
ಬೆಂಗಳೂರು: ನಟಿ ಮೇಘನಾ ರಾಜ್ ಅವರ ಸಂಗೀತ ಬಾರ್ ಆ್ಯಂಡ್ ರೆಸ್ಟೋರೆಂಟ್ (Sangeetha Bar and Restaurant) ಸಿನಿಮಾ ಸದ್ಯದಲ್ಲಿಯೇ ರಿಲೀಸ್ ಆಗಲಿದೆ. ಇದರಲ್ಲಿ ಕೋಮಲ್ ಅವರದ್ದು ಡಬಲ್ ರೋಲ್. ಕೋಮಲ್ ಕುಮಾರ್ ಈ ಚಿತ್ರದಲ್ಲಿ ಎರಡು ಪಾತ್ರ ಮಾಡಿದ್ದಾರೆ. ಒಂದು ಪಾತ್ರದಲ್ಲಿ ಸಿನಿಮಾ ಡೈರೆಕ್ಟರ್ ಆಗಿದ್ದಾರೆ. ಆದರೆ, ಇನ್ನೂ ಒಂದು ಪಾತ್ರದಲ್ಲಿ ಅರಮನೆಯಲ್ಲಿರೋ ಚಿತ್ರಕಲಾವಿದನ ಪಾತ್ರವೇ ಆಗಿದೆ. ಅನುಷಾ ರೈ ನಾಯಕಿ. ನಟಿ ಮೇಘನಾ ರಾಜ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ 'ಕತ್ತಲೆ ಕೋಣೆ', 'ಇನಾಂದಾರ್', 'ಗುಂಮ್ಮಿ' ಚಿತ್ರಗಳನ್ನು ನಿರ್ದೇಶಿಸಿದ್ದ ಯುವ ನಿರ್ದೇಶಕ ಸಂದೇಶ್ ಶೆಟ್ಟಿ ಆಜಿ 'ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್' ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಇದರ ಪ್ರಚಾರಕ್ಕೆ ಬಂದಿದ್ದ ನಟಿ ಮೇಘನಾ ರಾಜ್ ಅವರು, ವೇದಿಕೆಯ ಮೇಲೆ ಗುಟ್ಟೊಂದನ್ನು ಹೇಳಿದ್ದಾರೆ. ಅದು ನಟ ಜಗ್ಗೇಶ್ ಕುರಿತಾಗಿ. ನನ್ನ ಜೀವನದಲ್ಲಿ ಜಗ್ಗೇಶ್ ಅಂಕಲ್ ಪಾತ್ರ ಬಹುದೊಡ್ಡದಾಗಿದೆ. ನಾನು 4-5ಕ್ಲಾಸ್ನಲ್ಲಿ ಇರುವಾಗಲೇ ಅವರು ನನ್ನ ಬಗ್ಗೆ ಭವಿಷ್ಯ ನುಡಿದಿದ್ದರು. ನನ್ನ ಅಮ್ಮನನ್ನು ಉದ್ದೇಶಿಸಿ ಪಮ್ಮಿ (ಪ್ರಮಿಳಾ ಜೋಷಾಯಿ) ನೀವು ಏನೇ ಹೇಳಿ, ನಿಮ್ಮ ಮಗಳು ನಟಿನೇ ಆಗೋದು ಎಂದಿದ್ದರು. ಈ ಮೂಲಕ ಅವರೇ ಮೊದಲಿಗೆ ನನ್ನಲ್ಲಿ ಇರುವ ನಟನಾ ಕಲೆಯನ್ನು ಗುರುತಿಸಿದ್ದರು. ಇಂದು ಟೀಸರ್ ಲಾಂಚ್ಗೆ ಅವರು ಬಂದು ಹಾರೈಸುತ್ತಿರುವುದು ನನಗೆ ಖುಷಿ ಕೊಟ್ಟಿದೆ ಎಂದಿದ್ದಾರೆ.
ಈ ಸಿನಿಮಾದ ಕಥೆ ವಿಭಿನ್ನವಾಗಿದೆ ಎಂದು ಅದಕ್ಕೆ ಒಪ್ಪಿಕೊಂಡೆ ಎಂದಿದ್ದಾರೆ ನಟಿ. ಸಿನಿಮಾದ ಟೈಟಲ್ಲೇ ಹೇಳುವಂತೆ, ಇದೊಂದು ವಿಭಿನ್ನ ಸಿನಿಮಾ. ಎರಡು ಕಾಲ ಘಟ್ಟದಲ್ಲಿ ಈ ಸಿನಿಮಾದ ಕಥೆಯನ್ನು ನಿರ್ದೇಶಕರು ವಿಭಿನ್ನವಾಗಿ ಹೇಳುತ್ತಿದ್ದಾರೆ. ಕಾಮಿಡಿ, ಮನರಂಜನೆಯ ಜೊತೆ ಬೇರೆ ಒಂದಷ್ಟು ವಿಷಯಗಳು ಕೂಡ ಈ ಸಿನಿಮಾದಲ್ಲಿರಲಿದೆ. ಈ ಸಿನಿಮಾದಲ್ಲಿ ಒಂದು ಗೆಟಪ್‌ನಲ್ಲಿ ನಾನು ಸಿನಿಮಾ ಡೈರೆಕ್ಟರ್ ಪಾತ್ರ ಮಾಡಲಿದ್ದು, ಮತ್ತೊಂದು ಪಾತ್ರದ ಬಗ್ಗೆ ಈಗಲೇಹೇಳಲಾರೆ. ಒಟ್ಟಿನಲ್ಲಿ ಎರಡು ಶೇಡ್ ಇರುವಂಥ ಪಾತ್ರ ಇಲ್ಲಿದೆ. ಸಿನಿಮಾದ ಬಗ್ಗೆ ಮತ್ತು ಪಾತ್ರದ ಬಗ್ಗೆ ಹೇಳೋದಕ್ಕೆ ಸಾಕಷ್ಟಿದೆ ಎಂದಿದ್ದರು ಕೋಮಲ್
ಕನ್ನಡದಲ್ಲಿ ಇದೊಂದು ವಿಭಿನ್ನ ಸಿನಿಮಾವಾಗಿ ಮೂಡಿಬರಲಿದೆ ಎಂಬ ವಿಶ್ವಾಸವಿದೆ. ಕಳೆದ ಐದಾರು ತಿಂಗಳಿನಿಂದ ಈ ಸಿನಿಮಾದ ಪ್ರೀ-ಪ್ರೊಡಕ್ಷನ್ ಕೆಲಸಗಳು ಕೆಲಸಗಳು ನಡೆಯುತ್ತಿದೆ ಎಂದು ನಿರ್ಮಾಪಕ ವಿಕಾಸ್ ಎಸ್. ಶೆಟ್ಟಿ ಹೇಳಿದ್ದಾರೆ. 'ಜ್ಯೋತಿ ಪ್ರೊಡಕ್ಷನ್ಸ್' ಬ್ಯಾನರಿನಲ್ಲಿ ವಿಕಾಸ್ ಎಸ್. ಶೆಟ್ಟಿ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ. ಎಂ.ಕೆ.ಮಠ, ಪ್ರಕಾಶ್ ತುಮಿನಾಡು, ವರ್ಧನ್ ತೀರ್ಥಹಳ್ಳಿ, ಸಿರಿ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.