
ಬೆಂಗಳೂರು(ಸೆ. 24) ಹಲವು ದಿನಗಳ ಸಿನಿಪ್ರಿಯರ ಮತ್ತು ಸ್ಯಾಂಡಲ್‌ವುಡ್ ನ ಬೇಡಿಕೆಗೆ ಸರ್ಕಾರ ಕೊನೆಗೂ ಅಸ್ತು ಎಂದಿದೆ. ಅಕ್ಟೋಬರ್ 1 ರಿಂದ ಚಿತ್ರಮಂದಿರಗಳಲ್ಲಿ ಶೇ. 100 ಹಾಜರಾತಿಗೆ ಅವಕಾಶ ನೀಡಲಾಗುತ್ತಿದೆ.
ಶೇ.1 ಕ್ಕಿಂತ ಕಡಿಮೆ ಕೋವಿಡ್ ಪ್ರಕರಣವಿರುವ ಭಾಗಗಳಲ್ಲಿ ಮಾತ್ರ ಶೇ.100 ರಷ್ಟು ಚಿತ್ರಮಂದಿರ ತುಂಬಲು ಅವಕಾಶ ಕಲ್ಪಿಸಿದ್ದು, ಶೇ.1 ಕ್ಕಿಂತ ಪ್ರಕರಣ ಹೆಚ್ಚಿರುವ ಕಡೆ ಶೇ.50 ಹಾಗೂ ಶೇ.2 ಕ್ಕಿಂತ ಕೋವಿಡ್ ಪ್ರಕರಣ ಹೆಚ್ಚಿರುವ ಭಾಗಗಳಲ್ಲಿ ಚಿತ್ರಮಂದಿರ ಬಂದ್ ಮಾಡುವುದಾಗಿ ತಿಳಿಸಲಾಗಿದೆ. ಚಿತ್ರ ವೀಕ್ಷಿಸುವವರು ಕೋವಿಡ್ ಮೊದಲನೇ ಲಸಿಕೆಯನ್ನಾದರೂ ಕಡ್ಡಾಯವಾಗಿ ಪಡೆದಿರಬೇಕೆಂದು ಷರತ್ತು ವಿಧಿಸಲಾಗಿದ್ದು ಗರ್ಭಿಣಿ ಹಾಗೂ ಮಕ್ಕಳಿಗೆ ಚಿತ್ರಮಂದಿರಕ್ಕೆ ಅವಕಾಶ ಇಲ್ಲ.
ಕೊರೋನಾ ನಿಯಮದಲ್ಲಿ ಪ್ರಮುಖ ಬದಲಾವಣೆ ತಿಳಿದುಕೊಳ್ಳಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಒಂದು ಕಡೆ ಸರ್ಕಾರ ಹಸಿರು ನಿಶಾನೆ ತೋರಿಸಿದ ತಕ್ಷಣವೇ ಬಿಗ್ ಬಜೆಟ್ ಸಿನಿಮಾಗಳು ತೆರೆಗೆ ಬರಲು ಸಿದ್ಧತೆ ನಡೆಸಿವೆ.
ಎರಡು ವಾರಕ್ಕೆ ಒಂದು ಬಿಗ್ ಬಜೆಟ್ ಚಿತ್ರವನ್ನ ಬಿಡುಗಡೆ ಮಾಡಲು ನಿರ್ಮಾಪಕರು ಒಡಂಬಡಿಕೆ ಮಾಡಿಕೊಂಡಿದ್ದಾರೆ. ದುನಿಯಾ ವಿಜಯ್ ರ ಸಲಗ ಅಕ್ಟೋಬರ್ 01 ರಂದು ಬಿಡಿಗಡೆಯಾಗಲಿದೆ. ಅಕ್ಟೋಬರ್ 14 ಕ್ಕೆ ಸುದೀಪ್ ನಟನೆಯ ಕೋಟಿಗೊಬ್ಬ -3ಚಿತ್ರ ರಿಲೀಸ್ ಆಗಲಿದೆ. ಅಕ್ಟೋಬರ್ 29ಕ್ಕೆ ಶಿವರಾಜ್ ಕುಮಾರ್ ನಟನೆಯ ಭಜರಂಗಿ 2 ಸಿನಿಮಾ ಬಿಡುಗಡೆ ಆಗಲಿದ್ದು ಸಿನಿಪ್ರಿಯರಿಗೆ ಹಬ್ಬ ಶುರುವಾಗಲಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.