
ಪ್ರೇಕ್ಷಕರ ಮುಂದೆ ಇಂದು (ಏ.29) ಮೂರು ಚಿತ್ರಗಳು ಬರುತ್ತಿವೆ. ರಾಘವೇಂದ್ರ ರಾಜ್‌ಕುಮಾರ್ ನಟನೆಯ ‘ರಾಜಿ’, ಸಂಚಾರಿ ವಿಜಯ್ ಅಭಿನಯದ ‘ಮೇಲೊಬ್ಬ ಮಾಯಾವಿ’ ಹಾಗೂ ಅಜಯ್ ರಾವ್ ನಾಯಕನಾಗಿರುವ ‘ಶೋಕಿವಾಲ’ ಚಿತ್ರಗಳು ಥಿಯೇಟರ್‌ಗಳಿಗೆ ಬರುತ್ತಿವೆ.
1. ರಾಜಿ: ಪೋಷಕ ನಟಿ ಪ್ರೀತಿ ಎಸ್ ಬಾಬು ನಿರ್ದೇಶನದ ಸಿನಿಮಾ ಇದು. ಕೌಟುಂಬಿಕ ಕತೆಯನ್ನು ಒಳಗೊಂಡಿರುವ ಸಿನಿಮಾ ಇದಾಗಿದ್ದು, ಎಲ್ಲ ವರ್ಗದ ಪ್ರೇಕ್ಷಕರಿಗೂ ಈ ಸಿನಿಮಾ ಇಷ್ಟವಾಗುತ್ತದೆಂಬ ನಂಬಿಕೆ ಚಿತ್ರತಂಡದ್ದು.
ರಾಘವೇಂದ್ರ ರಾಜ್‌ಕುಮಾರ್ (Raghavendra Rajkumar) ನಟನೆಯ ‘ರಾಜಿ’ (Raaji) ಚಿತ್ರ ಏಪ್ರಿಲ್ 29ಕ್ಕೆ ತೆರೆಗೆ ಬರುತ್ತಿದೆ. ಪ್ರೀತಿ ಎಸ್ ಬಾಬು (Preethi S Babu) ನಿರ್ದೇಶನದ ಈ ಚಿತ್ರದ ಆಡಿಯೋ ಬಿಡುಗಡೆ (Audio Release) ಮಾಡಿ ಶುಭ ಕೋರಿದ್ದು ಶ್ರೀನಗರ ಕಿಟ್ಟಿ (Srinagar Kitty), ವಿಜಯ್ ರಾಘವೇಂದ್ರ (Vijay Raghavendra). ಈ ಸಿನಿಮಾ ನನಗೆ ವಿಶೇಷ. ಏಕೆಂದರೆ, ಇದರ ಮುಹೂರ್ತ ಕಳೆದ ವರ್ಷ ಅಕ್ಟೋಬರ್ 30 ರಂದು ನಿಗದಿಯಾಗಿತ್ತು. ನನ್ನ ತಮ್ಮ ಅಪ್ಪು (Puneeth Rajkumar) ಕ್ಲ್ಯಾಪ್ ಮಾಡಲು ಬರಬೇಕಿತ್ತು.
ಚಿತ್ರದಲ್ಲಿ ಏಳು ಹಾಡುಗಳಿದೆ. ಎಲ್ಲಾ ಹಾಡುಗಳನ್ನು ಡಾ. ಹೆಚ್ ಎಸ್ ವೆಂಕಟೇಶ್ ಮೂರ್ತಿ ಅವರೆ ಬರೆದಿದ್ದಾರೆ ಎಂದು ಸಂಗೀತ ಸಂಯೋಜಕ ಉಪಾಸನ ಮೋಹನ್ ತಿಳಿಸಿದರು.ಚಿತ್ರ ನಿರ್ಮಾಣವಾದ ಬಗ್ಗೆ ಬಸವರಾಜ್ ಮೈಸೂರು ಹಾಗೂ ತಮ್ಮ ಅಭಿನಯದ ಕುರಿತು ಪ್ರತಾಪ್ ಸಿಂಹ ಮಾತನಾಡಿದರು. ಅತಿಥಿಗಳಾಗಿ ಆಗಮಿಸಿದ್ದ ಶ್ರೀನಗರ ಕಿಟ್ಟಿ, ವಿಜಯ ರಾಘವೇಂದ್ರ, ಡಾ||ವಿ.ನಾಗೇಂದ್ರ ಪ್ರಸಾದ್, ಕೆಂಪ್ಪಣ್ಣ ಚೆಟ್ಟಿ, ಮುನಿರಾಜು ರಾಮಯ್ಯ, ತಬಲಾ ನಾಣಿ, ಸಾಗರ್ ಪುರಾಣಿಕ್ ಮುಂತಾದ ಗಣ್ಯರು ಚಿತ್ರತಂಡಕ್ಕೆ ಶುಭ ಕೋರಿದರು.
2. ಮೇಲೊಬ್ಬ ಮಾಯಾವಿ: ಸಂಚಾರಿ ವಿಜಯ್ ನಟನೆಯ ಕೊನೆಯ ಚಿತ್ರವಿದು. ಪತ್ರಕರ್ತ ನವೀನ್ ಕೃಷ್ಣ ಮೊದಲ ಬಾರಿಗೆ ಈ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ದಕ್ಷಿಣ ಕನ್ನಡದಲ್ಲಿರುವ ಹರಳು ಮಾಫಿಯಾ ಸುತ್ತ ಕತೆ ಹೇಳಿರುವ ಸಿನಿಮಾ ಇದು.
‘ಪಶ್ಚಿಮ ಘಟ್ಟಗಳಲ್ಲಿ ನಡೆಯುವ ಹರಳು ಮಾಫಿಯಾದ ಕುರಿತಾದ ಸಿನಿಮಾ ಇದು. ಸಕ್ಕರೆ, ಇರುವೆ ಹಾಗೂ ಸುಲೇಮಾನ್ ಹೀಗೆ ಚಿತ್ರದಲ್ಲಿ ಮೂರು ಪಾತ್ರಗಳು ಬರುತ್ತವೆ. ಸಕ್ಕರೆ ಪಾತ್ರದಲ್ಲಿ ಅನನ್ಯ ಶೆಟ್ಟಿ, ಇರುವೆ ಪಾತ್ರದಲ್ಲಿ ಸಂಚಾರಿ ವಿಜಯ… ಹಾಗೂ ಸುಲೇಮಾನ್ ಪತ್ರದಲ್ಲಿ ಚಕ್ರವರ್ತಿ ಚಂದ್ರಚೂಡ್ ಅಭಿನಯಿಸಿದ್ದಾರೆ. ಒಬ್ಬರಿಗಿಂತ ಒಬ್ಬರ ಅಭಿನಯ ಅದ್ಭುತ’ ಎಂದು ನವೀನ್ ಕೃಷ್ಣ ಹೇಳಿದರು.
3. ಶೋಕಿವಾಲ: ಅಜಯ್ ರಾವ್ ನಾಯಕನಾಗಿರುವ ಈ ಚಿತ್ರವನ್ನು ಜಾಕಿ ನಿರ್ದೇಶನ ಮಾಡಿದ್ದಾರೆ. ಸಂಜನಾ ಆನಂದ್ ಚಿತ್ರದ ನಾಯಕಿ. ಮನರಂಜನೆಯ ಪ್ರಧಾನ ಸಿನಿಮಾ ಇದಾಗಿದೆ.
ಚಿತ್ರದ ನಾಯಕಿಯಾಗಿ ಸಂಜನಾ ಆನಂದ್ ನಟಿಸಿದ್ದಾರೆ. ಉಳಿದಂತೆ ಶರತ್ ಲೋಹಿತಾಶ್ವ , ಗಿರೀಶ್ ಶಿವಣ್ಣ , ತಬಲಾ ನಾಣಿ, ಮುನಿರಾಜ್, ಪ್ರಮೋದ್ ಶೆಟ್ಟಿ, ಅರುಣ ಬಾಲರಾಜ್, ವಾಣಿ, ಚಂದನ, ಲಾಸ್ಯ, ನಾಗರಾಜಮೂರ್ತಿ ಮುಂತಾದವರು ಚಿತ್ರದ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಶ್ರೀಧರ್ ವಿ ಸಂಭ್ರಮ… ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಜಯಂತ್ ಕಾಯ್ಕಿಣಿ, ನಾಗೇಂದ್ರಪ್ರಸಾದ್, ಚೇತನ್ ಕುಮಾರ್ ಅವರು ಹಾಡುಗಳಿಗೆ ಸಾಹಿತ್ಯ ನೀಡಿದ್ದಾರೆ. ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದಿದ್ದಾರೆ. ಚಂದ್ರಶೇಖರ್ ಚಿತ್ರವನ್ನು ನಿರ್ಮಿಸಿದ್ದಾರೆ.
"
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.