Karnataka Film Chamber Of Commerce: ಬೇಡಿಕೆಗಳಿಗೆ ಸಮ್ಮತಿಸಿದ ಸಿಎಂಗೆ ಚಿತ್ರರಂಗದಿಂದ ಧನ್ಯವಾದ

By Kannadaprabha News  |  First Published Mar 6, 2022, 12:02 PM IST

ಕನ್ನಡ ಚಿತ್ರರಂಗದ ಮನವಿಗೆ ಸ್ಪಂದಿಸಿ, ಹಲವು ಬೇಡಿಕೆಗಳನ್ನು ಈಡೇರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಚಿತ್ರೋದ್ಯಮದ ಪರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಧನ್ಯವಾದ ಸಲ್ಲಿಸಿದೆ.


ಬೆಂಗಳೂರು (ಮಾ.06): ಕನ್ನಡ ಚಿತ್ರರಂಗದ (Sandalwood) ಮನವಿಗೆ ಸ್ಪಂದಿಸಿ, ಹಲವು ಬೇಡಿಕೆಗಳನ್ನು ಈಡೇರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರಿಗೆ ಚಿತ್ರೋದ್ಯಮದ ಪರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber Of Commerce) ಧನ್ಯವಾದ ಸಲ್ಲಿಸಿದೆ. ಈ ಕುರಿತು ಮಾತನಾಡಿದ ಮಂಡಳಿ ಅಧ್ಯಕ್ಷ ಜೈರಾಜ್‌ (Jairaj), ‘ಮುಖ್ಯಮಂತ್ರಿಗಳಿಗೆ ಚಿತ್ರರಂಗದ ಮೇಲೆ ಅಪಾರವಾದ ಪ್ರೀತಿ ಮತ್ತು ಅಭಿಮಾನ ಇದೆ. ಚಿತ್ರರಂಗದವರು ಯಾವಾಗ ಬೇಕಾದರೂ ಹೋಗಿ ಭೇಟಿ ಮಾಡಿದರೂ ನಮ್ಮ ಮನವಿಯನ್ನು ಸ್ವೀಕರಿಸಿದ್ದಾರೆ’ ಎಂದು ಹೇಳಿದರು.

ಶನಿವಾರ ಬೆಂಗಳೂರಿನ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಚಿತ್ರರಂಗವನ್ನು ಕೈಗಾರಿಕಾ ವಲಯ ಎಂದು ಘೋಷಿಸುವುದು, ಚಿತ್ರರಂಗದವರಿಗೆ ವಸತಿ ಸೌಲಭ್ಯ, ರಾಜ್ಯದ ಚಿತ್ರಮಂದಿರಗಳ ಆಸ್ತಿ ತೆರಿಗೆ ಹಾಗೂ ಸಿನಿಮಾ ಪ್ರದರ್ಶನದ ಶುಲ್ಕದಲ್ಲಿ ವಿನಾಯಿತಿ, ರಾಜ್ಯದಲ್ಲಿ ಸಣ್ಣ ಚಿತ್ರಮಂದಿರಗಳ ನಿರ್ಮಾಣಕ್ಕೆ ನಿಯಮ ಸರಳೀಕರಣ ಸೇರಿದಂತೆ ಹಲವಾರು ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಮುಂದೆ ಸಲ್ಲಿಸಿದ್ದೇವೆ. ಶೀಘ್ರವೇ ನಮ್ಮ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ’ ಎಂದು ಜೈರಾಜ್‌ ಹೇಳಿದರು.

Tap to resize

Latest Videos

ಪತ್ರಿಕಾಗೋಷ್ಠಿಯಲ್ಲಿ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ್‌, ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್‌ ಕುಮಾರ್‌, ವಾಣಿಜ್ಯ ಮಂಡಳಿಯ ಉಪಾಧ್ಯಕ್ಷ ಉಮೇಶ್‌ ಬಣಕಾರ್‌, ಗೌರವ ಕಾರ್ಯದರ್ಶಿ ಎನ್‌.ಸುರೇಶ್‌, ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಸೇರಿದಂತೆ ಹಲವರು ಉಪಸ್ಥಿತರಿದ್ದರು.

BIFFES: ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪುನೀತ್‌ ರಾಜ್‌ಕುಮಾರ್‌ ಸ್ಮರಣೆ

ಈ ವರ್ಷದಿಂದ 200 ಸಿನಿಮಾಗಳಿಗೆ ಸಬ್ಸಿಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಾರಿಯ ಬಜೆಟ್‌ನಲ್ಲಿ ಚಿತ್ರರಂಗಕ್ಕೆ ಸಿಹಿ ಸುದ್ದಿ ನೀಡಿದ್ದಾರೆ. ಪ್ರತಿ ವರ್ಷ 125 ಚಿತ್ರಗಳಿಗೆ ನೀಡುತ್ತಿದ್ದ ಸಬ್ಸಿಡಿಯನ್ನು ಈ ಸಲ ಹೆಚ್ಚುವರಿಯಾಗಿ 75 ಚಿತ್ರಗಳಿಗೆ ನೀಡಲು ಉದ್ದೇಶಿಸಿದ್ದು, ಈ ವರ್ಷದಿಂದ ಒಟ್ಟು 200 ಚಿತ್ರಗಳಿಗೆ ಸಬ್ಸಿಡಿ ನೀಡಲಾಗುತ್ತದೆ.

ಇನ್ನು, ಪುನೀತ್‌ ರಾಜ್‌ಕುಮಾರ್‌, ಸಂಚಾರಿ ವಿಜಯ್‌ ಗೌರವ ಸೂಚಕವಾಗಿ ಇನ್‌ಸ್ಟಿಟ್ಯೂಟ್‌ ಆಫ್‌ ಗ್ರೈನಾಲಜಿ ಆ್ಯಂಡ್‌ ಆರ್ಗನ್‌ ಟ್ರಾನ್ಸ್‌ಪ್ಲಾಂಟ್‌ ಸಂಸ್ಥೆಯನ್ನು ಈಗಾಗಲೇ ಲೋಕಾರ್ಪಣೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ನಿಮ್ಹಾನ್ಸ್‌ ಮೂಲಕ ಅಂಗಾಂಗ ಮರುಪಡೆಯುವಿಕೆ ಕೇಂದ್ರವನ್ನು ಸ್ಥಾಪಿಸಲು ಬಜೆಟ್‌ನಲ್ಲಿ ಘೋಷಿಸಲಾಗಿದೆ. ಈ ಮೂಲಕ ಅಂಗಾಂಗ ದಾನ ಪ್ರೋತ್ಸಾಹಿಸುವ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ.

ಚಿತ್ರರಂಗಕ್ಕೆ ಬೊಮ್ಮಾಯಿ ಕೊಟ್ಟಿದ್ದೇನು: ಸಿನಿಮಾ (Sadalwoood) ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವ ಸಿಎಂ ಬಸವರಾಜ ಬೊಮ್ಮಾಯಿ  (Basavaraj Bommai) ಸ್ಯಾಂಡಲ್  ವುಡ್ ಗೆ ಭರಪೂರ ಕೊಡುಗೆ ನೀಡುತ್ತಾರೆ ಎಂದು ಭಾವಿಸಲಾಗಿತ್ತು ಆದರೆ ಸ್ಯಾಂಡಲ್‌ವುಡ್‌ಗೆ  ಸಿಕ್ಕಿದ್ದು ಅಲ್ಪ ಮಾತ್ರ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಅವರ ಚೊಚ್ಚಲ ಬಜೆಟ್ ನಲ್ಲಿ ಪುನೀತ್ ರಾಜ್ ಕುಮಾರ್ ಮತ್ತು ಸಂಚಾರಿ ವಿಜಯ್ ಅವರನ್ನು ನೆನಪಿಸಿಕೊಂಡರು. ಅಂಗಾಗ ದಾನದ ವಿಚಾರವನ್ನು ಸಿಎಂ ಪ್ರಸ್ತಾಪಿಸಿದರು.

KGF Chapter 2 ವೀಕ್ಷಿಸಿ ರಿವ್ಯೂವ್ ನೀಡಿದ ಮಾಲಿವುಡ್ ನಟ ಪೃಥ್ವಿರಾಜ್ ಸುಕುಮಾರನ್!

ಕನ್ನಡದ ಕಣ್ಮಿಣಿ  ಪುನೀತ್ ರಾಜ್ ಕುಮಾರ್ (Puneeth Rajkumar) ನಿಧನರಾದಾಗ ಅವರ ಕಣ್ಣುಗಳನ್ನು ದಾನ ಮಾಡಲಾಯಿತು. ಸಂಚಾರಿ ವಿಜಯ್ (Sanchari Vijay)  ನಿಧನರಾದಾಗ ಅವರ ಅಂಗಾಂಗ ದಾನ ಮಾಡಿದ್ದರು. ಹೀಗಾಗಿ ಮರಣಾನಂತರ ಅಂಗಾಂಗಗಳನ್ನು ದಾನ ಮಾಡುವಂತೆ ಸಾರ್ವಜನಿಕರನ್ನು ಪ್ರೇರೇಪಿಸಲು, ಇದಕ್ಕೆ ಪೂರಕವಾಗಿ ಈಗಾಗಲೇ ಬೆಂಗಳೂರಿನಲ್ಲಿರುವ  Institute of Gastroenterology and Organ Transplant ಸಂಸ್ಥೆಯನ್ನು ಲೋಕಾರ್ಪಣೆ ಮಾಡಿದ್ದು, ಪ್ರಸಕ್ತ ಸಾಲಿನಲ್ಲಿ ನಿಮ್ಹಾನ್ಸ್ ಮೂಲಕ ಅಂಗಾಂಗ ಮರುಪಡೆಯುವಿಕೆ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ  ಘೋಷಣೆ ಮಾಡಿದರು.

ನಮ್ಮ ಬೇಡಿಕೆಯಂತೆ ಸಬ್ಸಿಡಿ ಚಿತ್ರಗಳ ಸಂಖ್ಯೆ ಹೆಚ್ಚಿಸಿದ್ದಾರೆ. ಇದೊಂದು ಸ್ವಾಗತಾರ್ಹ ಬಜೆಟ್‌. ಚಿತ್ರನಗರ ನಿರ್ಮಾಣಕ್ಕೆ ಶಂಕುಸ್ಥಾಪನೆ, ಚಿತ್ರರಂಗದವರಿಗೆ ವಸತಿ ಸೌಲಭ್ಯ ಕೊಡಿಸುವ ಯೋಜನೆ, ಅಕಾಡೆಮಿಯಲ್ಲಿ ಕ್ಷೇಮ ನಿಧಿ ಹೆಚ್ಚಿಸುವ ಬೇಡಿಕೆಗಳನ್ನು ಆದಷ್ಟುಬೇಗ ಈಡೇರಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ.
-ಜೈರಾಜ್‌, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ

click me!