ಮಾನ್ವಿತಾ 'ಬ್ಯಾಡ್' ಲುಕ್ ವೈರಲ್; ಹಳ್ಳಿ ಹುಡುಗಿಯಾಗಿ ಮಿಂಚಿದ 'ಟಗರು' ಪುಟ್ಟಿ

Published : Jul 14, 2023, 05:54 PM IST
ಮಾನ್ವಿತಾ 'ಬ್ಯಾಡ್' ಲುಕ್ ವೈರಲ್; ಹಳ್ಳಿ ಹುಡುಗಿಯಾಗಿ ಮಿಂಚಿದ 'ಟಗರು' ಪುಟ್ಟಿ

ಸಾರಾಂಶ

ಸ್ಯಾಂಡಲ್ ವುಡ್ ನಟಿ ಮಾನ್ವಿತಾ ಕಾಮತ್ ಮತ್ತೆ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಬ್ಯಾಡ್ ಸಿನಿಮಾ ಮೂಲಕ ಮಾನ್ವಿತಾ ಹಳ್ಳಿ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. 

ಸ್ಯಾಂಡಲ್ ವುಡ್‌ನ ಖ್ಯಾತ ನಟಿ ಮಾನ್ವಿತಾ ಕಾಮತ್ ತೆರೆಮೇಲೆ ಬರದೆ ವರ್ಷವೇ ಆಗಿದೆ. ಕೆಂಡಸಂಪಿಗೆ, ಟಗರು ಸೇರಿದಂತೆ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಮಾನ್ವಿತಾ ಎಲ್ಲೋದ್ರು ಎಂದು ಅಭಿಮಾನಿಗಳು ತಲೆಕೆಡಿಸಿಕೊಂಡಿದ್ದರು. ಇದೀಗ ಮಾನ್ವಿತಾ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಹೌದು ಮಾನ್ವಿತಾ ಬ್ಯಾಡ್ ಸಿನಿಮಾ ಮೂಲಕ ಮತ್ತೆ ಚಿತ್ರಮಂದಿರಕ್ಕೆ ಬರ್ತಿದ್ದಾರೆ. ಈಗಾಗಲೇ ಬ್ಯಾಡ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು ಅಭಿಮಾನಿಗಳ ಹೃದಯ ಗೆದ್ದಿದೆ. ಮಾನ್ವಿತಾ ಲುಕ್ ವೈರಲ್ ಆಗಿದೆ. ಹಳ್ಳಿ ಹುಡುಗಿಯಾಗಿ ಮಾನ್ವಿತಾ ಕಾಣಿಸಿಕೊಂಡಿದ್ದಾರೆ.   

ಪಿ.ಸಿ ಶೇಖರ್ ನಿರ್ದೇಶನದಲ್ಲಿ BAD ಸಿನಿಮಾ ಮೂಡಿಬರುತ್ತಿದೆ. ಚಿತ್ರದಲ್ಲಿ ಪ್ರಮುಖ ಪಾತ್ರಧಾರಿ ನಕುಲ್ ಗೌಡ ನಟಿಸಿದ್ದಾರೆ. ಮಾನ್ವಿತ ಕಾಮತ್ ಅವರ ಪಾತ್ರದ ಕುರಿತು ಮಾತನಾಡುವ ನಿರ್ದೇಶಕ ಪಿ.ಸಿ.ಶೇಖರ್, ಈ ಚಿತ್ರದಲ್ಲಿ ಮಾನ್ವಿತ ಅವರ ಪಾತ್ರದ ಹೆಸರು ಪವಿತ್ರ(ಪವಿ). ತುಂಬಾ ಬೋಲ್ಡ್ ಕ್ಯಾರೆಕ್ಟರ್ ಅವರದು. ವಿಲೇಜ್ ಬ್ಯಾಕ್ ಡ್ರಾಪ್ ನಲ್ಲಿ ಅವರ ಸ್ಟೋರಿ ಸಾಗುತ್ತಾ ಹೋಗುತ್ತದೆ. ನಾನು ಮುಂಚೆ ತಿಳಿಸಿದ ಹಾಗೆ ಕಾಮ, ಕ್ರೋಧ ಸೇರಿದಂತೆ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳು ನಮ್ಮ‌ ಚಿತ್ರದಲ್ಲಿದೆ. ಈ ಆರು ಪಾತ್ರಗಳಲ್ಲದೆ ಇನ್ನೊಂದು ಪಾತ್ರ ಕೂಡ ಇದೆ ಎಂದು. ಆ ಪಾತ್ರದಲ್ಲಿ ಮಾನ್ವಿತ ಅಭಿನಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ. 

ಪಾತ್ರದ ಬಗ್ಗೆ ಮಾನ್ವಿತಾ ಹೇಳಿದ್ದೇನು?

'ನನಗೆ BAD ಚಿತ್ರದ ಪಾತ್ರ ಬಹಳ ಇಷ್ಟವಾಯಿತು. ಪವಿತ್ರ ನನ್ನ ಪಾತ್ರದ ಹೆಸರು. ಯಾವುದಕ್ಕೂ ಅಂಜದ, ಬೋಲ್ಡ್ ಹುಡುಗಿಯ ಪಾತ್ರ ನನ್ನದು. ಈ ಹಿಂದೆ ನಿರ್ದೇಶಕ ಸೂರಿ ಅವರು ಕಾಸ್ಟ್ಯೂಮ್ಸ್ ಇದೇ ರೀತಿ ಇರಬೇಕು ಎಂದು ಆಸಕ್ತಿ ತೋರಿಸುತ್ತಿದ್ದರು. ಅದೇ ರೀತಿ ಪಿ.ಸಿ.ಶೇಖರ್ ಅವರು ಕೂಡ ಕಾಸ್ಟ್ಯೂಮ್ಸ್ ಗೆ ಹೆಚ್ಚು ಒತ್ತು ಕೊಟ್ಟಿದ್ದಾರೆ. ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತದ್ದೇನೆ' ಎಂದು ನಟಿ ಮಾನ್ವಿತ ಕಾಮತ್ ತಿಳಿಸಿದ್ದಾರೆ.

ರೈತ ಮಹಿಳೆ ಪಾತ್ರದಲ್ಲಿ ಮಾನ್ವಿತಾ ಹರೀಶ್‌!

ಎಸ್ ಆರ್ ವೆಂಕಟೇಶ್ ಗೌಡ ನಿರ್ಮಾಣದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ಪಿ.ಸಿ.ಶೇಖರ್ ಸಂಕಲನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಇದೆ. ಸಚಿನ್ ಬಿ ಹೊಳಗುಂಡಿ  ಸಂಭಾಷಣೆ ಬರೆದಿದ್ದಾರೆ. ಜಿ.ರಾಜಶೇಖರ್ ಅವರ ಕಲಾ ನಿರ್ದೇಶನ BAD ಚಿತ್ರಕ್ಕಿದೆ. 

ಅಮ್ಮನ ನಿಧನದ ನೋವಿನಲ್ಲೂ ಮಾನ್ವಿತಾ ಕಾಮತ್ ಹೊಸ ಸಿನಿಮಾ ಅನೌನ್ಸ್!

'ಪ್ರೀತಿಯ ರಾಯಭಾರಿ' ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ನಕುಲ್ ಗೌಡ ಈ ಸಿನಿಮಾದಲ್ಲಿ ಮಾನ್ವಿತಾ ಜೊತೆ ನಟಿಸುತ್ತಿದ್ದಾರೆ. ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್, ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಸಿನಿಮಾ: ‘45’ ಟ್ರೇಲರ್ ಬಿಡುಗಡೆಗೆ ಕೌಂಟ್‌ಡೌನ್
ಶಾರುಖ್ ಪುತ್ರ ಆರ್ಯನ್ ಖಾನ್ ಕನ್ನಡಿಗರ ಜೊತೆ ಅಸಭ್ಯ ವರ್ತನೆ ಮಾಡಿಲ್ಲ: ಸಚಿವ ಜಮೀರ್ ಪುತ್ರ ಹೇಳಿದ್ದೇನು?