500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರು ಪೋಷಕ ನಟನಾಗಿ ಚಂದನವನದಲ್ಲಿ ಗುರುತಿಸಿಕೊಂಡಿದ್ದರು ಮತ್ತು ಹಿರಿತೆರೆ, ಕಿರುತೆರೆಯಲ್ಲಿಯೂ ಕೆಲಸ ಮಾಡಿದ್ದಾರೆ.
ಬೆಂಗಳೂರು: ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಮಧ್ಯರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 75 ವರ್ಷದ ಬ್ಯಾಂಕ್ ಜನಾರ್ಧನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಕುಟುಂಬಸ್ಥರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಂದನವನದಲ್ಲಿ ಪೋಷಕ ನಟನಾಗಿಯೇ ಗುರುತಿಸಿಕೊಂಡಿದ್ದು, ಸುಮಾರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು. 2023ರ ಸೆಪ್ಟಂಬರ್ 26ರಂದು ಹೃದಯಘಾತವಾಗಿತ್ತು. ನಂತರ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದರು.1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಬ್ಯಾಂಕ್ ಜನಾರ್ಧನ್ 1991ರವರೆಗೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ತದನಂತರ ಬಣ್ಣದ ಲೋಕದಿಂದ ದೂರ ಉಳಿದುಕೊಂಡಿದ್ದರು. ಉಪೇಂದ್ರ ನಿರ್ದೇಶನದ ಶ್, ತರ್ಲೆ ನನ್ ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಜೀ ಬೂಂಬಾ, ಗಣೇಶ ಸುಬ್ರಮಣ್ಯ, ಕೌರವ ಸೇರಿದಂತೆ 500ಕ್ಕೂ ಅಧಿಕ ಸಿನಿಮಾಗಳಲ್ಲಿ ಜನಾರ್ಧನ್ ನಟಿಸಿದ್ದಾರೆ. ಹಿರಿತೆರೆ ಜೊತೆ ಕಿರುತೆರೆಯಲ್ಲಿಯೂ ಬ್ಯಾಂಕ್ ಜನಾರ್ಧನ್ ಕೆಲಸ ಮಾಡಿದ್ದಾರೆ. ಪಾಪ ಪಾಂಡು, ಜೋಕಾಲಿ, ರೋಬೋ ಫ್ಯಾಮಿಲಿ, ಮಾಂಗಲ್ಯ ಧಾರಾವಾಹಿಗಳಲ್ಲಿಯೂ ಬ್ಯಾಂಕ್ ಜನಾರ್ಧನ್ ನಟಿಸಿದ್ದರು. 1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ್ದ ಬ್ಯಾಂಕ್ ಜನಾರ್ಧನ್ ತಮ್ಮ ವಿದ್ಯಾಭ್ಯಾಸವನ್ನೆಲ್ಲಾ ಬೆಂಗಳೂರಿನಲ್ಲಿಯೇ ಪೂರೈಸಿದ್ದರು. ರಂಗಭೂಮಿ ಕಲಾವಿದರಾಗಿ ದೊಡ್ಡ ಮಟ್ಟದ ಹೆಸರು ಗಳಿಸಿದ್ದ ಅವರು, ಕನ್ನಡದ 60ಕ್ಕೂ ಅಧಿಕ ಚಿತ್ರಗಳು ಹಾಗೂ ಟಿವಿ ಸಿರಿಯಲ್‌ಗಳಲ್ಲಿ ನಟಿಸಿ ಜನಪ್ರಿಯರಾಗಿದ್ದರು.
ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟರಾಗಿ ಗುರುತಿಸಿಕೊಂಡ ಇವರು, ದೊಡ್ಡಣ್ಣ, ಟೆನ್ನಿಸ್ ಕೃಷ್ಣ ಅವರ ಸಮಕಾಲೀನರು ಅವರೊಂದಿಗೆ ಮಾತ್ರವಲ್ಲದೆ, ತಮ್ಮ ನಂತರ ಬಂದ ಹಾಸ್ಯನಟರಾದ ಸಾಧುಕೋಕಿಲ, ಬುಲೆಟ್ ಪ್ರಕಾಶ್ ಸೇರಿದಂತೆ ಇನ್ನೂ ಹಲವರೊಂದಿಗೆ ನಟಿಸಿ ತಮ್ಮ ಛಾಪು ಮೂಡಿಸಿದ್ದರು. 2005ರ ನ್ಯೂಸ್, 1993ರ ಶ್ ಹಾಗೂ 1992ರಲ್ಲಿ ಬಿಡುಗಡೆಯಾದ ತರ್ಲೆ ನನ್ಮಗ ಚಿತ್ರದಲ್ಲಿನ ಇವರ ಪಾತ್ರಗಳನ್ನು ಇಂದಿಗೂ ಜನ ನೆನಪಿಸಿಕೊಳ್ಳುತ್ತಾರೆ.
1991ರಲ್ಲಿ ಕಾಶಿನಾಥ್ ಅವರ ಅಜಗಜಾಂತರ ಚಿತ್ರದ ಮೂಲಕ ಬ್ಯಾಂಕ್ ಜನಾರ್ಧನ್, ಕನ್ನಡ ಚಿತ್ರರಂಗಕ್ಕೆ ಪೋಷಕ ಕಲಾವಿದರಾಗಿ ಕಾಲಿಟ್ಟಿದ್ದರು