ಅಥರ್ವ್ ಆರ್ಯ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿರುವ 'ಅಪ್ಪಾ ಐ ಲವ್ ಯೂ' ಸಿನಿಮಾ ತೆರೆಗೆ ಬರಲು ಸನ್ನದ್ಧವಾಗಿದೆ. ಏಪ್ರಿಲ್ 12ಕ್ಕೆ ಅಥರ್ವ್ ಎರಡನೇ ಪ್ರಯತ್ನಕ್ಕೆ ತೆರೆಗೆ ಬರ್ತಿದೆ. ಟೈಟಲ್ ಹೇಳುವಂತೆ ಇದು ತಂದೆಯ ಮಹತ್ವ ಸಾರುವ ಸಿನಿಮಾ.
ಬಹಳ ದಿನಗಳ ಬಳಿಕ ಲವ್ಲಿ ಸ್ಟಾರ್ ಪ್ರೇಮ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಕನ್ನಡ ಸಿನಿಮಾವೊಂದು ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈ ಚಿತ್ರದಲ್ಲಿ ಟಗರು ಪುಟ್ಟಿ ಮಾನ್ವಿತಾ ಕಾಮತ್ ಕೂಡ ನಟಿಸುತ್ತಿದ್ದು, ಈ ಜೋಡಿ ಇದೇ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದೆ. ಅಂದ್ಹಾಗೆ ಆ ಸಿನಿಮಾದ ಹೆಸರು 'ಅಪ್ಪಾ ಐ ಲವ್ ಯೂ'.
ಅಥರ್ವ್ ಆರ್ಯ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿರುವ 'ಅಪ್ಪಾ ಐ ಲವ್ ಯೂ' ಸಿನಿಮಾ ತೆರೆಗೆ ಬರಲು ಸನ್ನದ್ಧವಾಗಿದೆ. ಏಪ್ರಿಲ್ 12ಕ್ಕೆ ಅಥರ್ವ್ ಎರಡನೇ ಪ್ರಯತ್ನಕ್ಕೆ ತೆರೆಗೆ ಬರ್ತಿದೆ. ಟೈಟಲ್ ಹೇಳುವಂತೆ ಇದು ತಂದೆಯ ಮಹತ್ವ ಸಾರುವ ಸಿನಿಮಾ. ಈ ಸಿನಿಮಾದಲ್ಲಿ ತಂದೆಯಾಗಿ ತಬಲಾನಾಣಿ ಬಣ್ಣ ಹಚ್ಚಿದ್ದಾರೆ.
ತೆರೆಗೆ ಬರಲು ಸಜ್ಜಾಗಿದೆ ನೆನಪಿರಲಿ ಪ್ರೇಮ್-ಮಾನ್ವಿತಾ ಸಿನಿಮಾ; 'ಅಪ್ಪಾ ಐ ಲವ್ ಯೂ' ಅಂತಿರೋದು ಯಾರು?
ಪ್ರೇಮ್ ಹಾಗೂ ಮಾನ್ವಿತಾ ಕಾಮತ್ ಜೊತೆಗೆ ಸಂಜಯ್, ಜೀವಿತಾ, ರಂಗೀತರಂಗ ಅರವಿಂದ್ ರಾವ್ , ವಿಜಯ್ ಚೆಂಡೂರ್, ಬಲ ರಾಜ್ವಾಡಿ, ಮಿಮಿಕ್ರಿ ಗೋಪಿ, ಅರುಣ ಬಾಲರಾಜ್, ವರ್ಧನ್ ತೀರ್ಥಹಳ್ಳಿ, ಗಿರೀಶ್ ಜತ್ತಿ, ಪಟೇಲ್ ಅಣ್ಣಯ್ಯಪ್ಪ ಸೇರಿದಂತೆ ಹಲವು ತಾರಾಬಳಗ ಚಿತ್ರದಲ್ಲಿದೆ.
ಒಂದು ಮಾನವ ಜೀವವನ್ನು ರಕ್ಷಿಸಿದರೆ....' ಇಸ್ಲಾಂ ಸಂದೇಶವನ್ನು ಮನಮುಟ್ಟುವಂತೆ ಬಿಚ್ಚಿಟ್ಟ ಶಾರುಖ್ ಖಾನ್
'ಅಪ್ಪಾ ಐ ಲವ್ ಯೂ' ಸಿನಿಮಾಗೆ ನಾಗಾರ್ಜುನ್ ಆರ್ ಡಿ ಛಾಯಾಗ್ರಹಣ, ವೇಧಿಕ್ ವೀರ ಸಂಕಲನ, ಗಂಗಮ್ ರಾಜು ಕೊರಿಯೋಗ್ರಫಿ ಚಿತ್ರಕ್ಕಿದೆ. ಆಕಾಶ್ ಪರ್ವ ಸಂಗೀತ ನಿರ್ದೇಶನದ ಹಾಡುಗಳಿಗೆ ಡಾ.ನಾಗೇಂದ್ರ ಪ್ರಸಾದ್, ಕವಿರಾಜ್, ಕೆ. ಕಲ್ಯಾಣ್, ಕಿನ್ನಾಳ್ ರಾಜ್ ಸಾಹಿತ್ಯ ಬರೆದಿದ್ದಾರೆ. 'KRS ಪ್ರೊಡಕ್ಷನ್ಸ್' ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ. ಬೆಂಗಳೂರು, ಮೈಸೂರು, ಮಂಗಳೂರು ಸುತ್ತಮುತ್ತ ಶೂಟಿಂಗ್ ನಡೆಸಲಾಗಿದೆ.