KGF Chapter 2 ವೀಕ್ಷಿಸಿ ರಿವ್ಯೂವ್ ನೀಡಿದ ಮಾಲಿವುಡ್ ನಟ ಪೃಥ್ವಿರಾಜ್ ಸುಕುಮಾರನ್!

Suvarna News   | Asianet News
Published : Mar 05, 2022, 06:21 PM IST
KGF Chapter 2 ವೀಕ್ಷಿಸಿ ರಿವ್ಯೂವ್ ನೀಡಿದ ಮಾಲಿವುಡ್ ನಟ ಪೃಥ್ವಿರಾಜ್ ಸುಕುಮಾರನ್!

ಸಾರಾಂಶ

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆಜಿಎಫ್ 2' ಚಿತ್ರವನ್ನು ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಅವರು ವೀಕ್ಷಿಸಿದ್ದಾರೆ. ಮಾತ್ರವಲ್ಲದೇ ಈ ಸಿನಿಮಾದ ವಿತರಣೆಯ ಹಕ್ಕನ್ನು ಕೂಡ ಪಡೆದಿದ್ದಾರೆ. 

ಪ್ಯಾನ್ ಇಂಡಿಯಾ ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ ಚಿತ್ರ 'ಕೆಜಿಎಫ್ 2' (KGF 2) ಚಿತ್ರಕ್ಕಾಗಿ ಇಡೀ ಭಾರತೀಯ ಚಿತ್ರರಂಗವೇ ಕಾತುರದಿಂದ ಕಾದು ಕುಳಿತಿದೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ (Prashanth Neel) ಆಕ್ಷನ್ ಕಟ್ ಹೇಳಿದ್ದಾರೆ. ಮುಖ್ಯವಾಗಿ 'ಕೆಜಿಎಫ್' (KGF) ಮೊದಲ ಭಾಗ ಮಾಡಿದ ಅಬ್ಬರ ನಮ್ಮೆಲ್ಲರಿಗೂ ಗೊತ್ತಿದೆ. ‌ಇದೀಗ ಭಾಗ 2ರ ಮೂಲಕ ಅದೇ ಅಬ್ಬರ ಮುಂದುವರಿಸೋಕೆ ರಾಕಿ ಭಾಯ್ ಸಜ್ಜಾಗಿದ್ದು, ಏಪ್ರಿಲ್ 14ಕ್ಕೆ ಚಿತ್ರ ಬಿಡುಗಡೆಯಾಗಲಿದೆ. ವಿಶೇಷವಾಗಿ 'ಕೆಜಿಎಫ್ 2' ನೋಡಲು ವೀಕ್ಷಕರು ಕಾಯುತ್ತಿದ್ದಾರೆ. ಅದರಲ್ಲೂ 'ಕೆಜಿಎಫ್ ಚಾಪ್ಟರ್ 1'ಗಿಂತ 'ಕೆಜಿಎಫ್ 2' ಬಹಳ ಚೆನ್ನಾಗಿದೆ ಎಂದು ಚಿತ್ರತಂಡ ಮೊದಲೇ ಹೇಳಿದ್ದರಿಂದ ನಿರೀಕ್ಷೆ ಇನ್ನೂ ಹೆಚ್ಚಿದೆ.

ಇದೀಗ 'ಕೆಜಿಎಫ್ 2' ಚಿತ್ರವನ್ನು ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ( Prithviraj Sukumaran) ಅವರು ವೀಕ್ಷಿಸಿದ್ದಾರೆ. ಮಾತ್ರವಲ್ಲದೇ ಈ ಸಿನಿಮಾದ ವಿತರಣೆಯ ಹಕ್ಕನ್ನು ಕೂಡ ಪಡೆದಿದ್ದಾರೆ. ಸದ್ಯ  'ಕೆಜಿಎಫ್ 2' ಸಿನಿಮಾ ವೀಕ್ಷಿಸಿರುವುದರ ಬಗ್ಗೆ ಕೂಡ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ಟರ್‌ನಲ್ಲಿ (Twitter) 'ವಿಜಯ್ ಕಿರಗಂದೂರು ಜೊತೆ ಕೆಲಸ ಮಾಡಲು ಖುಷಿಯಾಗುತ್ತಿದೆ. 'ಕೆಜಿಎಫ್ 2' ಸಿನಿಮಾ ನೋಡಿದ್ದು, ಮನಸ್ಸಿಗೆ ಬಹಳ ಮುದ ನೀಡಿತು. ಪ್ರಶಾಂತ್ ನೀಲ್ ಅವರು ಹೊಸ ಸ್ಟಾಂಡರ್ಡ್‌ ಸೆಟ್ ಮಾಡಲಿದ್ದಾರೆ' ಎಂದು ಟ್ವೀಟ್ (Tweet) ಮಾಡಿದ್ದಾರೆ.

KGF Chapter 2: ಯಶ್ ಅಭಿಮಾನಿಗಳಿಗೆ ಗುಡ್‌ನ್ಯೂಸ್: 'ಕೆಜಿಎಫ್ 2' ಟ್ರೇಲರ್ ರಿಲೀಸ್ ಡೇಟ್ ಅನೌನ್ಸ್!

'ಕೆಜಿಎಫ್ 2' ಚಿತ್ರದ ಬಿಡುಗಡೆಗೆ ದಿನಗಣನೆ ಆರಂಭವಾಗಿದ್ದು, ಈ ಮಧ್ಯೆ ಟ್ರೇಲರ್ (Trailer)​ ರಿಲೀಸ್​ ಮಾಡಲು ಚಿತ್ರತಂಡ ಸಕಲ ಸಿದ್ಧತೆ ನಡೆಸಿದೆ. ಟ್ರೇಲರ್​ ಬಿಡುಗಡೆಗೆ ದಿನಾಂಕ ನಿಗದಿ ಆಗಿದ್ದು, ಮಾರ್ಚ್​ 27ರಂದು 'ಕೆಜಿಎಫ್​ 2' ಟ್ರೇಲರ್​ ಲಾಂಚ್​ ಆಗಲಿದೆ. ಈ ಕುರಿತು ನಿರ್ದೇಶಕ ಪ್ರಶಾಂತ್ ನೀಲ್ ಮಾಹಿತಿಯನ್ನು ಶೇರ್ ಮಾಡಿಕೊಂಡಿದ್ದರು. ಈ ಬಗ್ಗೆ ಇನ್‌ಸ್ಟಾಗ್ರಾಮ್ (Instagram) ಖಾತೆಯಲ್ಲಿ 'ಚಂಡಮಾರುತದ ಮೊದಲು ಯಾವಾಗಲೂ ಗುಡುಗು ಬರುತ್ತದೆ! 'ಕೆಜಿಎಫ್​ ಚಾಪ್ಟರ್ 2' ಟ್ರೇಲರ್ ಮಾರ್ಚ್ 27 ರಂದು ಸಂಜೆ 6:40ಕ್ಕೆ ಕನ್ನಡ, ತೆಲುಗು, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ಬರೆದುಕೊಂಡು ಯಶ್ ರಾ ಲುಕ್‌ನಲ್ಲಿರುವ ಫೋಟೊವೊಂದನ್ನು ಪ್ರಶಾಂತ್ ನೀಲ್ ಶೇರ್ ಮಾಡಿಕೊಂಡಿದ್ದರು.



'ಕೆಜಿಎಫ್ 2' ಕೆಲಸಗಳಲ್ಲಿ ಯಶ್ ಬ್ಯುಸಿಯಾಗಿದ್ದು, ಚಿತ್ರತಂಡ ಇತ್ತೀಚೆಗೆ ಉಡುಪಿಯ ಶ್ರೀಕೃಷ್ಣ ಮಠಕ್ಕೆ (Sri Krishna Mutt) ಭೇಟಿಕೊಟ್ಟು ಕನಕ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದು ಬಂದಿದ್ದರು. ಪ್ರಧಾನ ಮಂತ್ರಿ ರಮಿಕಾ ಸೇನ್​ ಪಾತ್ರದಲ್ಲಿ ಬಾಲಿವುಡ್ ನಡಿ ರವೀನಾ ಟಂಡನ್ (Raveena Tandon)​ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರಿಂದ ಸ್ಫೂರ್ತಿ ಪಡೆದಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಇದು ಇಂದಿರಾ ಗಾಂಧಿಯಿಂದ ಸ್ಫೂರ್ತಿ ಪಡೆದ ಪಾತ್ರವಲ್ಲ ಎನ್ನುವ ಸ್ಪಷ್ಟನೆ ರವೀನಾ ಕಡೆಯಿಂದ ಬಂದಿದೆ. ಪ್ರಕಾಶ್ ರಾಜ್ (Prakash Raj), ಬಾಲಿವುಡ್ ನಟ ಸಂಜಯ್ ದತ್ (Sanjay Dutt), ತೆಲುಗು ನಟ ರಾವ್ ರಮೇಶ್ (Rao Ramesh) ಸೇರಿದಂತೆ ದೊಡ್ಡ ತಾರಾಬಳಗ ಚಿತ್ರಕ್ಕಿದೆ.

KGF Yash: ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್

ಇನ್ನು 'ಕೆಜಿಎಫ್: ಚಾಪ್ಟರ್ 1' ಭರ್ಜರಿ ಹಿಟ್ ಆಗಿರುವುದರಿಂದ ಪಾರ್ಟ್ 2 ಮೇಲೆ ಎಲ್ಲರ ಕಣ್ಣು ಇದೆ. ಕರ್ನಾಟಕದಲ್ಲಿ ಇರುವಷ್ಟೇ ಕ್ರೇಜ್‌ ಆಂಧ್ರ ಪ್ರದೇಶ, ತೆಲಂಗಾಣ ಹಾಗೂ ಉತ್ತರ ಭಾರತದಲ್ಲೂ ಇದೆ. ಹಾಡುಗಳಿಗೆ ರವಿ ಬಸ್ರೂರು ಸಂಗೀತ ನೀಡಿದ್ದು, ಟ್ರೇಲರ್ ರಿಲೀಸ್ ಬಳಿಕ ಹಾಡುಗಳನ್ನು ಒಂದೊಂದಾಗಿಯೇ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಚಿತ್ರವು ವಿಶ್ವದಾದ್ಯಾಂತ‌ ಏಕಕಾಲದಲ್ಲಿ ಕನ್ನಡ, ತೆಲುಗು, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಯಲ್ಲಿ ತೆರೆ ಕಾಣಲಿದ್ದು, ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ (Hombale Films) ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು (Vijay Kiragandur) ನಿರ್ಮಿಸಿದ್ದಾರೆ. 
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಈಗ್ಲೇ ದರ್ಶನ್ 'ಡೆವಿಲ್'ಗೆ ಯಾಕೆ ಟೆನ್ಷನ್..? ನರ್ತಕಿ ಚಿತ್ರಮಂದಿರದ ಮೇಲೆ ಬೇರೆ ಸ್ಟಾರ್‌ಗಳ ಕಣ್ಣು ಬಿತ್ತಾ?
ಬೆಂಗಳೂರಿನಲ್ಲಿ ಬಿಗ್ ಮ್ಯೂಸಿಕಲ್ ನೈಟ್; JAM JUNXION"ನಲ್ಲಿ ಚಂದನ್ ಶೆಟ್ಟಿ ಸೇರಿದಂತೆ ಪ್ರಸಿದ್ಧ ಬ್ಯಾಂಡ್ ಧಮಾಕಾ!