ಟೈಟಲ್ ಸ್ಪಾನ್ಸರ್ ಎವಿಆರ್ ಗ್ರೂಪ್ಸ್ ವತಿಯಿಂದ ಶೈಲೇಶ್ ಅವರು ಮಾತನಾಡಿ, IPT12 ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಚೆನ್ನಾಗಿ ಆಡುವ ಎಲ್ಲರಿಗೂ ಬಹುಮಾನ ವಿತರಣೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಕಿರುತೆರೆ ಕಲಾವಿದರಿಗಾಗಿ ಟಿಪಿಎಲ್-ಟೆಲಿವಿಷನ್ ಪ್ರೀಮಿಯರ್ ಲೀಗ್ ಎಂಬ ಕ್ರಿಕೆಟ್ ಟೂರ್ನಮೆಂಟ್ ನಡೆಸಿಕೊಂಡು ಬರ್ತಿರುವ ಎನ್ 1 ಕ್ರಿಕೆಟ್ ಅಕಾಡೆಮಿ ಇದೀಗ ಮತ್ತೊಂದು ಪ್ರಯತ್ನಕ್ಕೆ ಕೈ ಹಾಕಿದೆ. ಈಗಾಗಲೇ ಯಶಸ್ವಿಯಾಗಿ ಮೂರು ಟಿಪಿಎಲ್ ಸೀಸನ್ ಮುಗಿಸಿರುವ ಎನ್ 1 ಅಕಾಡೆಮಿ ಸೂತ್ರಧಾರ ಸುನಿಲ್ ಕುಮಾರ್ ಬಿ.ಆರ್ ಈಗ IPT12 ಎಂಬ ಹೊಸ ಕ್ರಿಕೆಟ್ ಟೂರ್ನಮೆಂಟ್ ಗೆ ಚಾಲನೆ ಕೊಟ್ಟಿದ್ದಾರೆ.
ಡಾಕ್ಟರ್ಸ್, ಲಾಯರ್ಸ, ಸಿನಿಮಾ ನಟರು, ಕಿರುತೆರೆ ಕಲಾವಿದರು, ಮಾಧ್ಯಮದವರು ಹೀಗೆ ಎಲ್ಲಾ ಕ್ಷೇತ್ರದವರು ಸೇರಿ ಆಡಲಿರುವ ಕ್ರಿಕೆಟ್ ಟೂರ್ನಮೆಂಟ್ IPT12. ಈ ಪಂದ್ಯಾವಳಿ ಆರಂಭಕ್ಕೂ ಮುನ್ನ ಲೋಗೋ ಬಿಡುಗಡೆ ಮಾಡಲಾಯಿತು. ಬೆಂಗಳೂರಿನ ಖಾಸಗಿ ಹೋಟೆಲ್ ವೊಂದರಲ್ಲಿ ಈ ಕಾರ್ಯಕ್ರಮ ನೆರವೇರಿದೆ. ನಟಿಯರಾದ ತನಿಷಾ ಕುಪ್ಪಂಡ, ಭವ್ಯ ಗೌಡ, ಎನ್ 1 ಕ್ರಿಕೆಟ್ ಅಕಾಡೆಮಿ ಅಧ್ಯಕ್ಷ ಸುನಿಲ್ ಕುಮಾರ್ ಬಿ.ಆರ್. ಟೈಟಲ್ ಸ್ಪಾನ್ಸರ್ ಎವಿಆರ್ ಗ್ರೂಪ್ಸ್ ವತಿಯಿಂದ ಶೈಲೇಶ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಮ್ಮ ಮನೆಯಲ್ಲಿ ಅವರವರ ಕೋಣೆಯಲ್ಲಿ ಕುಳಿತು ಊಟ ಮಾಡುವ ಪದ್ಧತಿಯಿಲ್ಲ; ರಾಘವೇಂದ್ರ ರಾಜ್‌ಕುಮಾರ್
ಬಳಿಕ ನಟಿ ತನಿಷಾ ಕುಪ್ಪಂಡ ಮಾತನಾಡಿ, N1 ಕ್ರಿಕೆಟ್ ಅಕಾಡೆಮಿ ಮೂಲಕ ಹಲವು ಟೂರ್ನಮೆಂಟ್ ಮಾಡುವ ಮೂಲಕ ಸುನಿಲ್ ಅವರು ಖ್ಯಾತಿ ಪಡೆದಿದ್ದಾರೆ. ನಾನು ಇದಕ್ಕೂ ಮುನ್ನ ಟಿಪಿಎಲ್ ಸೀಸನ್ ಒಂದರಲ್ಲಿ ಟೀಂ ಒಂದಕ್ಕೆ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದೆ. ಯಾವುದೇ ಪ್ರೊಫೆಷನ್ ಆಗಲಿ ಕ್ರಿಕೆಟ್ ಅಂದರೆ ಪ್ರಾಣ ಕೊಡುವವರು ಬಹಳಷ್ಟು ಜನ ಇದ್ದಾರೆ. IPT12 ಈ ಟೂರ್ನಮೆಂಟ್ ವಿಶೇಷತೆ ಏನೆಂದರೆ ಎಲ್ಲಾ ಕ್ರಿಕೆಟ್ ಪ್ರೇಮಿಗಳು ಇದರಲ್ಲಿ ಭಾಗಿಯಾಗಬಹುದು. ಎನ್ 1 ಕ್ರಿಕೆಟ್ ಅಕಾಡೆಮಿ ಅಂದರೆ ಹೊಸ ಪ್ರಯತ್ನ. ಈ ಮೂಲಕ ಮಾಧ್ಯಮದವರು, ಡಾಕ್ಟರ್ಸ್, ಲಾಯರ್ಸ, ಸಿನಿಮಾ ನಟರು, ಕಿರುತೆರೆ ಕಲಾವಿದರು, ಮಾಧ್ಯಮದವರಿಗೆ IPT12 ಏರ್ಪಡಿಸಲಾಗಿದೆ ಎಂದರು.
ಡಾ ರಾಜ್‌ಕುಮಾರ್ ಹುಟ್ಟುಹಬ್ಬದ ಸಂಭ್ರಮದಂದು ರಾಘವೇಂದ್ರ ರಾಜ್‌ಕುಮಾರ್ ಹೇಳಿದ್ದೇನು?
ಟೈಟಲ್ ಸ್ಪಾನ್ಸರ್ ಎವಿಆರ್ ಗ್ರೂಪ್ಸ್ ವತಿಯಿಂದ ಶೈಲೇಶ್ ಅವರು ಮಾತನಾಡಿ, IPT12 ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಚೆನ್ನಾಗಿ ಆಡುವ ಎಲ್ಲರಿಗೂ ಬಹುಮಾನ ವಿತರಣೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ಡಾ. ರಾಜ್‌ಕುಮಾರ್ ತಬ್ಬಿ, ಮುತ್ತಿಟ್ಟಿದ್ದೇಕೆ ಎಂಜಿಆರ್?
ಎವಿಆರ್ ಗ್ರೂಪ್ಸ್ ವತಿಯಿಂದ ಶೈಲೇಶ್, ಅಭಿಷೇಕ್ ಹಾಗೂ ಪ್ರಸನ್ನ IPT12 ಕ್ರಿಕೆಟ್ ಟೂರ್ನಮೆಂಟ್ ಗೆ ಟೈಟಲ್ ಸ್ಪಾನ್ಸರ್ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ತಂಡಗಳು, ಸೇರಿದಂತೆ ಮತ್ತಿತರ ಅಪ್ ಡೇಟ್ ನೀಡಲಾಗುತ್ತದೆ.