
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ, ಶಿವ ಕಾರ್ತಿಕ್ ನಿರ್ದೇಶನದ ‘ಕೋಟಿಗೊಬ್ಬ 3’ ಚಿತ್ರವನ್ನು ಅಕ್ಟೋಬರ್ 14ರಂದು ಕನ್ನಡ ಸೇರಿದಂತೆ ಬೇರೆ ಭಾಷೆಗಳಲ್ಲೂ ಬಿಡುಗಡೆ ಮಾಡುವ ತಯಾರಿ ಮಾಡಿಕೊಳ್ಳುತ್ತಿದೆ ಚಿತ್ರರಂಗ. ಸುದೀಪ್ ಹುಟ್ಟು ಹಬ್ಬದ ದಿನ ವಿಶೇಷವಾಗಿ ಸಿನಿಮಾ ಬಿಡುಗಡೆ ದಿನಾಂಕ ಪ್ರಕಟಿಸುವ ಸಾಧ್ಯತೆಗಳಿವೆ.
ಅಕ್ಟೋಬರ್ 14ರಂದು ಎಸ್.ಎಸ್. ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್’ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಈ ಚಿತ್ರದ ಬಿಡುಗಡೆ ದಿನಾಂಕವೂ ಮುಂದಕ್ಕೆ ಹೋಗಿದೆ. ಈ ಕಾರಣಕ್ಕೆ ಅಕ್ಟೋಬರ್ 14ರಂದು ‘ಕೋಟಿಗೊಬ್ಬ 3’ ಚಿತ್ರದ ಮೂಲಕ ಚಿತ್ರ ರಸಿಕರನ್ನು ಚಿತ್ರಮಂದಿರಗಳತ್ತ ಕರೆ ತರುವ ಪ್ಲಾನ್ ನಿರ್ಮಾಪಕರದ್ದು ಎನ್ನಲಾಗುತ್ತಿದೆ. ಈ ಚಿತ್ರಕ್ಕೆ ಸೂರಪ್ಪ ಬಾಬು ಬಂಡವಾಳ ಹಾಕಿದ್ದಾರೆ.
ಈಗಾಗಲೇ ಕಿಚ್ಚನ ಲುಕ್ ಹಾಗೂ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಮಾಸ್ ಹಾಗೂ ಕಾಮಿಡಿ ಎಲಿಮೆಂಟ್ ಹೊಂದಿದ್ದು, ಚಿತ್ರ ಹಿಟ್ ಆಗೇ ಆಗುತ್ತೆ ಎನ್ನುತ್ತಿದ್ದಾರೆ ಕಿಚ್ಚ ಸುದೀಪ್ ಅಭಿಮಾನಿಗಳು. ಕೆಲವು ದಿನಗಳ ಹಿಂದೆ ಸುದೀಪ್ ಚಿತ್ರದ ಡಬ್ಬಿಂಗ್ ಮುಗಿಸಿದ್ದಾರೆ. ಬಿಡುಗಡೆ ತಡವಾಗುತ್ತಿರುವ ಕಾರಣ ಓಟಿಟಿಯಲ್ಲಿ ಸಿನಿಮಾ ರಿಲೀಸ್ ಮಾಡುವಂತೆ ಪ್ರತಿಷ್ಠಿತ ಓಟಿಟಿ ಪ್ಲಾಟ್‌ಫಾರ್ಮ್ 35 ಕೋಟಿ ರೂ. ಆಫರ್ ನೀಡಿತ್ತು. ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡಲೇ ಬೇಕೆಂದು ಚಿತ್ರತಂಡ ನಿರ್ಧರಿಸಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.