
ಸ್ಯಾಂಡಲ್‌ವುಡ್ ನಟಿ ಮಾನ್ವಿತಾ ಕಾಮತ್ ಇತ್ತೀಚೆಗಷ್ಟೆ ತನ್ನ ತಾಯಿಯನ್ನ ಕಳೆದುಕೊಂಡಿದ್ದಾರೆ. ಮಾನ್ವಿತಾ ಅಮ್ಮ ಸುಜಾತ ಅನಾರೋಗ್ಯದಿಂದ ಅಗಲಿದರು. ಇದೀಗ ಅಮ್ಮನ ನೋವಿನಿಂದ ಹೊರ ಬರಲು ಮಾನ್ವಿತಾ ಸಿನಿಮಾ ಕಡೆ ಬ್ಯುಸಿ ಆದಂತೆ ಕಾಣುತ್ತಿದೆ. ಯಾಕಂದ್ರೆ ಮಾನ್ವಿತಾ ಹೊಸ ಸಿನಿಮಾ ಅನೌನ್ಸ್ ಆಗಿದೆ. ಈ ಭಾರಿ ನಟಿ ಮಾನ್ವಿತಾ ಕಾಮತ್, ಲವ್ಲಿ ಸ್ಟಾರ್ ಪ್ರೇಮ್‌ಗೆ ಜೋಡಿಯಾಗಿದ್ದಾರೆ.
ಜೂಟಾಟ, ಗುಬ್ಬಚ್ಚಿ ಸಿನಿಮಾಗಳ ಸಾರಥಿ ಅಥರ್ವ್ ಆರ್ಯ ನಿರ್ದೇಶನದ ಹೊಸ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದೆ. ಬೆಂಗಳೂರು, ಮೈಸೂರು, ಮಂಗಳೂರು ಸುತ್ತಮುತ್ತ 65 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದ್ದು, ಶೀಘ್ರದಲ್ಲಿಯೇ ಟೈಟಲ್ ರಿವೀಲ್ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ಲವ್ಲಿ ಸ್ಟಾರ್ ಪ್ರೇಮ್ ಹಾಗೂ ಟಗರು ಪುಟ್ಟಿ ಖ್ಯಾತಿಯ ಮಾನ್ವಿತ್ ಕಾಮತ್ ಮೊದಲ ಬಾರಿಗೆ ಜೋಡಿಯಾಗಿ ನಟಿಸುತ್ತಿದ್ದು, ತಬಲಾ ನಾಣಿ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಸಂಜಯ್, ಜೀವಿತಾ, ರಂಗೀತರಂಗ ಅರವಿಂದ್, ವಿಜಯ್ ಚೆಂಡೂರ್, ಬಲ ರಾಜ್ವಾಡಿ, ಮಿಮಿಕ್ರಿ ಗೋಪಿ, ಅರುಣ ಬಾಲರಾಜ್, ವರ್ಧನ್ ತೀರ್ಥಹಳ್ಳಿ, ಗಿರೀಶ್ ಜತ್ತಿ, ಪಟೇಲ್ ಅಣ್ಣಯ್ಯಪ್ಪ ಸೇರಿದಂತೆ ಹಲವು ತಾರಾಬಳಗ ಚಿತ್ರದಲ್ಲಿದೆ.
K.R.S ಪ್ರೊಡಕ್ಷನ್ಸ್ ನಡಿ ತಬಲಾನಾಣಿ ಹಾಗೂ ಸ್ನೇಹಿತರ ಜೊತೆಗೂಡಿ ನಿರ್ಮಿಸುತ್ತಿರುವ ಚೊಚ್ಚಲ ಚಿತ್ರ ಇದಾಗಿದೆ. ತಂದೆಯ ಮಹತ್ವ ಸಾರುವ, ಕುಟುಂಬದಲ್ಲಿ ಅಥವಾ ಸಮಾಜದಲ್ಲಿ ಆತ ಕಡೆಗಣನೆಗೆ ಒಳಗಾದಾಗ ಯಾವ ರೀತಿ ನೋವು ಅನುಭವಿಸುತ್ತಾನೆ ಎಂಬುದು ಕಥೆಯ ತಿರುಳು. ಇಲ್ಲಿ ತಂದೆಯಾಗಿ ತಬಲಾನಾಣಿ ಬಣ್ಣ ಹಚ್ಚಿದ್ದು, ರಂಗಭೂಮಿ ಕಲಾವಿದರಾದ ಸಂಜಯ್ ಹಾಗೂ ಜೀವಿತ ವಸಿಷ್ಠ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ.
ನಟಿ ಮಾನ್ವಿತಾ ಕಷ್ಟಕ್ಕೆ ನೆರವಾದ ನಟ ಸೋನು ಸೂದ್
ಪ್ರೊಡಕ್ಷನ್ ನಂಬರ್-1 ಸಿನಿಮಾಗೆ ನಾಗಾರ್ಜುನ್ ಆರ್ ಡಿ ಛಾಯಾಗ್ರಹಣ, ವೇಧಿಕ್ ವೀರ ಸಂಕಲನ, ಗಂಗಮ್ ರಾಜು ಕೊರಿಯೋಗ್ರಫಿ ಚಿತ್ರಕ್ಕಿದೆ. ಆಕಾಶ್ ಪರ್ವ ಸಂಗೀತ ನಿರ್ದೇಶನದ ಹಾಡುಗಳಿಗೆ ಡಾ.ನಾಗೇಂದ್ರ ಪ್ರಸಾದ್, ಕವಿರಾಜ್, k. ಕಲ್ಯಾಣ್, ಕಿನ್ನಾಳ್ ರಾಜ್ ಸಾಹಿತ್ಯ ಬರೆದಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.