ದಿನದಿಂದ ದಿನಕ್ಕೆ ಹೆಚ್ಚುತ್ತಿದೆ 'ಕಾಂತಾರ' ಕಲೆಕ್ಷನ್; ಹಿಂದಿ ಮಂದಿಯ ನಿದ್ದೆಗೆಡಿಸಿದ ರಿಷಬ್ ಶೆಟ್ಟಿ

By Shruiti G Krishna  |  First Published Oct 17, 2022, 12:07 PM IST

ಕಾಂತಾರ ಮುಂಬೈನಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. 3ನೇ ದಿನವೂ ಜನ ಮುಗಿ ಬಿದ್ದು ಸಿನಿಮಾ ವೀಕ್ಷಿಸಿದ್ದಾರೆ. 


ಭಾರತೀಯ ಸಿನಿಮಾರಂಗದಲ್ಲಿ ಈಗ ಕಾಂತಾರ ಸಿನಿಮಾದೇ ಹವಾ. ಎಲ್ಲಾ ಭಾಷೆಗಳಿಂದನೂ ಕಾಂತಾರ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರೇಕ್ಷಕರ ಜೊತೆಗೆ ಸಿನಿ ಸೆಲೆಬ್ರಿಟಿಗಳು ಸಹ ರಿಷಬ್ ಶೆಟ್ಟಿ ಕಾಂತಾರಗೆ ಫಿದಾ ಆಗಿದ್ದಾರೆ. ಈಗಾಗಲೇ ಅನೇಕ ಸ್ಟಾರ್ಸ್ ಕಾಂತಾರ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಬಾಕ್ಸ್ ಆಫೀಸ್ ನಲ್ಲೂ ಕಾಂತಾರ ಭರ್ಜರಿ ಕಲೆಕ್ಷನ್ ಮಾಡಿದೆ. ಸೆಪ್ಟಂಬರ್ 30ರಂದು ತೆರೆಗೆ ಬಂದ ಬಂದ ಸಿನಿಮಾ ಇಂದಿಗೂ ಬಹುತೇಕ ಕಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿದ್ದ ಕಾಂತಾರಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದಂತೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಿ ಸದ್ದು ಮಾಡುತ್ತಿದೆ. 

ಕಾಂತಾರ ಮುಂಬೈನಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. 3ನೇ ದಿನವೂ ಜನ ಮುಗಿ ಬಿದ್ದು ಸಿನಿಮಾ ವೀಕ್ಷಿಸಿದ್ದಾರೆ.  ಭಾನುವಾರ (ಅಕ್ಟೋಬರ್ 16) ಸಹ ಕಾಂತಾರ ಸಿನಿಮಾಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕನ್ನಡದ ಕಾಂತಾರ ಅಬ್ಬರ ಬಾಲಿವುಡ್ ಮಂದಿಯ ನಿದ್ದೆ ಗೆಡಿಸಿದೆ. ಈಗಾಗಲೇ ದಕ್ಷಿಣ ಭಾರತೀಯ ಸಿನಿಮಾಗಳ ಅಬ್ಬರಕ್ಕೆ ಬಾಲಿವುಡ್ ತತ್ತರಿಸಿದೆ. ಇದೀಗ ಕಾಂತಾರ ಹವಾ ಕೂಡ ನಡುಕ ಹುಟ್ಟಿಸಿದೆ. ಕಾಂತಾರ ಹಿಂದಿಯಲ್ಲಿ ಮೊದಲ ದಿನದಿಂದ ಉತ್ತಮ ಕಲೆಕ್ಷನ್ ಮಾಡಿದೆ. ದಿನದಿಂದ ದಿನಕ್ಕೆ ಕಾಂತಾರ ಕಲೆಕ್ಷನ್ ಹೆಚ್ಚಾಗುತ್ತಿದೆ. ಮೊದಲ ದಿನಕ್ಕಿಂತ ಎರಡು ಮತ್ತು ಮೂರನೇ ದಿನ ಕೂಡ ಹೆಚ್ಚಾಗಿದೆ. 

Tap to resize

Latest Videos

ಹಿಂದಿಯಲ್ಲಿ ಮೊದಲ ದಿನ ಕಾಂತಾರ 1.27 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ದಿನ 2.75 ಕೋಟಿ ರೂಪಾಯಿಗೆ ಏರಿಕೆ ಆಯಿತು. ಇನ್ನು 3ನೇ ದಿನ ಭಾನುವಾರ ಕೂಡ ಭರ್ಜರಿ ಕಲೆಕ್ಷನ್​ ಆಗಿದ್ದು, ಅಧಿಕೃತ ಲೆಕ್ಕ ಎಷ್ಟು ಎಂಬುದು ಸದ್ಯದಲ್ಲೇ ರಿವೀಲ್​ ಆಗಲಿದೆ. ಈ ಕಲೆಕ್ಷನ್ ಸಲ್ಮಾನ್​ ಖಾನ್​ ಮತ್ತು ಚಿರಂಜೀವಿ ನಟಿಸಿದ್ದ ಗಾಡ್​ ಫಾದರ್ ಚಿತ್ರವನ್ನು ಹಿಂದಿಕ್ಕಿದೆ. ಹಿಂದಿಯಲ್ಲಿ ಚಿರು ಸಿನಿಮಾ ಒಟ್ಟಾರೆ ಗಳಿಸಿದ್ದು 9.03 ಕೋಟಿ ರೂಪಾಯಿ ಮಾತ್ರ. ಆದರೆ ಎರಡು ದಿನಕ್ಕೆ ಕಾಂತಾರ 4.02 ಕೋಟಿ ರೂಪಾಯಿ ಬಾಚಿಕೊಂಡಿದೆ. ಹಾಗಾಗಿ ಗಾಡ್ ಫಾದರ್ ಒಟ್ಟು ಕಲೆಕ್ಷನ್ ಅನ್ನು ಹಿಂದಿಕ್ಕುವುದರಲ್ಲಿ ಯಾವುದೇ ಅನುಮಾನ ವಿಲ್ಲ. 

ರಿಷಬ್ ಶೆಟ್ಟಿ ನೀವು ಅದ್ಭುತ; 'ಕಾಂತಾರ' ನೋಡಿ ವಿಮರ್ಶೆ ಮಾಡಿದ ಅನುಷ್ಕಾ ಶೆಟ್ಟಿ

ಅತೀ ಹೆಚ್ಚು ರೇಟಿಂಗ್ ಪಡೆದ ಭಾರತೀಯ ಸಿನಿಮಾ 

ರಿಷಬ್ ಶೆಟ್ಟಿ ಕಾಂತಾರ ಮತ್ತೊಂದು ದಾಖಲೆ ಮಾಡಿದೆ. ರೇಟಿಂಗ್ ವಿಚಾರದಲ್ಲಿ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಸಿನಿಮಾವನ್ನು ಹಿಂದಿಕ್ಕಿದೆ. ಹೌದು, ಭಾರತದಲ್ಲಿ ಅತೀ ಹೆಚ್ಚು ರೇಟಿಂಗ್ ಪಡೆದ ಸಿನಿಮಾವಾಗಿ ಹೊರಹೊಮ್ಮಿದೆ ಕಾಂತಾರ.  IMDb ನಲ್ಲಿ ಅತಿ ಹೆಚ್ಚು ರೇಟಿಂಗ್ ಪಡೆದ ಭಾರತೀಯ ಸಿನಿಮಾವಾಗಿದೆ ಕಾಂತಾರ.  IMDbಯಲ್ಲಿ ಕಾಂತಾರ ಸಿನಿಮಾಗೆ 9.6 ರೇಟಿಂಗ್ ನೀಡಲಾಗಿದೆ. ಅತೀ ಹೆಚ್ಚು ರೇಟಿಂಗ್ ಪಡೆದ ಸಿನಿಮಾ ಇದಾಗಿದೆ. ಅಂದಹಾಗೆ ಕೆಜಿಎಫ್-2 ಸಿನಿಮಾಗೆ 10ಕ್ಕೆ 8.4 ನೀಡಲಾಗಿತ್ತು. ಇನ್ನು ಆರ್ ಆರ್ ಆರ್ ಸಿನಿಮಾಗೆ 10ಕ್ಕೆ 8 ರೇಟಿಂಗ್ ನೀಡಲಾಗಿತ್ತು. ಇದೀಗ ಕಾಂತಾರ ಅತೀ ಹೆಚ್ಚು ರೇಟಿಂಗ್ ಪಡೆಯುವ ಮೂಲಕ ದಾಖಲೆ ನಿರ್ಮಿಸಿದೆ.

* version* springs a big surprise, as biz jumps on Day 2 [+ 116.54%]... Although the 2-day total may seem low, the solid growth and trending are clear indicators that it will score on Day 3... Fri 1.27 cr, Sat 2.75 cr. Total: ₹ 4.02 cr. biz. Nett BOC. pic.twitter.com/Lzx5rmrAM7

— taran adarsh (@taran_adarsh)

ಹಿಂದಿ, ತಮಿಳು, ತೆಲುಗಲ್ಲೂ ‘ಕಾಂತಾರ’ ಸಂಚಲನ: ಅಭಿಮಾನಿಗಳು ಫಿದಾ

 ಕಾಂತಾರ ಬಗ್ಗೆ

ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆ ಕಿಶೋರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಸಪ್ತಮಿ ಗೌಡ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್ ಗಮನಾರ್ಹವಾಗಿದೆ. ಸ್ಯಾಂಡಲ್ ವುಡ್‌ನ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಕಾಂತಾರ ಮೂಡಿಬಂದಿದೆ. 

click me!