
ಸ್ಯಾಂಡಲ್‌ವುಡ್ ಡೈರೆಕ್ಟರ್ ಯೋಗರಾಜ್ ಭಟ್ (Yogaraj Bhat) ನಿರ್ದೇಶಿಸಿ, ಸೂರಜ್ ಪ್ರೊಡಕ್ಷನ್ನಲ್ಲಿ ರಮೇಶ್ ರೆಡ್ಡಿ ನಂಗ್ಲಿ ನಿರ್ಮಾಣ ಮಾಡುತ್ತಿರುವ 'ಗಾಳಿಪಟ 2' (Galipata 2) ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಇದರ ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದೆ. ಹೌದು! 'ಗಾಳಿಪಟ 2' ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ ಎಂದು ನಿರ್ದೇಶಕ ಯೋಗರಾಜ್ ಭಟ್ ತಿಳಿಸಿದ್ದಾರೆ.
ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಫೋಸ್ಟ್ ಮಾಡಿರುವ ಅವರು, 'ನಮಸ್ತೆ, 'ಗಾಳಿಪಟ 2' ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಅತೀ ಶೀಘ್ರದಲ್ಲೇ ಬಾಕಿ ಸುದ್ದಿ' ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಅವರು ಚಾಲನೆ ನೀಡಲಿದ್ದಾರೆ.
2008ರಲ್ಲಿ ಬಿಡುಗಡೆಯಾಗಿದ್ದ ಗಾಳಿಪಟ (Galipata) ಸಿನಿಮಾ ಸೂಪರ್ ಹಿಟ್ ಆಗಿತ್ತು. ಆ ಚಿತ್ರದಲ್ಲಿ ಗಣೇಶ್, ದಿಗಂತ್ ಮತ್ತು ರಾಜೇಶ್ ಕೃಷ್ಣನ್ ಅಭಿನಯ ಪ್ರೇಕ್ಷಕರ ಮನಸೂರೆಗೊಂಡಿತ್ತು. ಹಾಗೂ ಅನಂತ್‌ನಾಗ್ (Ananth Nag), ಪದ್ಮಜಾ ರಾವ್, ಸುಧಾ ಬೆಳವಾಡಿ, ರಂಗಾಯಣ ರಘು (Rangayana Raghu) ಅವರ ತಾರಾಗಣ ಇದ್ದ ಈ ಚಿತ್ರ ಪ್ರೇಕ್ಷಕರನ್ನು ಮೋಡಿ ಮಾಡಿತ್ತು.ಹಾಗಾಗಿ 'ಗಾಳಿಪಟ 2' ಚಿತ್ರದಲ್ಲೂ ಅವರೇ ನಟಿಸುತ್ತಿದ್ದಾರೆ. ಅನಂತ್‌ನಾಗ್ ಈ ಸಿನಿಮಾದಲ್ಲಿ ಕನ್ನಡ ಮೇಷ್ಟ್ರಾಗಿ ನಟಿಸಿದ್ದಾರೆ ಎನ್ನುವುದನ್ನು ಭಟ್ಟರು ಈ ಹಿಂದೆಯೇ ಬಹಿರಂಗಪಡಿಸಿದ್ದರು.
ತಮಾಷೆ, ಭಾವುಕತೆ ನನ್ನ ಟ್ರಂಪ್‌ಕಾರ್ಡ್: ಗಣೇಶ್
ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ದೂದ್ ಪೇಡ ದಿಗಂತ್ ಹಾಗೂ ನಿರ್ದೇಶಕ ಪವನ್ ಕುಮಾರ್ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು 'ಗಾಳಿಪಟ' ಚಿತ್ರದಲ್ಲಿ ನಟಿಸಿದ್ದ ರಾಜೇಶ್ ಕೃಷ್ಣನ್ ಬದಲು 'ಲೂಸಿಯ' ನಿರ್ದೇಶಕ ಪವನ್ ಕುಮಾರ್ ಅಭಿನಯಿಸುತ್ತಿದ್ದಾರೆ. ನಿರ್ದೇಶಕ ಪವನ್ ಕುಮಾರ್ ಈ ಹಿಂದೆ ಯೋಗರಾಜ್ ಭಟ್ಟರ 'ಮನಸಾರೆ' ಮತ್ತು 'ಪಂಚರಂಗಿ' ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಿತ್ರದ ನಾಯಕಿಯರಾಗಿ ವೈಭವಿ, ಸಂಯುಕ್ತ ಮೆನನ್, ಶರ್ಮಿಳಾ ಮಾಂಡ್ರೆ ಕಾಣಿಸಿಕೊಂಡಿದ್ದಾರೆ. ಸಂತೋಷ್ ರೈ ಪಾತಾಜೆ ಸಿನಿಮಾಟೋಗ್ರಫಿ, ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.
ವಿದೇಶದಲ್ಲಿ ಪುತ್ರನ ಭಾವ ಚಿತ್ರವಿರುವ ಗಾಳಿಪಟ ಹಾರಿಸಿದ ಗಣೇಶ್!
ಇನ್ನು 'ಗಾಳಿಪಟ' ದಶಕದ ಹಿಂದಿನ ಯಂಗ್‌ಸ್ಟರ್ಸ್‌ಗೆ ಇಷ್ಟವಾಗೋ ಹಾಗಿತ್ತು. ಈ ಸಲದ 'ಗಾಳಿಪಟ 2' ಯೋಗರಾಜ ಭಟ್ಟರ ಬೆಸ್ಟ್ ಸಿನಿಮಾಗಳಲ್ಲೇ ಬೆಸ್ಟ್. ಕತೆ, ಸಂಭಾಷಣೆಗಳೆಲ್ಲ ಅದ್ಭುತ ಅನ್ನುವ ಹಾಗಿವೆ. ನನ್ನ ಪಾತ್ರವೂ ಈ ಕಾಲದವರಿಗೆ ಇಷ್ಟವಾಗುವ ಹಾಗಿದೆ. ಅದಕ್ಕೂ ಮೊದಲು ನನ್ನ 'ಸಖತ್' ಸಿನಿಮಾ ರಿಲೀಸ್ ಆಗುತ್ತೆ ಎಂದು ಚಿತ್ರದ ನಾಯಕ ಗೋಲ್ಡನ್ ಸ್ಟಾರ್ ಗಣೇಶ್ ಈ ಹಿಂದೆ ತಿಳಿಸಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.