
ಬೆಂಗಳೂರು, (ಜೂನ್.07): ಇಂದು (ಭಾನುವಾರ) ವಿಧಿವಶರಾಗಿರುವ ಸ್ಯಾಂಡಲ್‌ವುಡ್ ನಟ ಚಿರಂಜೀವಿ ಸರ್ಜಾ ಅವರಿಗೆ ಕೊರೋನಾ ಸೋಂಕು ಇಲ್ಲ ಎಂದು ಲ್ಯಾಬ್ ವರದಿ ಸ್ಪಷ್ಟಪಡಿಸಿದೆ.
ಉಸಿರಾಟದ ಸಮಸ್ಯೆ ಇತ್ತು ಎನ್ನುವ ಕಾರಣಕ್ಕೆ ಆರೋಗ್ಯ ಇಲಾಖೆ ಮೃತದೇಹದ ಗಂಟಲು ದ್ರವದ ಮಾದರಿಯನ್ನು ಕೊವಿಡ್-19 ಟೆಸ್ಟ್‌ಗೆ ಒಳಪಡಿಸಿಲು ಸೂಚಿಸಿತ್ತು. ಅದರಂತೆ ಚಿರು ಸರ್ಜಾ ಮೃತದೇಹದ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಟೆಸ್ಟ್‌ಗೆ ಕುಳುಹಿಸಲಾಗಿತ್ತು.
ಅಂದು ಮತ್ತು ಇಂದು... ನಾವು ಹಾಗೇ ಇದ್ದೇವೆ.. ಕೊನೆ ಪಯಣದ ಹಿಂದಿನ ಪೋಸ್ಟ್
ಇದೀಗ ಆ ಟೆಸ್ಟ್ ರಿಪೋರ್ಟ್ ನೆಗೆಟಿವ್ ಬಂದಿದ್ದು, ಅವರಿಗೆ ಕೊರೋನಾ ಸೋಂಕು ಇಲ್ಲ ಎನ್ನುವುದು ಖಚಿತವಾಗಿದೆ. ಉಸಿರಾಟದ ಸಮಸ್ಯೆ ಹಾಗೂ ಹೃದಯಾಘಾತದಿಂದ ಬೆಂಗಳೂರಿನ ಜಯನಗರದಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿರು ಸರ್ಜಾ ಕೊನೆಯುಸಿರೆಳೆದಿದ್ದಾರೆ.
ನಾಳೆ (ಸೋಮವಾರ) ಬೆಳಗ್ಗೆ 11ಕ್ಕೆ ತುಮಕೂರಿನ ಮಧುಗರಿಯ ಜಕ್ಕೇನಹಳ್ಳಿಯಲ್ಲಿ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ನಡೆಯಲಿದ್ದು, ಇದರಲ್ಲಿ ಭಾಗವಹಿಸಲು 150 ಜನರಿಗೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.