ಅನ್‌ಲಾಕ್ ಮಾಡಿ ಅದೇನು ಆಟ ಆಡಿದಾರೆ ಹ್ಯಾಂಡ್‌ಸಮ್ ಬಾಯ್ ಮಿಲಿಂದ್?

Published : Dec 20, 2024, 01:07 PM ISTUpdated : Dec 20, 2024, 01:09 PM IST
ಅನ್‌ಲಾಕ್ ಮಾಡಿ ಅದೇನು ಆಟ ಆಡಿದಾರೆ ಹ್ಯಾಂಡ್‌ಸಮ್ ಬಾಯ್ ಮಿಲಿಂದ್?

ಸಾರಾಂಶ

ಫೆಬ್ರವರಿ ೭, ೨೦೨೪ ರಂದು 'ಅನ್‌ಲಾಕ್ ರಾಘವ' ಚಿತ್ರ ತೆರೆಗೆ ಬರಲಿದೆ. ಮಿಲಿಂದ್ ಮತ್ತು ರೆಚೆಲ್ ಡೇವಿಡ್ ನಾಯಕ-ನಾಯಕಿಯಾಗಿ ನಟಿಸಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶನ ಮತ್ತು ಮಂಜುನಾಥ್ ದಾಸೇಗೌಡ ನಿರ್ಮಾಣ ಮಾಡಿದ್ದಾರೆ. ಚಿತ್ರದುರ್ಗದಲ್ಲಿ ಚಿತ್ರೀಕರಣಗೊಂಡ ಈ ಚಿತ್ರಕ್ಕೆ ಸತ್ಯಪ್ರಕಾಶ್ ಕಥೆ ಬರೆದಿದ್ದಾರೆ. ಸಾಧುಕೋಕಿಲ, ಶೋಭ್‌ರಾಜ್, ಅವಿನಾಶ್, ಭೂಮಿ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಶೂಟಿಂಗ್ ಆರಂಭವಾದಗಿನಿಂದಲೂ  ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ 'ಅನ್ ಲಾಕ್ ರಾಘವ' ಚಿತ್ರದ (Unlock Raghava) ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. 07 ಫೆಬ್ರವರಿ 2024 ರಂದು ಈ ಚಿತ್ರ ಬಿಡುಗಡೆಯಾಗಲಿದೆ. ಯುವ ಪ್ರತಿಭೆಗಳಾದ ಮಿಲಿಂದ್ ಹಾಗೂ ರೆಚೆಲ್ ಡೇವಿಡ್(ಲವ್ ಮಾಕ್ಟೇಲ್) ನಾಯಕ-ನಾಯಕಿಯಾಗಿ ನಟಿಸಿರುವ ಈ ಚಿತ್ರವನ್ನು ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶಿಸಿದ್ದಾರೆ. ಚಿತ್ರದ ಕುರಿತು ಮಾಹಿತಿ  ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. 

ನನ್ನ ಹಿಂದಿನ ಚಿತ್ರಗಳನ್ನು ನೋಡಿದ್ದ ನನ್ನ ಗೆಳೆಯರು, ನಿನ್ನ ಚಿತ್ರಗಳಲ್ಲಿ ಗ್ಲಾಮರ್ ನಾಯಕಿಯರು ಇರುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ 'ಅನ್ ಲಾಕ್ ರಾಘವ' ಚಿತ್ರದ ಫಸ್ಟ್ ಲುಕ್ ನಲ್ಲಿ ರೆಚೆಲ್ ಅವರನ್ನು ನೋಡಿದ ಗೆಳೆಯರು ಈಗ ನೀನೊಬ್ಬ ಕಮರ್ಷಿಯಲ್ ಚಿತ್ರದ ನಿರ್ದೇಶಕ ಎಂದು ಹೇಳಿದರು‌. ಇನ್ನು, ನಾಯಕ ಮಿಲಿಂದ್ ಸುರದ್ರೂಪಿ ನಟ ಅಷ್ಟೇ ಅಲ್ಲ. ಭರವಸೆಯ ನಟ ಕೂಡ ಹೌದು. 

ನೀವು ಬುದ್ಧಿವಂತರಾಗಿದ್ರೆ ಚಿತ್ರಮಂದಿರದಿಂದ ಈಗಲೇ ಎದ್ದೋಗಿ; ದಡ್ಡರಾಗಿದ್ದರೆ?

ಇದೊಂದು ಪಕ್ಕಾ‌ ಮನೋರಂಜನೆಯ ರಸದೌತಣ ನೀಡುವ , ಪ್ರೇಕ್ಷಕ ಕೊಟ್ಟ ದುಡ್ಡಿಗೆ ಮೋಸ ಮಾಡದ ಸಿನಿಮಾ. 'ರಾಮ ರಾಮ ರೆ' ಖ್ಯಾತಿಯ ಸತ್ಯಪ್ರಕಾಶ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಹೆಚ್ಚಿನ ಭಾಗದ ಚಿತ್ರೀಕರಣ ಚಿತ್ರದುರ್ಗದಲ್ಲಾಗಿದೆ. ಲವಿತ್ ಅವರ ಛಾಯಾಗ್ರಹಣದಲ್ಲಿ ಚಿತ್ರದುರ್ಗದ ಸೊಬಗನ್ನು ನೋಡುವುದೇ ಚೆಂದ. ಅನೂಪ್ ಸೀಳಿನ್ ಅವರು ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಈಗಾಗಲೇ ಪ್ರೇಕ್ಷಕರ ಮನ ಗೆದ್ದಿದೆ. ಚಿತ್ರ ಕೂಡ ಎಲ್ಲರ ಮನಸ್ಸಿಗೆ ಹತ್ತಿರವಾಗಲಿದೆ ಎಂದರು ನಿರ್ದೇಶಕ ದೀಪಕ್ ಮಧುವನಹಳ್ಳಿ.

ಸತ್ಯಪ್ರಕಾಶ್ ಅವರು ಹೇಳಿದ ಕಥೆ ಬಹಳ ಇಷ್ಟವಾಯಿತು. ಹೊಸ ನಾಯಕನ ಎಂಟ್ರಿಗೆ ಬೇಕಾದ ಎಲ್ಲಾ  ಅಂಶಗಳನ್ನು ಸೇರಿಸಿ ಒಂದು ಚೆಂದವಾದ ಕಥೆಯನ್ನು ಸತ್ಯಪ್ರಕಾಶ್ ಅವರು ಕಟ್ಟಿ ಕೊಟ್ಟಿದ್ದಾರೆ. ಅಷ್ಟೇ ಸುಂದರವಾಗಿ ದೀಪಕ್ ನಿರ್ದೇಶನ ಮಾಡಿದ್ದಾರೆ‌. ರೆಚೆಲ್ ಅವರ ಅಭಿನಯ ಅದ್ಭುತವಾಗಿದೆ‌. ನೀವು ಈ ಹಿಂದೆ ಯಾವ ಚಿತ್ರಗಳಲ್ಲೂ ನೋಡಿರದ ಸಾಧುಕೋಕಿಲ ಹಾಗೂ ಶೋಭ್ ರಾಜ್ ಅವರನ್ನು ನಮ್ಮ ಚಿತ್ರದಲ್ಲಿ ನೋಡಬಹುದು. 

ಕಿಚ್ಚ ಸುದೀಪ್ ಬಿಗ್ ಬಾಸ್ ಶೋಗೆ 'ಟಾಟಾ ಬೈಬೈ' ಹೇಳಲು ಕಾರಣ ಇದು, ಮತ್ತೇನೂ ಇಲ್ಲ!

ಅವಿನಾಶ್, ಭೂಮಿ ಶೆಟ್ಟಿ ಮುಂತಾದವರು ಈ ಚಿತ್ರದಲ್ಲಿದ್ದಾರೆ. ತಂತ್ರಜ್ಞರ ಕಾರ್ಯವೈಖರಿ ಕೂಡ ಚೆನ್ನಾಗಿದೆ. ಇತ್ತೀಚಿಗೆ ಟೆಕ್ನಿಕಲ್ ಶೋ ನಲ್ಲಿ ಚಿತ್ರ ನೋಡಿದಾಗ ಎಲ್ಲರ ಮುಖದಲ್ಲಿ ಭರವಸೆಯ ನಗು ಮೂಡಿತ್ತು. ಆ ನಗು ಪ್ರೇಕ್ಷಕನ ಮುಖದಲ್ಲೂ ಮೂಡಲಿದೆ ಎಂಬ ಭರವಸೆ ಇದೆ ಎಂದರು ನಾಯಕ ಮಿಲಿಂದ್.    

'ದೀಪಕ್ ಅವರು ಈ ಚಿತ್ರದ ಕಥೆ ಹೇಳಿದಾಗಲೇ ಈ ಚಿತ್ರದಲ್ಲಿ  ನಿರ್ಧರಿಸಿದ್ದೆ. ಅಷ್ಟು ಸುಂದರ ಕಥಾನಕವಿದು. ನಡೆಸಬೇಕೆಂದು ಚಿತ್ರದಲ್ಲಿ ನಾನು ಪ್ರಾಚ ಶಾಸ್ತ್ರಜ್ಞೆ. ಜಾನಕಿ ನನ್ನ ಪಾತ್ರದ ಹೆಸರು' ಎಂದರು ನಾಯಕಿ ರೆಚೆಲ್ ಡೇವಿಡ್.

ಭಾರತದ ವಿಶ್ವ ಚೆಸ್ ಚಾಂಪಿಯನ್‌ ಗುಕೇಶ್ ಸಕ್ಸಸ್‌ ಹಿಂದಿನ ಗುಟ್ಟು ರಿವೀಲ್ ಆಯ್ತು!

'ಸಾಕಷ್ಟು ಸವಾಲುಗಳನ್ನು ಎದುರಿಸಿ ನಮ್ಮ ಚಿತ್ರ ಈಗ ತೆರೆಗೆ ಬರಲು ಸಿದ್ದವಾಗಿದೆ. ಇತ್ತೀಚಿಗೆ ತಂತ್ರಜ್ಞರಿಗಾಗಿ ಆಯೋಜಿಸಲಾಗಿದ್ದ ಪ್ರದರ್ಶನದಲ್ಲಿ ಚಿತ್ರವನ್ನು ನೋಡಿದಾಗ ಮನಸ್ಸಿಗೆ ಬಹಳ ಖುಷಿಯಾಯಿತು. ಇದೊಂದು ನಮ್ಮ ಸೊಗಡಿನ ಚಿತ್ರ. 'ಅನ್ ಲಾಕ್ ರಾಘವ' ಚೆನ್ನಾಗಿ ಮೂಡಿಬರಲು ಚಿತ್ರತಂಡದ ಸಹಕಾರವೇ ಕಾರಣ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ' ಎಂದರು ನಿರ್ಮಾಪಕ ಮಂಜುನಾಥ್ ದಾಸೇಗೌಡ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಅಂದು ಕನ್ನಡಿಗರ ಕೆಣಕಿದ್ದ ಕರಾವಳಿ ಹುಡುಗಿ ಇಂದು ಮನೆಮಗಳು ಆಗಿದ್ದು ಹೇಗೆ? ಸೀಕ್ರೆಟ್ ಸ್ಟ್ರಾಟಜಿ ಏನು?
ರಗಡ್‌ ಕಾಪ್‌, ಮ್ಯಾಕ್ಸಿಮಮ್‌ ಮಾಸ್‌.. 'ಮಾರ್ಕ್' ಕಥೆ ಬಗ್ಗೆ ಸ್ಫೋಟಕ ಸತ್ಯ ಬಿಚ್ಚಿಟ್ಟ ಕಿಚ್ಚ ಸುದೀಪ್!