ಖ್ಯಾತ ಉದ್ಯಮಿ ಸಂದೇಶ್ ನಾಗರಾಜ್ ಅವರಿಗೆ ಒಂದು ವಾರದಿಂದ ಜ್ವರ ಕಾಣಿಸಿಕೊಂಡಿತ್ತು. ಪರೀಕ್ಷೆ ಮಾಡಿಸಿದ ನಂತರ ಕೊರೋನಾ ಪಾಸಿಟಿವ್ ಎಂದು ತಿಳಿದು ಬಂದಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊರೋನಾ ಪಾಸಿಟಿವ್: ನಟ ಧ್ರುವ ಸರ್ಜಾ, ಪತ್ನಿ ಪ್ರೇರಣಾ ಡಿಸ್ಚಾರ್ಜ್!
ಸಂದೇಶ್ ನಾಗರಾಜ್ ಅವರದ್ದು ತುಂಬು ಕುಟುಂಬವಾಗಿದ್ದು, ಮೈಸೂರಿನಲ್ಲಿ ನೆಲೆಸಿದ್ದಾರೆ. ಕುಟುಂಬದ ಸದಸ್ಯರು ಮೈಸೂರಿನ ನಿವಾಸದಲ್ಲಿ ಹೊಂ ಕ್ವಾರಂಟೈನ್‌ಗೆ ಒಳಗಾಗಿದ್ದು, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲಿದ್ದಾರೆ.
ಧ್ರುವ-ಪ್ರೇರಣಾ:
ಕನ್ನಡ ಚಿತ್ರರಂಗದ 'ಪೊಗರು' ಹುಡುಗ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾಗೆ ಕೊರೋನಾ ಪಾಸಿಟಿವ್ ಎಂದು ತಿಳಿದು ಬಂದಿದೆ. ಕೆಲವು ದಿನಗಳ ಕಾಲ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ರೋಗ ಲಕ್ಷಣಗಳು ಇಲ್ಲದ ಕಾರಣ ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈಗ್‌ಗೆ ಒಳಗಾಗಿದ್ದು, ಅಲ್ಲಿಯೇ ಚಿಕಿತ್ಸೆ ಮುಂದುರಿಸಿದ್ದಾರೆ.
ಪ್ರೇಮ್ ತಾಯಿ:
ಕಾಮಾಕ್ಷಿಪಾಳ್ಯದಲ್ಲಿ ನೆಲೆಸಿರುವ ನಟ ನೆನಪಿರಲಿ ಪ್ರೇಮ್ ತಾಯಿಗೆ 66 ವರ್ಷ ಆಗಿದ್ದು, ಕೆಲವು ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು. ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದ ನಂತರ ಕೊರೋನಾ ಸೋಂಕು ಇರುವುದು ಖಚಿತವಾಗಿದೆ. ಕುಟುಂಬಸ್ಥರು ಪರೀಕ್ಷೆ ಮಾಡಿಸಿದ್ದು, ಉಳಿದವರ ರಿಪೋರ್ಟ್ ನೆಗೆಟಿವ್ ಬಂದಿದೆ.
ಒಟ್ಟಿನಲ್ಲಿ ಕೊರೋನಾವೀಗ ಬಾಲಿವುಡ್, ಸ್ಯಾಂಡಲ್‌ವುಡ್‌ಗೂ ಕಾಲಿಟ್ಟಿದ್ದು ಹಲವು ನಟರು, ನಿರ್ದೇಶಕರು ಎಲ್ಲರಲ್ಲಿಯೂ ಕಾಣಿಸಿಕೊಳ್ಳುತ್ತಿದೆ.