
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಮಲ್ಲಿಕಾರ್ಜುನ್ ಖರ್ಗೆ ಈಗಾಗಲೇ ಅರ್ಧಕ್ಕೂ ಹೆಚ್ಚು ಮತಗಳನ್ನು ಪಡೆದು ಗೆಲುವನ್ನು ಖಚಿತಪಡಿಸಿಕೊಂಡಿದ್ದಾರೆ. ಈ ಮೂಲಕ 24 ವರ್ಷಗಳ ಬಳಿಕ ಕಾಂಗ್ರೆಸ್ ಪಕ್ಷದ ಚುಕ್ಕಾಣಿಯನ್ನು ಗಾಂಧಿಯೇತರ ವ್ಯಕ್ತಿಯೊಬ್ಬರು ಅಲಂಕರಿಸಲಿದ್ಧಾರೆ. ಈ ಹಿಂದೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದರು. ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಅಲಂಕರಿಸಲಿರುವ ಎರಡನೇ ಕನ್ನಡಿಗ ಎಂಬ ಮನ್ನಣೆಗೆ ಭಾಜನರಾಗಲಿದ್ದಾರೆ. ಖರ್ಗೆ ಪ್ರತಿಸ್ಪರ್ಧಿ ಶಶಿ ತರೂರ್ ಮತ ಎಣಿಕೆಯಲ್ಲಿ ಲೋಪವಾಗಿದೆ ಎಂಬ ಆರೋಪ ಮಾಡಿದ್ಧಾರೆ. ಆದರೆ ಕಾಂಗ್ರೆಸ್ ಹಿರಿಯ ನಾಯಕರೆಲ್ಲರೂ ಮಲ್ಲಿಕಾರ್ಜುನ್ ಖರ್ಗೆ ಪರ ಬಹಿರಂಗವಾಗೇ ಬೆಂಬಲ ಘೋಷಿಸಿದ್ದರು. ಖರ್ಗೆ ಆಯ್ಕೆ ಅನೇಕ ಕನ್ನಡಿಗರಿಗೆ ಖುಷಿ ನೀಡಿದೆ.
ಈ ಬಗ್ಗೆ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಅನೇಕರು ಖರ್ಗೆಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಇದೀಗ ಕನ್ನಡದ ಚಿತ್ರಸಾಹಿತಿ ಹಾಗೂ ನಿರ್ದೇಶಕ ಕವಿರಾಜ್ ಕೂಡ ಖರ್ಗೆ ಅವರಿಗೆ ಅಭಿನಂದನೆ ತಿಳಿಸಿದ್ದಾರೆ. ಖರ್ಗೆ ಆಯ್ಕೆ ಹೆಮ್ಮೆಯ ವಿಚಾರ ಎಂದಿರುವ ಕವಿರಾಜ್ ಸಂಕಷ್ಟ ಕಾಲದಲ್ಲಿ ಪಕ್ಷದ ಚುಕ್ಕಾಣಿ ಹಿಡಿದಿರುವುದು ಒಂದು ಸವಾಲೇ ಸರಿ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
Non Veg; ನೀವು ತಿನ್ನೋ ಆಹಾರವನ್ನೇ ಹೊಲಸು ಅಂತೀರಲ್ರೀ, ಮತ್ತ್ಯಾಕೆ ತಿಂತೀರಿ: ಕವಿರಾಜ್
ಈ ಬಗ್ಗೆ ಕವಿರಾಜ್ ತನ್ನ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಬರೆದುಕೊಂಡಿದ್ದಾರೆ. 'ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದ, ಐದಾರು ದಶಕಗಳ ಕಾಲ ದೇಶವಾಳಿದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಕನ್ನಡಿಗ ರಾಜಕಾರಣಿಯೊಬ್ಬರು ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ. ಅಭಿನಂದನೆಗಳು ಶ್ರೀ ಮಲ್ಲಿಕಾರ್ಜುನ ಖರ್ಗೆಯವರಿಗೆ' ಎಂದಿದ್ದಾರೆ.
Congress Election: ಮಲ್ಲಿಕಾರ್ಜುನ್ ಖರ್ಗೆ ಕಾಂಗ್ರೆಸ್‌ನ ನೂತನ ಅಧ್ಯಕ್ಷ; ಈ ಸ್ಥಾನ ಪಡೆದ ಎರಡನೇ ಕನ್ನಡಿಗ
'ಸಂಕಷ್ಟ ಕಾಲದಲ್ಲಿ ಪಕ್ಷದ ಚುಕ್ಕಾಣಿ ಹಿಡಿದಿರುವುದು ಒಂದು ಸವಾಲೇ ಸರಿ. ದುರ್ಗಮ ದಾರಿಗಳೇ ಅದ್ಭುತ ಗುರಿಗಳೆಡೆ ಕರೆದೊಯ್ಯುವುದು. ಈ ಸವಾಲು ನೀವು ಗೆಲ್ಲುವಂತಾಗಲಿ. ಒಳ್ಳೇದಾಗಲಿ' ಎಂದು ಹೇಳಿದ್ದಾರೆ. ಕವಿರಾಜ್ ಪೋಸ್ಟ್‌ಗೆ ಅನೇಕರು ಅಭಿನಂದನೆ ಸಲ್ಲಿಸಿ ಕಾಮೆಂಟ್ ಮಾಡುತ್ತಿದ್ದಾರೆ. ಕವಿರಾಜ್ ಆಗಾಗ ರಾಜಕೀಯ ವಿಚಾರವಾಗಿ ತನ್ನ ಅಭಿಪ್ರಾಯಗಳನ್ನು ಹೊರಹಾಕುತ್ತಿರುತ್ತಾರೆ. ಪ್ರಮುಖ ಘಟನೆಗಳ ಬಗ್ಗೆಯೂ ಪೋಸ್ಟ್ ಹಾಕುತ್ತಿರುತ್ತಾರೆ. ಕವಿರಾಜ್ ಪೋಸ್ಟ್‌ಗಳಿಗೆ ಪರ ವಿರೋಧ ಚರ್ಚೆ ವ್ಯಕ್ತವಾಗುತ್ತದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.