ಕಾಮಿಡಿಯಿಂದ ಮಾಸ್‌ಗೆ ಶಿಫ್ಟ್ ಆದ ಕೋಮಲ್: ಸಿಗಾರ್ ಹಿಡಿದ 'ರೋಲೆಕ್ಸ್'ನ ರಹಸ್ಯವೇನು?

Published : Jul 04, 2026, 06:20 PM IST
Komal Kumar

ಸಾರಾಂಶ

ತಮ್ಮ ವಿಶಿಷ್ಟ ಕಾಮಿಡಿ ಟೈಮಿಂಗ್ ಮತ್ತು ವಿಭಿನ್ನ ಮ್ಯಾನರಿಸಂ ಮೂಲಕ ಕನ್ನಡಿಗರ ಮನಗೆದ್ದಿರುವ ನಟ ಕೋಮಲ್ ಕುಮಾರ್ ಇದೀಗ ಹೊಸ ಅವತಾರದಲ್ಲಿ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. 

ತಮ್ಮ ವಿಶಿಷ್ಟ ಕಾಮಿಡಿ ಟೈಮಿಂಗ್ ಮತ್ತು ವಿಭಿನ್ನ ಮ್ಯಾನರಿಸಂ ಮೂಲಕ ಕನ್ನಡಿಗರ ಮನಗೆದ್ದಿರುವ ನಟ ಕೋಮಲ್ ಕುಮಾರ್ ಇದೀಗ ಹೊಸ ಅವತಾರದಲ್ಲಿ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಅವರ ಜನ್ಮದಿನದ ವಿಶೇಷವಾಗಿ ಬಹುನಿರೀಕ್ಷಿತ 'ರೋಲೆಕ್ಸ್' ಚಿತ್ರದ ಹೊಸ ಗ್ಲಿಂಪ್ಸ್ ಹಾಗೂ ಪೋಸ್ಟರ್ ಬಿಡುಗಡೆಯಾಗಿದ್ದು, ಕೋಮಲ್ ಅವರ ಸ್ಟೈಲಿಶ್ ಮತ್ತು ಮಾಸ್ ಲುಕ್ ಎಲ್ಲರ ಗಮನ ಸೆಳೆದಿದೆ.

ಪೋಸ್ಟರ್‌ನಲ್ಲಿ ಲಕ್ಷಾಂತರ ರೂಪಾಯಿ ಹಣದ ನಡುವೆ ಸಿಗಾರ್ ಹಿಡಿದು ಕುಳಿತಿರುವ ಕೋಮಲ್ ಅವರ ಲುಕ್ ಸಿನಿಪ್ರಿಯರಲ್ಲಿ ಕುತೂಹಲ ಮೂಡಿಸಿದೆ. ಈ ಚಿತ್ರದಲ್ಲಿ ಅವರು ಇದುವರೆಗೆ ಕಾಣಿಸದ ವಿಭಿನ್ನ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಅಭಿಮಾನಿಗಳ ನಿರೀಕ್ಷೆ ಮತ್ತಷ್ಟು ಹೆಚ್ಚಿಸಿದೆ.ಇಂದು (ಜುಲೈ 4) 53ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಕೋಮಲ್ ಅವರಿಗೆ ಕುಟುಂಬದವರು, ಸ್ನೇಹಿತರು ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಇದೇ ಸಂದರ್ಭದಲ್ಲಿ ಚಿತ್ರತಂಡವೂ ವಿಶೇಷ ಗ್ಲಿಂಪ್ಸ್ ಹಾಗೂ ಪೋಸ್ಟರ್ ಬಿಡುಗಡೆ ಮಾಡಿ ನಟನಿಗೆ ಜನ್ಮದಿನದ ಶುಭಾಶಯ ಕೋರಿದೆ.

'ರೋಲೆಕ್ಸ್' ಎಂಬ ಶೀರ್ಷಿಕೆ ಕೇಳುತ್ತಿದ್ದಂತೆ ತಮಿಳಿನ ಸೂಪರ್ ಹಿಟ್ 'ವಿಕ್ರಮ್' ಸಿನಿಮಾದಲ್ಲಿನ ನಟ ಸೂರ್ಯ ಅವರ ಪವರ್‌ಫುಲ್ 'ರೋಲೆಕ್ಸ್' ಪಾತ್ರ ನೆನಪಾಗುವುದು ಸಹಜ. ಆದರೆ ಕನ್ನಡದ ಈ 'ರೋಲೆಕ್ಸ್' ಚಿತ್ರ ಸಂಪೂರ್ಣ ವಿಭಿನ್ನ ಕಥಾಹಂದರ ಹೊಂದಿದ್ದು, ಕೋಮಲ್ ಅವರನ್ನು ಹೊಸ ಶೈಲಿಯಲ್ಲಿ ಪ್ರೇಕ್ಷಕರ ಮುಂದೆ ತರುತ್ತಿದೆ. ಈ ಸಿನಿಮಾದಲ್ಲಿ ಕೋಮಲ್ ಅವರಿಗೆ ನಾಯಕಿಯಾಗಿ ಸೋನಾಲ್ ಮೊಂತೆರೋ ಅಭಿನಯಿಸುತ್ತಿದ್ದಾರೆ. 'ಬಿಲ್ ಗೇಟ್ಸ್' ಚಿತ್ರದ ನಿರ್ದೇಶಕ ಶ್ರೀನಿವಾಸ್ ಮಂಡ್ಯ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ಹಾಸ್ಯದ ಜೊತೆಗೆ ಕೌಟುಂಬಿಕ ಮನರಂಜನೆಯನ್ನು ಒಳಗೊಂಡ ಕಥೆಯನ್ನು ತೆರೆಗೆ ತರುತ್ತಿದ್ದಾರೆ.

ಚಿತ್ರದಲ್ಲಿ ವಿನೋದ್ ಪ್ರಭಾಕರ್, ಅಚ್ಯುತ್ ಕುಮಾರ್, ನವೀನ್ ಪಡೀಲ್ ಹಾಗೂ ಅರುಣ್ ಬಾಲರಾಜ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿರುವ ಈ ಸಿನಿಮಾದ ನಾಲ್ಕು ಹಾಡುಗಳಿಗೆ ಡಾ. ವಿ. ನಾಗೇಂದ್ರ ಪ್ರಸಾದ್, ಕವಿರಾಜ್, ರಾಜೇಶ್ ವರ್ಮಾ ಮತ್ತು ಕಿನ್ನಾಳ್ ರಾಜ್ ಸಾಹಿತ್ಯ ಬರೆದಿದ್ದಾರೆ. ರಾಕೇಶ್ ಸಿ. ತಿಲಕ್ ಛಾಯಾಗ್ರಹಣ, ಅರವಿಂದ್ ರಾಜ್ ಸಂಕಲನ, ಯೋಗಾನಂದ್ ಸಾಹಸ ನಿರ್ದೇಶನ ಹಾಗೂ ಕಲೈ ಮತ್ತು ಮುರಳಿ ನೃತ್ಯ ನಿರ್ದೇಶನ ಚಿತ್ರಕ್ಕಿದೆ. ಮುರಳಿ ಕೃಷ್ಣ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಿದ್ದು, ರಾಜೇಶ್ ವರ್ಮಾ ಕ್ರಿಯೇಟಿವ್ ಹೆಡ್ ಆಗಿ ಚಿತ್ರತಂಡದ ಭಾಗವಾಗಿದ್ದಾರೆ.

ಚಿತ್ರೀಕರಣ ಪೂರ್ಣ

ಆಂಧ್ರ ಪ್ರದೇಶ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಅಂಬಟಿ ಮಧು ಮೋಹನಕೃಷ್ಣ ಅವರು ಮಧು ಫಿಲಂ ಸರ್ಕ್ಯೂಟ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸುತ್ತಿರುವ ಮೊದಲ ಕನ್ನಡ ಸಿನಿಮಾ ಇದಾಗಿದೆ. ಚಿತ್ರೀಕರಣ ಪೂರ್ಣಗೊಂಡಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಶೀಘ್ರದಲ್ಲೇ ಟ್ರೇಲರ್ ಬಿಡುಗಡೆ ಮಾಡುವ ಯೋಜನೆ ಹೊಂದಿರುವ ಚಿತ್ರತಂಡ, ಇದೇ ವರ್ಷ 'ರೋಲೆಕ್ಸ್' ಚಿತ್ರವನ್ನು ಪ್ರೇಕ್ಷಕರ ಮುಂದೆ ತರಲು ಸಿದ್ಧತೆ ನಡೆಸಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

'ನೀನು ಒಪ್ಪದಿದ್ದರೆ ನಿನ್ನ ತಂಗಿಗೆ ಪ್ರಪೋಸ್ ಮಾಡ್ತೀನಿ': ಪ್ರಜ್ವಲ್ ದೇವರಾಜ್-ರಾಗಿಣಿ ಪ್ರೀತಿಯ ಕಥೆ ಗೊತ್ತಾ?
ಹುಟ್ಟುಹಬ್ಬದ ದಿನವೇ ‘ಮಾಫಿಯಾ’ಗೆ ಎಂಟ್ರಿ ಕೊಟ್ಟ ಪ್ರಜ್ವಲ್‌ ದೇವರಾಜ್‌: ಅಪ್ಪನೂ ಸಾಥ್!