
ರಾಮು ನಿರ್ದೇಶನದ, ಹಿರಿಯ ನಿರ್ಮಾಪಕ ಶಿಲ್ಪಾ ಶ್ರೀನಿವಾಸ್ ಪುತ್ರ ಭರತ್ ನಟನೆಯ ‘ಮೆಜೆಸ್ಟಿಕ್ 2’ ಚಿತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ನಟಿಸುತ್ತಿದ್ದಾರೆ. ಚಿತ್ರದುರ್ಗದ ಹೆಚ್.ಆನಂದಪ್ಪ ನಿರ್ಮಿಸುತ್ತಿರುವ ಈ ಚಿತ್ರದ ಹೀರೋ ಇಂಟ್ರಡಕ್ಷನ್ ಹಾಡಿನಲ್ಲಿ ಮಾಲಾಶ್ರೀ ಕಾಣಿಸಿಕೊಳ್ಳುತ್ತಿದ್ದಾರೆ. ಇದರಲ್ಲಿ ನನ್ನದು ಒಂದು ಸ್ಪೆಷಲ್ ಎಂಟ್ರಿ. ನಿರ್ದೇಶಕ ರಾಮು ಅವರು ನಮ್ಮ ರಾಮು ಫಿಲ್ಮ್ಸ್ ಬ್ಯಾನರಿನಲ್ಲಿ ಕೆಲಸ ಮಾಡಿದ್ದಾರೆ. ನನ್ನನ್ನು ಕಂಡರೆ ತುಂಬಾ ಅಭಿಮಾನ. ಅವರು ಬಂದು ಮೇಡಂ ನನ್ನ ಮೊದಲ ಸಿನಿಮಾಗೆ ನಿಮ್ಮ ಆಶೀರ್ವಾದ ಬೇಕು.
ನೀವು ನನ್ನ ಸಿನಿಮಾದ ಒಂದು ಭಾಗವಾಗಬೇಕು ಎಂದು ಕೇಳಿಕೊಂಡರು. ನಾನು ಸ್ಟೆಪ್ ಹಾಕಿ ಬಹಳ ವರ್ಷಗಳಾಯ್ತು. ಎಲ್ಲ ಮರೆತು ಹೋಗಿದೆ ಎಂದೆ. ಆಗ ತ್ರಿಭುವನ್ ಮಾಸ್ಟರ್ ಬಂದು ಮೇಡಂ ನೀವು ಟ್ರೈ ಮಾಡಿ ನಾನಿದ್ದೇನೆ ಎಂದರು. ಇದು ಮಾರಮ್ಮ ದೇವಿ ಸಾಂಗ್. ನನ್ನ ಸ್ಟೆಪ್ಸ್ ನೋಡಿ ನನಗೇ ಬಹಳ ಖುಷಿಯಾಯ್ತು. ಇದು ನಾನೇನಾ ಅನಿಸಿತು. ನನ್ನ ಹಿಂದಿನ ದಿನಗಳನ್ನು ನೆನಪಿಸಿತು. ರಿಯಲಿ ಎಂಜಾಯ್ಡ್ ಎಂದು ನಟಿ ಮಾಲಾಶ್ರೀ ಖುಷಿಯನಬ್ನು ಹಂಚಿಕೊಂಡರು.
ನಾಯಕ ನಟ ಭರತ್ ಮಾತನಾಡಿ, ನನ್ನ ಚೊಚ್ಚಲ ಚಿತ್ರದಲ್ಲೇ ಲೆಜೆಂಡರಿ ಸ್ಟಾರ್ ಜೊತೆ ಅಭಿನಯಿಸುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ. ಮಾಲಾಶ್ರೀ ಮೇಡಂ ಅವರಿಂದ ಬಹಳಷ್ಟು ಕಲಿತಿದ್ದೇನೆ. ಮೆಜೆಸ್ಟಿಕ್ನಲ್ಲೇ ಹುಟ್ಟಿಬೆಳೆದ ಹುಡುಗನಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಈಗಿನ ಮೆಜೆಸ್ಟಿಕ್ ಹೇಗಿದೆ ಎಂಬುದನ್ನು ಈ ಚಿತ್ರದಲ್ಲಿ ನೋಡಬಹುದು. ಈ ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ ಎಂದು ಹೇಳಿದರು. ಚಿತ್ರೀಕರಣ ಬಹುತೇಕ ಮುಕ್ತಾಯ ಹಂತ ತಲುಪಿದೆ.
90ರ ದಶಕದಲ್ಲಿ ರೌಡಿಸಂ ಹೇಗೆ ನಡೆಯುತ್ತಿತ್ತು ಎಂದು ದರ್ಶನ್ ಅಭಿನಯಿಸಿದ್ದ ಮೆಜೆಸ್ಟಿಕ್ ಚಿತ್ರದಲ್ಲಿ ತೋರಿಸಿದ್ದರೆ, ಈಗಿನ ಮೆಜೆಸ್ಟಿಕ್ ಏರಿಯಾದಲ್ಲಿ ಏನೆಲ್ಲಾ ಕರಾಳ ದಂಧೆಗಳು, ಅಕ್ರಮ ಚಟುವಟಿಕೆಗಳು ಅಲ್ಲದೇ ಈಗಲೂ ಅಲ್ಲಿ ರೌಡಿಸಂ ಹೇಗೆ ನಡೆಯುತ್ತದೆ ಎಂಬುದನ್ನು ಅಲ್ಲಿಯೇ ಹುಟ್ಟಿ ಬೆಳೆದ ಹುಡುಗನೊಬ್ಬನ ಕಥೆಯ ಮೂಲಕ ಮೆಜೆಸ್ಟಿಕ್ 2 ಚಿತ್ರದಲ್ಲಿ ನಿರ್ದೇಶಕ ರಾಮು ಹೇಳಲು ಹೊರಟಿದ್ದಾರೆ. ಸಂಹಿತಾ ವಿನ್ಯಾ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಶ್ರುತಿ ನಾಯಕನ ಅಮ್ಮನ ಪಾತ್ರದಲ್ಲಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.