ಇಂದು 12 ಗಂಟೆಯಿಂದ ಸುದೀಪ್ ನಿವಾಸದಲ್ಲಿ ಸರೋಜಾ ಅವರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾಯಂಕಾಲ 5 ರಿಂದ 7 ಗಂಟೆಯವರೆಗೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ಬಳಿ ಇರುವ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು..
ಪ್ಯಾನ್ ಇಂಡಿಯಾ ಖ್ಯಾತಿಯ ನಟ ಕಿಚ್ಚ ಸುದೀಪ್ (Kichcha Sudeep) ಅವರ ತಾಯಿ ಸರೋಜಾ ಸಂಜೀವ್ (Saroja Sanjeev) ಅವರು ನಿಧನರಾಗಿರುವ ಹಿನ್ನೆಲೆಯಲ್ಲಿ, ನಟ ಸುದೀಪ್ ಅವರ ಆಕ್ರಂದನ ಮುಗಿಲು ಮುಟ್ಟಿದೆ. ಪೋಷಕರು ಎಂದರೆ ತುಂಬಾ ಪ್ರೀತಿ-ಗೌರವ ಇಟ್ಟುಕೊಂಡಿರುವ ಸುದೀಪ್ ಅವರು ಅಮ್ಮನ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದಾರೆ ಎನ್ನಲಾಗಿದೆ. ಹಲವು ದಿನಗಳಿಂದ ಸುದೀಪ್ ಅಮ್ಮ ಸರೋಜಾ ಅವರು ಅನಾರೋಗ್ಯಕ್ಕೆ ಒಳಗಾಗಿ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ, ನಿನ್ನೆ ರಾತ್ರಿಯಿಂದಲೇ ಅವರ ಆರೋಗ್ಯ ತೀವ್ರ ಬಿಗಡಾಯಿಸಿದ್ದು, ಬಳಿಕ ಅವರನ್ನು ಉಳಿಸಲು ಅಸಾಧ್ಯವಾಯಿತು. ಇಂದು 12 ಗಂಟೆಯಿಂದ ಸುದೀಪ್ ನಿವಾಸದಲ್ಲಿ ಸರೋಜಾ ಅವರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾಯಂಕಾಲ 5 ರಿಂದ 7 ಗಂಟೆಯವರೆಗೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ಬಳಿ ಇರುವ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂಬ ಮಾಹಿತಿ ಬಂದಿದೆ.
ಸುದೀಪ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ, ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ
ಈಗಾಗಲೇ ನಟ ಸುದೀಪ್ ನಿವಾಸದ ಬಳಿ ಅವರ ಕುಟುಂಬಸ್ಥರು, ಆಪ್ತರು ಸೇರಿದಂತೆ, ಚಿತ್ರರಂಗದು ಹಲವು ಗಣ್ಣರು ಹಾಜರಾಗಿದ್ದಾರೆ. ನಟ ಸುದೀಪ್ ಅಮ್ಮನ ಪಾದ ಸ್ಪರ್ಶ ಮಾಡಿ ಕಣ್ಣೀರು ಹಾಕುತ್ತಿರುವುದನ್ನು ಕಂಡು ಅಲ್ಲಿದ್ದವರ ಕಣ್ಣೂಗಳು ಒದ್ದೆಯಾಗುತ್ತಿವೆ. ಸುದೀಪ್ ನಿವಾಸದ ಬಳಿ, ಬ್ಯಾರಿಕೇಡ್ ಹಾಗೂ ಟೆಂಟ್ ಹಾಕಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ನಡೆಯುವ ಅಂತ್ಯ ಸಂಸ್ಕಾರಕ್ಕೆ ಕೂಡ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
undefined
ಪೋಷಕರು ಎಂದರೆ ನಟ ಕಿಚ್ಚ ಸುದೀಪ್ ಅವರಿಗೆ ಪಂಚಪ್ರಾಣ ಎಂಬುದು ಬಹುತೇಕ ಎಲ್ಲರಿಗೂ ಗೊತ್ತಿರುವ ಸಂಗತಿ. ಕಾರಣ, ಸುದೀಪ್ ಅವರು ಹಲವಾರು ವೇದಿಕೆಗಳಲ್ಲಿ ತಮ್ಮ ಅಪ್ಪ-ಅಮ್ಮನ ಬಗ್ಗೆ ಒಳ್ಳೆಯ ಮಾತು ಹೇಳಿದ್ದಾರೆ. ಜೊತೆಗೆ, ಹಲವು ಬಾರಿ ಸಂದರ್ಶನಗಳಲ್ಲಿ, 'ಪ್ರತಿಯೊಬ್ಬರೂ ಅವರ ಪೋಷಕರನ್ನು ಚೆನ್ನಾಗಿ ನೋಡಿಕೊಳ್ಳಬೇಕು' ಎಂದು ಕಿವಿಮಾತು ಹೇಳಿದ್ದಾರೆ. ಇದೀಗ ಟನ ಸುದೀಪ್ ಅವರು ತಮ್ಮ ತಾಯಿಯನ್ನು ಕಳೆದುಕೊಂಡಿದ್ದು ಅವರ ಆಕ್ರಂದನ ಮುಗಿಲು ಮುಟ್ಟಿತ್ತು ಎನ್ನಲಾಗಿದೆ.
ಅಮ್ಮನ ಸಾವಿನ ಸೂಚನೆ ಸುದೀಪ್‌ಗೆ ಮೊದಲೇ ಸಿಕ್ಕಿತ್ತಾ? ಬದುಕಿಸಲು ಹರಕೆ ಹೊತ್ತಿದ್ರಾ?
ಸದ್ಯ ನಟ ಕಿಚ್ಚ ಸುದೀಪ್ ಅವರು 'ಬಿಗ್ ಬಾಸ್ ಕನ್ನಡ ಸೀಸನ್-11' ಶೋ ನಡೆಸಿಕೊಡುತ್ತಿದ್ದಾರೆ. ಕಲರ್ಸ್ ಕನ್ನಡದಲ್ಲಿ ಮೂಡಿಬರುತ್ತಿರುವ ಬಗ್ ಬಾಸ್ ಕನ್ನಡದ ಹೋಸ್ಟ್ ಆಗಿ ನಟ ಸುದೀಪ್ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದಾರೆ. ಕಳೆದ ಹತ್ತೂ ಸೀಸನ್‌ಗಳನ್ನು ಸಹ ನಟ ಕಿಚ್ಚ ಸುದೀಪ್ ಅವರೇ ನಡೆಸಿಕೊಡುತ್ತಿರುವುದು ಗಮನಾರ್ಹ ಅಂಶ. ಇದೀಗ ಸುದೀಪ್ ಹನ್ನೊಂದನೇ ಸೀಸನ್ ನಡೆಸಿಕೊಡುತ್ತಿದ್ದು, ಇದೇ ತಮ್ಮ ಕೊನೆಯ ಬಿಗ್ ಬಾಸ್ ಶೋ ಎಂದು ಅದೇ ವೇದಿಕೆಯಲ್ಲಿ ಘೋಷಿಸಿದ್ದಾರೆ.