ನಾದಬ್ರಹ್ಮ ಹಂಸಲೇಖ ಅಸ್ವಸ್ಥ; ಆಸ್ಪತ್ರೆಗೆ ದಾಖಲು

Published : Oct 10, 2022, 01:23 PM ISTUpdated : Oct 10, 2022, 02:40 PM IST
 ನಾದಬ್ರಹ್ಮ ಹಂಸಲೇಖ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಾರಾಂಶ

ಸ್ಯಾಂಡಲ್‌ವುಡ್‌ನ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಎದೆ ನೋವು ಕಾಣಿಸಿಕೊಂಡ ಕಾರಣ ಹಂಸಲೇಖ ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಸ್ಯಾಂಡಲ್‌ವುಡ್‌ನ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಎದೆ ನೋವು ಕಾಣಿಸಿಕೊಂಡ ಕಾರಣ ಹಂಸಲೇಖ ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಂಸಲೇಖ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಅವರ  ಅಭಿಮಾನಿಗಳಲ್ಲಿ ಮತ್ತು ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ. ಆದರೆ ಏನು ತೊಂದರೆ ಇಲ್ಲ, ಆತಂಕ ಪಡಬೇಕಾಗಿಲ್ಲ ಎಂದು ವೈದ್ಯರು ಸೂಚಿಸಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

Hamsalekha: ಶೂದ್ರ ಪದವನ್ನು ಎಲ್ಲ ನಿಘಂಟುಗಳಿಂದ ತೆಗೆದು ಹಾಕಿ

ಗ್ಯಾಸ್ಟ್ರಿಕ್  ಸಮಸ್ಯೆಯಿಂದಾಗಿ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ. ಆದರೆ ಈ ಹಿಂದೆ ಹಂಸಲೇಖ ಒಪನ್ ಹಾರ್ಟ್ ಸರ್ಜರಿ ಮಾಡಿಸಿಕೊಂಡಿದ್ದರು. ಹಾಗಾಗಿ ಎದೆ ನೋವು ಕಾಣಿಸಿಕೊಂಡ ತಕ್ಷಣ ಆತಂಕ ಮನೆ ಮಾಡಿತ್ತು. ಸದ್ಯ ರಾಜಾಜಿನಗರ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಹಂಸಲೇಖ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯವಾಗಿದ್ದಾರೆ ಗಾಬರಿ ಪಡಬೇಕಾಗಿಲ್ಲ ಎಂದು ವೈದ್ಯರು ಸೂಚಿಸಿದ್ದಾರೆ.  

ಅಂದು ಗೋಕಾಕ್‌ ಚಳುವಳಿ, ಇಂದು ಕುಪ್ಪಳಿ ಕಹಳೆ: ಹಂಸಲೇಖ

ಸದ್ಯ ಆಸ್ಪತ್ರೆಯ ಜನರಲ್ ವಾರ್ಡ್ ನಲ್ಲೇ ಒಂದು ದಿನ ರೆಸ್ಟ್ ಮಾಡುವಂತೆ ವೈದ್ಯರು ಸಲಹೆ ಕೊಟ್ಟಿದ್ದಾರೆ. ವೈದ್ಯರ ಸಲಹೆ ಮೇರೆಗೆ ಒಂದು ದಿನದ ಮಟ್ಟಿಗೆ ಹಂಸಲೇಖ ಅವರು ಆಸ್ಪತ್ರೆಯಲ್ಲಿ ಉಳಿಯಲಿದ್ದಾರೆ. 
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
'ಧಂ' ಬೇಕಲೇ ಎಂದಿದ್ದ ದರ್ಶನ್‌ಗೆ ಟಾಂಗ್ ಕೊಟ್ರಾ ಸುದೀಪ್? ಏನಿದು ಮಾರ್ಕ್ ಡೈಲಾಗ್ ಮರ್ಮ?