
ಬೆಂಗಳೂರು(ಏ. 17) ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಕಲ್ಯಾಣ ಸರಳವಾಗಿ ನರೆವೇರಿದೆ. ವಿವಾಹದ ನಂತರ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಧನ್ಯವಾದ ಸಲ್ಲಿಸಿದ್ದಾರೆ.
ನನ್ನ ಪುತ್ರ ನಿಖಿಲ್ ಮತ್ತು ರೇವತಿ ಅವರ ವಿವಾಹ ಇಂದು ಅತ್ಯಂತ ಸರಳ ರೀತಿಯಲ್ಲಿ ನಡೆಯಲು ಸಹಕರಿಸಿದ ಲಕ್ಷಾಂತರ ಕಾರ್ಯಕರ್ತರು ಮತ್ತು ಕುಟುಂಬದ ಹಿತೈಷಿಗಳಿಗೆ ಹೃದಯಾಂತರಾಳದ ಕೃತಜ್ಞತೆಗಳು.
ದಾಂಪತ್ಯಕ್ಕೆ ಕಾಲಿಟ್ಟ ನವಜೋಡಿಗೆ ಶುಭಾಶಯ ಮದುವೆ ಸಂಭ್ರಮ ಹೇಗಿತ್ತು?
ಇಡೀ ಜಗತ್ತು ಕೊರೋನಾ ವೈರಸ್ ಎಂಬ ಮಹಾಮಾರಿಯಿಂದ ತತ್ತರಿಸುತ್ತಿರುವ ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ವ್ಯವಸ್ಥಿತವಾಗಿ ಸಾಮಾಜಿಕ ಅಂತರ ಹಾಗೂ ಮುನ್ನೆಚ್ಚರಿಕೆಯ ನಡುವೆ ವಿವಾಹ ಅಚ್ಚುಕಟ್ಟಾಗಿ ನೆರವೇರಿದೆ.
ನಿಖಿಲ್-ರೇವತಿ ಕಲ್ಯಾಣ; ಚಿತ್ರಗಳಲ್ಲಿ
ಶಾಸಕರು, ಕಾರ್ಯಕರ್ತರು, ಮುಖಂಡರು, ಕುಟುಂಬದ ಹಿತೈಷಿಗಳು ಸೇರಿದಂತೆ ನಾಡಿನ ಲಕ್ಷಾಂತರ ಜನರು ನನ್ನ ಕುಟುಂಬದ ಕುಡಿಯ ವಿವಾಹಕ್ಕೆ ಮನೆಯಿಂದಲೇ ಹರಸಿದ್ದೀರಿ. ನಾನು ಮತ್ತು ನನ್ನ ಕುಟುಂಬ ವರ್ಗ ಮಾಡಿದ ಮನವಿಗೆ ನೀವುಗಳು ಸ್ಪಂದಿಸಿದ ರೀತಿ ಅನುಕರಣೀಯ ಮತ್ತು ಮಾದರಿ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದು ಧನ್ಯವಾದ ಸಲ್ಲಿಸಿದ್ದಾರೆ.
ಕೊರೋನಾ ಮಾರಿಯ ಲಾಕ್ ಡೌನ್ ಇರುವ ಕಾರಣ ವಿವಾಹ ಸರಳವಾಗಿ ನೆರವೇರಿತು. ಕೇವಲ ಕುಟುಂಬ ಸದಸ್ಯರು ಮಾತ್ರ ಭಾಗವಹಿಸಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.