ನಟಿ ಸಂಯುಕ್ತಾಳೊಂದಿಗೆ ಕಿರಿಕ್‌: ಕವಿತಾ ರೆಡ್ಡಿ ಅರೆಸ್ಟ್‌

Kannadaprabha News   | Asianet News
Published : Sep 09, 2020, 08:02 AM IST
ನಟಿ ಸಂಯುಕ್ತಾಳೊಂದಿಗೆ ಕಿರಿಕ್‌: ಕವಿತಾ ರೆಡ್ಡಿ ಅರೆಸ್ಟ್‌

ಸಾರಾಂಶ

ನಟಿ ಸಂಯುಕ್ತಾಗೆ ಕ್ಷಮೆ ಕೇಳಿದ್ದ ಕವಿತಾ| ಠಾಣೆಗೆ ಮಾಹಿತಿ ನೀಡದ ನಟಿ| ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದ ಪೊಲೀಸರು| ತುಂಡು ಬಟ್ಟೆ ತೊಟ್ಟು ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದೀರಾ ಎಂದು ಸಂಯುಕ್ತ ಹೆಗಡೆ ಬಳಿ ಜಗಳ ತೆಗೆದಿದ್ದ ಕವಿತಾ ರೆಡ್ಡಿ| 

ಬೆಂಗಳೂರು(ಸೆ.09): ಅಗರ ಕೆರೆ ಪಾರ್ಕ್‌ನಲ್ಲಿ ವಾಯು ವಿಹಾರಕ್ಕೆ ಹೋಗಿದ್ದ ನಟಿ ಸಂಯುಕ್ತ ಹೆಗಡೆಯನ್ನು ನಿಂದಿಸಿ, ನಟಿಯ ಸ್ನೇಹಿತೆ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷದ ಕವಿತಾ ರೆಡ್ಡಿಯನ್ನು ಎಚ್‌ಎಸ್‌ಆರ್‌ ಲೇಔಟ್‌ ಠಾಣೆ ಪೊಲೀಸರು ಬಂಧಿಸಿ ಬಳಿಕ ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಮತ್ತೊಬ್ಬ ಆರೋಪಿ ಅನಿಲ್‌ ರೆಡ್ಡಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸಂಯುಕ್ತ ಹೆಗಡೆ ಕೊಟ್ಟ ದೂರಿನ ಮೇರೆಗೆ ಬಂಧಿಸಿ, ಬಳಿಕ ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಸಂಯುಕ್ತಾ ಹೆಗ್ಡೆ ಜೊತೆ ಕಿರಿಕ್‌: ಕ್ಷಮೆ ಕೇಳಿದ ಕವಿತಾ ರೆಡ್ಡಿ!

ಶುಕ್ರವಾರ ಸಂಯುಕ್ತ ಹೆಗಡೆ ಅಗರ ಕೆರೆಯ ವಾಯು ವಿಹಾರ ಮಾಡುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಕವಿತಾ ರೆಡ್ಡಿ ತುಂಡು ಬಟ್ಟೆ ತೊಟ್ಟು ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದೀರಾ ಎಂದು ಸಂಯುಕ್ತ ಹೆಗಡೆ ಬಳಿ ಜಗಳ ತೆಗೆದಿದ್ದರು. ಕವಿತಾ ರೆಡ್ಡಿ ಹಾಗೂ ಅನಿಲ್‌ ರೆಡ್ಡಿ ವಿರುದ್ಧ ನಟಿ ಠಾಣೆಗೆ ದೂರು ನೀಡಿದ್ದರು. ಅಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಸುಮಾರು ಏಳು ಲಕ್ಷಕ್ಕೂ ಹೆಚ್ಚು ಮಂದಿ ಸಂಯುಕ್ತ ಹೆಗಡೆ ಪರ ಧ್ವನಿ ಎತ್ತಿದ್ದರು. ಈ ಬೆನ್ನಲ್ಲೇ ಆರೋಪಿ ಕವಿತಾ ರೆಡ್ಡಿ ಅವರು ನನಗೆ ತಪ್ಪಿನ ಅರಿವಾಗಿದೆ ಎಂದು ಸಂಯುಕ್ತ ಹೆಗಡೆ ಅವರ ಬಳಿ ಕ್ಷಮೆಯಾಚಿಸಿದ್ದರು. ರಾಜೀ ಸಂಧಾನ ಕೂಡ ನಡೆಸಲಾಗಿತ್ತು. ಆದರೆ ಈ ಬಗ್ಗೆ ಸಂಪೂರ್ಣವಾಗಿ ಪ್ರಕರಣ ಹಿಂಪಡೆಯುವ ಬಗ್ಗೆ ಸಂಯುಕ್ತ ಹೆಗಡೆ ಅವರು ಪೊಲೀಸರಿಗೆ ಹೇಳಿಲ್ಲ. ಹೀಗಾಗಿ ಕಾನೂನಿನ ಪ್ರಕಾರ ಆರೋಪಿಯನ್ನು ಬಂಧಿಸಿ, ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

BBK 12 ಗಿಲ್ಲಿ ನಟನ ಗುಣ ಹೇಳುತ್ತಲೇ Bigg Boss Winner ಯಾರೆಂದು​ ಹಿಂಟ್​ ಕೊಟ್ಟೇ ಬಿಟ್ರು ಶಿವರಾಜ್​ ಕುಮಾರ್!
BBK 12: ಗೆಲ್ತಾರಾ ಗಿಲ್ಲಿ ನಟ..? ಈ ಮಂಡ್ಯದ ಹೈದ ನಟರಾಜ್‌ನ ಪ್ಲಸ್ & ಮೈನಸ್ ಏನು? ಸೀಕ್ರೆಟ್ ರಿವೀಲ್..!