
ಕನ್ನಡ ಕಿರುತೆರೆ ಹಾಗೂ ಬೆಳ್ಳಿ ತೆರೆ ಜನಪ್ರಿಯ ನಟ ಜಯರಾಮ್ ಕಾರ್ತಿಕ್ ಅಲಿಯಾಸ್ ಜೆಕೆ ಹೊಸ ಚಿತ್ರಕ್ಕೆ ಸಿಹಿ ಹಾಕಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ಬಿಡುಗಡೆ ಮಾಡಿ, ಇಡೀ ತಂಡಕ್ಕೆ ಕಿಚ್ಚ ಸುದೀಪ್ ಶುಭ ಹಾರೈಸಿದ್ದಾರೆ.
ವಿಶೃತ್ ನಾಯಕ್ ನಿರ್ದೇಶನದ 'ಕಾಡ' ಚಿತ್ರದ ಟೈಟಲ್ ಪೋಸ್ಟರನ್ನು ಟ್ವಿಟ್ಟರ್‌ನಲ್ಲಿ ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಾರೆ. ಕ್ರೈಮ್ ಥ್ರಿಲ್ಲರ್ ಕತೆ ಇದು. ಸರಿ, ತಪ್ಪುಗಳಿಗೆ ಗೌರವ ತೋರದೆ, ಬೇರೆಯವರ ಹಕ್ಕು ಮತ್ತು ಭಾವನೆಗಳನ್ನು ಕಡೆಗಣಿಸುವ ಮನಸ್ಥಿತಿ ಹೊಂದಿರುವ ವ್ಯಕ್ತಿಯ ಕತೆ ಇದಾಗಿದ್ದು, 'ಪೋಸ್ಟರ್ ಅದ್ಭುತವಾಗಿದೆ. ಮಿಸ್ಟರ್ Evil ಹಾಗೂ ಇಡೀ ತಂಡಕ್ಕೆ ಶುಭವಾಗಲಿ,' ಎಂದು ಸುದೀಪ್ ಬರೆದುಕೊಂಡಿದ್ದಾರೆ.
ಕಾಡ ಚಿತ್ರದಲ್ಲಿ ಜೆಕೆಗೆ ಜೋಡಿಯಾಗಿ ಕಾವ್ಯಾ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಶನಿವಾರದಿಂದ ಚಿಕ್ಕಮಗಳೂರಿನಲ್ಲಿ ಸಿನಿಮಾ ಚಿತ್ರೀಕರಣ ಆರಂಭಿಸಲಾಗುತ್ತದೆ. ಚಿತ್ರದಲ್ಲಿ ಅಚ್ಯುತ್ ಕುಮಾರ್ ಹಾಗೂ ಉಗ್ರಂ ಮಂಜು ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ನಂದು ಸಂಗೀತ ನಿರ್ದೇಶನ ಮಾಡಿದರೆ, ಅರುಣ್ ಸುರೇಶ್ ಛಾಯಾಗ್ರಹಣ ಮಾಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.