
ಗಂಗಾವತಿ (ಅ.4) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೀವನ ಚರಿತ್ರೆಯುಳ್ಳ ಲೀಡರ್ ರಾಮಯ್ಯ ಚಿತ್ರದ ಚಿತ್ರೀಕರಣ ಸ್ವಲ್ಪ ಮಟ್ಟಿಗೆ ವಿಳಂಬವಾಗುತ್ತಿದೆ ಎಂದು ನಿರ್ಮಾಪಕ ಹಯ್ಯಾತ್ ಪೀರ್ ಹೇಳಿದರು.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಜೀವನ ಆಧಾರಿತ ಚಿತ್ರದ ಚಿತ್ರೀಕರಣ ಮುಂದುವರಿಯುತ್ತಿದ್ದು, ಈಗಾಗಲೇ ಒಂದು ಹಂತದ ಚಿತ್ರೀಕರಣ ಕೂಡ ಮುಕ್ತಾಯವಾಗಿದೆ. ಸಿದ್ದರಾಮಯ್ಯ ಅವರ ಪಾತ್ರಕ್ಕೆ ಬೇರೆ ನಟರೂ ಸರಿ ಹೋಗಲಿಲ್ಲ.
ವಿಜಯ್ ಸೇತುಪತಿ ಅವರ ಕಾಲಶೀಟ್ ಅವಶ್ಯವಾಗಿತ್ತು. ಸೇತುಪತಿ ಅವರೇ ನಾಯಕರಾಗಿದ್ದರಿಂದ ವಿಳಂಬವಾಗುತ್ತಿದೆ ಎಂದು ಹೇಳಿದರು. ಈಗಾಗಲೇ ಸಿದ್ದರಾಮಯ್ಯ ಬಾಲ್ಯದ ಬಗ್ಗೆ ಮಾಸ್ಟರ್ ನಿಹಾನ್ ಎನ್ನುವರಿಂದ ಅಭಿನಯ ಮಾಡಿಸಲಾಗಿದೆ. ಸಿದ್ದರಾಮಯ್ಯ ಕಾಲೇಜು ದಿನ ಮತ್ತು ಪ್ರಾಥಮಿಕ, ಪ್ರೌಢ ಶಿಕ್ಷಣದ ಬಗ್ಗೆ ಶೂಟಿಂಗ್ ಮಾಡಬೇಕಿತ್ತು. ಆದರೆ ಸೇತುಪತಿ ಅವರ ದಿನಾಂಕ ಬರಲಿಲ್ಲ. ಈ ಕಾರಣಕ್ಕೆ ವಿಳಂಬವಾಗಿದೆ ಎಂದರು.
ಮುಡಾ ಕೇಸ್‌ನಲ್ಲಿ ಸಾಕ್ಷ್ಯನಾಶ: ಸಿದ್ದರಾಮಯ್ಯ ವಿರುದ್ಧ ಇ.ಡಿ.ಗೆ 2ನೇ ಕಂಪ್ಲೇಂಟ್
ಪ್ರಸ್ತುತ ಮುಡಾ ಹಗರಣದ ಆರೋಪ ಕೇಳಿ ಬಂದಿದ್ದರಿಂದ ಅದರ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ. ಆದರೆ ಹಗರಣಕ್ಕೂ ಚಿತ್ರೀಕರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂದರು. ನನ್ನ ವೈಯಕ್ತಿಕ ಕೆಲಸದಿಂದ ಸಿನಿಮಾ ಶೂಟಿಂಗ್ ತಾತ್ಕಾಲಿಕವಾಗಿ ಬಂದ್ ಆಗಿದೆ. ಸೇತುಪತಿ ಅವರ ಡೇಟ್ ಸಿಕ್ಕ ಮೇಲೆ ಚಿತ್ರೀಕರಣ ಆರಂಭ ಮಾಡುತ್ತೇವೆ ಎಂದು ಹೇಳಿದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.