ಸುದೀಪ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ, ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ

Published : Oct 20, 2024, 11:58 AM IST
ಸುದೀಪ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ, ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ

ಸಾರಾಂಶ

ನಟ ಕಿಚ್ಚ ಸುದೀಪ್ ನಿವಾಸದಲ್ಲಿ ಅವರ ಅಮ್ಮನ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಂತ್ಯಕ್ರಿಯೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ, ಸಂಜೆ 5 ರಿಂದ 7 ರ ವರೆಗೆ ನಡೆಯಲಿದೆ. ...

ನಟ ಕಿಚ್ಚ ಸುದೀಪ್ (Kichcha Sudeep) ಸುದೀಪ್ ತಾಯಿ (Saroja Sanjeev) ವಿಧಿವಶವಾದ ಹಿನ್ನೆಲೆಯಲ್ಲಿ ನಟ ಕಿಚ್ಚ ಸುದೀಪ್ ಅವರ ಮನೆ ಬಳಿಯಲ್ಲಿ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಲಾಗಿದೆ. ಆಪ್ತರು, ಅಭಿಮಾನಿಗಳು ಸುದೀಪ್ ಮನೆ ಬಳಿ ಬರುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗುತ್ತಿದೆ. ತಮ್ಮ ನಿವಾಸದಿಂದ ಆಸ್ಪತ್ರೆಗೆ ತೆರಳಿದ ನಟ ಸುದೀಪ್, ತಮ್ಮ ತಾಯಿ ಪಾರ್ಥೀವ ಮೃತದೇಹವನ್ನು ಪಡೆದು, ತಮ್ಮ ನಿವಾಸದಲ್ಲಿ ಸುದೀಪ್ ಅಮ್ಮನ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲು ಮುಂದಾಗಿದ್ದಾರೆ. 

ಅಂತಿಮ ದರ್ಶನದ ಬಳಿಕ, ಸುದೀಪ್ ಅಮ್ಮನ ಅಂತ್ಯಕ್ರಿಯೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ನಡೆಯಲಿದೆ. ಸಂಜೆ 5 ರಿಂದ 7 ರ ವರೆಗೆ ವಿಲ್ಸನ್ ಗಾರ್ಡನ್ ನಲ್ಲಿರುವ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ತಾಯಿಯನ್ನ ನೋಡಿ ಕಣ್ಣೀರಿಡುತ್ತಿರುವ ಸುದೀಪ್ ಸುದೀಪ್ ಮನೆ ಬಳಿಯಲ್ಲಿ ಟೆಂಟ್ ಹೌಸ್ ಸಿಬ್ಬಂದಿ ಪೆಂಡಲ್ ಹಾಕುತ್ತಿದ್ದಾರೆ. ಅಂತಿಮ ದರ್ಶನ ಹಾಗೂ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಈಗಾಗಲೇ ನಟ ಸುದೀಪ್ ಅವರ ಅಮ್ಮನ ಪಾರ್ಥೀವ ಶರೀರ ನೋಡಲು ನಟ ವಿಜಯ್ ಸೇರಿದಂತೆ ಹಲವರು ಬಂದಿದ್ದಾರೆ. 

ಅಮ್ಮನ ಸಾವಿನ ಸೂಚನೆ ಸುದೀಪ್‌ಗೆ ಮೊದಲೇ ಸಿಕ್ಕಿತ್ತಾ? ಬದುಕಿಸಲು ಹರಕೆ ಹೊತ್ತಿದ್ರಾ?

ಇತ್ತೀಚೆಗಷ್ಟೆ ಬಿಗ್​ಬಾಸ್ ವೇದಿಕೆ ಮೇಲೆ ಸುದೀಪ್ ಅವರು ಅವರ ತಾಯಿಯನ್ನು ನೆನಪಿಸಿಕೊಂಡಿದ್ದರು. ಈ ಸೀಸನ್​ನ ಮೊದಲ ವೀಕೆಂಡ್ ಪಂಚಾಯಿತಿಗೆ ಬಂದಿದ್ದ ಸುದೀಪ್ ಶೇರವಾನಿ ಹಾಕಿಕೊಂಡು ಬರಿಗಾಲಲ್ಲಿ ವೇದಿಕೆಗೆ ಹತ್ತಿದ್ದರು. ನವರಾತ್ರಿ ಇದ್ದ ಕಾರಣ ತಾವು ಹೀಗೆ ಡ್ರೆಸ್ ಮಾಡಿಕೊಂಡು ಬಂದಿದ್ದಾಗಿ ಹೇಳಿದ ಸುದೀಪ್, ಕ್ಯಾಮೆರಾ ನೋಡಿಕೊಂಡು 'ಅಮ್ಮ ನೋಡಿ, ಬರಿಗಾಲಲ್ಲಿ ಬಂದಿದ್ದೀನಿ, ಹಬ್ಬಕ್ಕೆ ತಕ್ಕಂತೆ ಡ್ರೆಸ್ ಮಾಡಿಕೊಂಡಿದ್ದೀನಿ' ಎಂದಿದ್ದರು.

ಸದ್ಯ ನಟ ಕಿಚ್ಚ ಸುದೀಪ್ ಅವರು 'ಬಿಗ್ ಬಾಸ್ ಕನ್ನಡ ಸೀಸನ್-11' ಶೋ ನಡೆಸಿಕೊಡುತ್ತಿದ್ದಾರೆ. ಕಲರ್ಸ್ ಕನ್ನಡದಲ್ಲಿ ಮೂಡಿಬರುತ್ತಿರುವ ಬಗ್ ಬಾಸ್ ಕನ್ನಡದ ಹೋಸ್ಟ್ ಆಗಿ ನಟ ಸುದೀಪ್ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದಾರೆ. ಕಳೆದ ಹತ್ತೂ ಸೀಸನ್‌ಗಳನ್ನು ಸಹ ನಟ ಕಿಚ್ಚ ಸುದೀಪ್ ಅವರೇ ನಡೆಸಿಕೊಡುತ್ತಿರುವುದು ಗಮನಾರ್ಹ ಅಂಶ. ಇದೀಗ ಸುದೀಪ್ ಹನ್ನೊಂದನೇ ಸೀಸನ್ ನಡೆಸಿಕೊಡುತ್ತಿದ್ದು, ಇದೇ ತಮ್ಮ ಕೊನೆಯ ಬಿಗ್ ಬಾಸ್ ಶೋ ಎಂದು ಅದೇ ವೇದಿಕೆಯಲ್ಲಿ ಘೋಷಿಸಿದ್ದಾರೆ. 

ರಶ್ಮಿಕಾ-ಸುದೀಪ್ ಹುಶಾರ್, ಸೋಷಿಯಲ್ ಮೀಡಿಯಾದಲ್ಲಿ ಜೋರಾಯ್ತು ಫ್ಯಾನ್ಸ್ ಕೂಗು!

ಪೋಷಕರು ಎಂದರೆ ನಟ ಕಿಚ್ಚ ಸುದೀಪ್ ಅವರಿಗೆ ಪಂಚಪ್ರಾಣ ಎಂಬುದು ಬಹುತೇಕ ಎಲ್ಲರಿಗೂ ಗೊತ್ತಿರುವ ಸಂಗತಿ. ಕಾರಣ, ಸುದೀಪ್ ಅವರು ಹಲವಾರು ವೇದಿಕೆಗಳಲ್ಲಿ ತಮ್ಮ ಅಪ್ಪ-ಅಮ್ಮನ ಬಗ್ಗೆ ಒಳ್ಳೆಯ ಮಾತು ಹೇಳಿದ್ದಾರೆ. ಜೊತೆಗೆ, ಹಲವು ಬಾರಿ ಸಂದರ್ಶನಗಳಲ್ಲಿ, 'ಪ್ರತಿಯೊಬ್ಬರೂ ಅವರ ಪೋಷಕರನ್ನು ಚೆನ್ನಾಗಿ ನೋಡಿಕೊಳ್ಳಬೇಕು' ಎಂದು ಕಿವಿಮಾತು ಹೇಳಿದ್ದಾರೆ. ಇದೀಗ ಟನ ಸುದೀಪ್ ಅವರು ತಮ್ಮ ತಾಯಿಯನ್ನು ಕಳೆದುಕೊಂಡಿದ್ದು ಅವರ ಆಕ್ರಂದನ ಮುಗಿಲು ಮುಟ್ಟಿತ್ತು ಎನ್ನಲಾಗಿದೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಆರ್ಯನ್ ಖಾನ್‌ಗೆ ಝೈದ್ ಖಾನ್ ಸಪೋರ್ಟ್; ಆದ್ರೂ ಪಬ್ಲಿಕ್‌ ಪ್ಲೇಸ್‌ನಲ್ಲಿ 'ಮಿಡ್ಲ್ ಫಿಂಗರ್' ಎತ್ತಿದ್ದು ತಪ್ಪು ಅಂತಿರೋ ನೆಟ್ಟಿಗರು!
ರಿಷಬ್ ಶೆಟ್ಟಿ ದೈವದ ಮುಂದೆ ಅತ್ಬಿಟ್ರಾ? ಅಳಬೇಡ ಅಂತ ಸಂತೈಸಿದ್ದೇಕೆ ಪಂಜುರ್ಲಿ ದೈವ?