ಸ್ಯಾಂಡಲ್‌ವುಡ್ ಹಿರಿಯ ನಟಿ ಲೀಲಾವತಿ ಬಚ್ಚಲು ಮನೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಈ ಸಂದರ್ಭದಲ್ಲಿಯೇ ಬಚ್ಚಲು ಮನೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದಾರೆ. ನಟಿಗೆ ಅಗತ್ಯ ಚಿಕಿತ್ಸೆ ಕೊಡಿಸಲಾಗಿದ್ದು, ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆಂದು ಲೀಲಾವತಿ ಪುತ್ರ ವಿನೋದ್ ರಾಜ್ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನ ಉತ್ತರ ತಾಲೂಕಿನ ಸೋಲದೇವನಹಳ್ಳಿಯ ತಮ್ಮ ತೋಟದ ಮನೆಯಲ್ಲಿ ವಾಸಿಸುತ್ತಿರುವ ಹಿರಿಯ ನಟಿ ಕಾಲು ಜಾರಿ ಬಿದ್ದು ಕಾಲು, ಬೆನ್ನಿಗೆ ಗಾಯವಾಗಿದೆ. ವೈದ್ಯರು ಒಂದು ತಿಂಗಳು ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.
ರಸ್ತೆಗಿಳಿದು ಕ್ರಿಮಿನಾಶಕ ಸಿಂಪಡಿಸಿದ ಕನ್ನಡದ ಹಿರಿಯ ನಟಬಚ್ಚಲು ಮನೆಯಲ್ಲಿ ಬಿದ್ದ ತಕ್ಷಣ ಲೀಲಾವತಿ ಅವರು ಬಾಗಿಲು ತೆಗೆಯಲೂ ಸಾಧ್ಯವಾಗಿರಲಿಲ್ಲ. ಸುಮಾರು ಒಂದು ಅರ್ಧ-ಮುಕ್ಕಾಲು ಗಂಟೆ ಒದ್ದಾಡಿದ್ದಾರೆ. ಜೋರಾಗಿ ಕೂಗಿದ್ದಾರೆ, ಯಾರನ್ನೂ ಕರೆಯಲು ಸಾಧ್ಯವಾಗಿಲ್ಲ. ಅಲ್ಲಿಯೇ ಕೆಲವು ಹೊತ್ತು ನೋವಿನಿಂದ ನರಳಾಡಿದ್ದಾರೆ. ಬಳಿಕ ನಿಧಾನವಾಗಿ ಬಾಗಿಲು ತೆಗೆದು ಹೊರಬಂದಿದ್ದಾರೆ ಎಂದು ವಿನೋದ್ ರಾಜ್ ಹೇಳಿದ್ದಾರೆ.
ಮೂರು ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಮಿಂಚಿದ ಲೀಲಾವತಿ ಅವರಿಗೆ 83 ವರ್ಷ. ಆದಷ್ಟು ಬೇಗ ನಟಿ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ.
ಕೆಲವು ದಿನಗಳ ಹಿಂದೆ ನಟ ವಿನೋದ್ ರಾಜ್ ಸೈಬರ್ ಕ್ರೈಂ ಮೆಟ್ಟಿಲು ಏರಿದ್ದು. ತಮ್ಮ ವೈಯಕ್ತಿಕ ಜೀವನದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಕೆಲವು ಕಿಡಿಗೇಡಿಗಳು ಇಲ್ಲಸಲ್ಲದ ಸುಳ್ಳು ಸುದ್ದಿ ಹರಡುತ್ತಿದ್ದಾರೆಂದು ಆರೋಪಿಸಿ, ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಬೆಂಗಳೂರಿನ ಯಶವಂತಪುರ ಠಾಣೆ ಪೊಲೀಸ್ ವಶದಲ್ಲಿದ್ದಾನೆ ಎನ್ನಲಾಗಿದೆ.