ಮಳೆಯಲ್ಲಿ ಮೈಚಳಿ ಬಿಟ್ಟು ನಟನ ಜೊತೆ ರೊಮಾನ್ಸ್​: ವಿಡಿಯೋ ಶೇರ್​ ಮಾಡಿ ಕಚಗುಳಿ ಇಟ್ಟ ನಿವೇದಿತಾ ಗೌಡ!

By Suchethana D  |  First Published Nov 8, 2024, 7:04 PM IST

ಮಳೆಯಲ್ಲಿ ಮೈಚಳಿ ಬಿಟ್ಟು ನಾಯಕನ ಜೊತೆ ರೊಮಾನ್ಸ್​ ಮಾಡಿದ ನಿವೇದಿತಾ ಗೌಡ. ವಿಡಿಯೋ ಶೇರ್​ ಮಾಡಿದ ನಟಿ. 
 


ಬಿಗ್​ಬಾಸ್​ ಖ್ಯಾತಿಯ ನಿವೇದಿತಾ ಗೌಡ ಅವರು ಇತ್ತೀಚಿನ ದಿನಗಳಲ್ಲಿ ಸಕತ್​ ಹಾಟ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಕೆಲ ತಿಂಗಳುಗಳಿಂದ ಸ್ನೇಹಿತೆಯೊಬ್ಬರ ಜೊತೆ ರೀಲ್ಸ್​ ಶುರುವಿಟ್ಟುಕೊಂಡಿದ್ದಾರೆ. ಗಾಯಕ ಚಂದನ್​ ಶೆಟ್ಟಿ ಅವರಿಂದ ಡಿವೋರ್ಸ್​ ಪಡೆದ ಮೇಲೆ ಸ್ನೇಹಿತೆಯ ಜೊತೆಗೆ ರೀಲ್ಸ್​ ಹೆಚ್ಚಾಗಿದೆ.  ಬಳಕುವ ಬಳ್ಳಿಯಂತಿರೋ ನಿವೇದಿತಾ, ಎದೆಗೆ ಪ್ಲಾಸ್ಟಿಕ್​ ಸರ್ಜರಿ ಮಾಡಿಸಿಕೊಂಡ್ರಾ ಎಂದು ಪ್ರತಿಬಾರಿಯೂ ಅವರಿಗೆ ಕಮೆಂಟ್ಸ್​ಗಳ ಸುರಿಮಳೆಯೇ ಆಗುತ್ತಿದೆ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ನಟಿ ಧಾರಾಳವಾಗಿ ದೇಹ ಪ್ರದರ್ಶನ ಮಾಡುತ್ತಲೇ ರೀಲ್ಸ್​ ಮಾಡುತ್ತಿರುವ ಕಾರಣ, ತೀರಾ ಕೆಟ್ಟದಾಗಿರೋ ಕಮೆಂಟ್ಸ್​ ಜಾಸ್ತಿಯಾಗುತ್ತಿವೆ. ಇದೇ ಕಾರಣಕ್ಕೆ ಚಂದನ್​ ಶೆಟ್ಟಿ ಡಿವೋರ್ಸ್​ ಪಡೆದುಕೊಂಡದ್ದು, ರೀಲ್ಸ್ ಮಾಡುವುದಕ್ಕಾಗಿಯೇ ವಿಚ್ಛೇದನ ಪಡೆದ ಮೊದಲ ಮಹಿಳೆ... ಹೀಗೆ ಏನೇನೋ ಕಮೆಂಟ್ಸ್​ ಮಾಡಿ ನಿವೇದಿತಾರ ತೇಜೋವಧೆ ಮಾಡಲಾಗುತ್ತಿದೆ. 

ಡಿವೋರ್ಸ್ ಬಳಿಕ ಈಕೆಯನ್ನು ಸುಮ್ಮನೆ ಇರಲು ಬಿಡುತ್ತಲೇ ಇಲ್ಲ, ಸದಾ ಟ್ರೋಲ್​ ಮಾಡುತ್ತಲೇ ಕಾಲ ಕಳೆಯುತ್ತಿದ್ದಾರೆ ನೆಟ್ಟಿಗರು. ಆದರೆ ಇದ್ಯಾವುದಕ್ಕೂ ಇದುವರೆಗೆ ನಿವೇದಿತಾ ತಲೆ ಕೆಡಿಸಿಕೊಂಡವರೇ ಅಲ್ಲ! ಯಾರು ಏನೇ ಹೇಳಿದರೂ ನಿವೇದಿತಾ ಮಾತ್ರ ಈಗ ಸಿನಿಮಾದಲ್ಲಿ ಮಿಂಚಲು ರೆಡಿಯಾಗಿದ್ದಾರೆ.  ನಿವೇದಿತಾ ಗೌಡ ಹಾಗೂ ಅವರ ಮಾಜಿ ಪತಿ ನಟ-ಗಾಯಕ ಚಂದನ್ ಶೆಟ್ಟಿ ನಟನೆಯ 'ಮುದ್ದು ರಾಕ್ಷಸಿ' ಚಿತ್ರ ಕೂಡ ಸಿದ್ಧವಾಗುತ್ತಿದ್ದು, ಸದ್ಯದಲ್ಲೇ ತೆರೆಗೆ ಬರಲಿದೆ. ಅದೇ ಇನ್ನೊಂದೆಡೆ ಇದಾಗಲೇ ಅವರ  ಮನಸಾರೆ ನಿನ್ನ (ಕನ್ನಡ) ಮತ್ತು ವಾಲು ಕಳ್ಳತಾ (ತೆಲುಗು) ಆಲ್ಬಂ ಸಾಂಗ್​ ರಿಲೀಸ್​ ಆಗಿವೆ. ಇಂದು ಇನ್ನೊಂದು ಹಾಡು ರಿಲೀಸ್​ ಆಗಿದ್ದು, ಅದನ್ನು ಶೇರ್​ ಮಾಡಿಕೊಂಡಿದ್ದಾರೆ ನಟಿ. 

Tap to resize

Latest Videos

undefined

ಭಿಕ್ಷೆ ಬೇಡಿ ದುಡ್ಡು ಕೊಟ್ಮೇಲೆ ಸ್ನೇಹಾ ಪಾತ್ರಕ್ಕೆ ಆಯ್ಕೆ ಆದೆ: ಅಂದು ನಡೆದ ಘಟನೆ ವಿವರಿಸಿದ ನಟಿ ಸಂಜನಾ ಬುರ್ಲಿ

ಇನ್ನೂ ತೆಲುಗಿನಲ್ಲಿ ನಟನಾಗಿ, ಬರಹಗಾರನಾಗಿ, ಸಂಕಲನಕಾರನಾಗಿ ಇಷ್ಟೇ ಅಲ್ಲದೇ ಛಾಯಾಗ್ರಾಹಕರಾಗಿ ಕೂಡ ಗುರುತಿಸಿಕೊಂಡಿರುವ ಗೌರಿ ನಾಯ್ಡು ಇಲ್ಲಿ ನಿವೇದಿತಾ ಗೌಡ ಅವರ ಜೊತೆ ರೊಮ್ಯಾನ್ಸ್ ಮಾಡಿದ್ದಾರೆ. ಮಳೆಯಲ್ಲಿ ಇಬ್ಬರೂ ಮೈಚಳಿ ಬಿಟ್ಟು ರೊಮಾನ್ಸ್​ ಮಾಡಿರುವ ಹಾಡು ರಿಲೀಸ್​ ಆಗಿದೆ. ಇಂದು ಹಾಡು ರಿಲೀಸ್​ ಆಗಿರುವುದಾಗಿ ನಟಿ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ. 

ಇನ್ನು ನಿವೇದಿತಾ ರೀಲ್ಸ್​ ಹಾಕಿದಾಗಲೆಲ್ಲಾ ಚಂದನ್​ ಶೆಟ್ಟಿ ತುಂಬಾ ಒಳ್ಳೆಯವರು, ಅವರ ಜೀವನ ಹಾಳು ಮಾಡಿಬಿಟ್ಟೆ ಎಂದೆಲ್ಲಾ ಸೋಷಿಯಲ್​ ಮೀಡಿಯಾದಲ್ಲಿ ಬೈಗುಳಗಳ ಸುರಿಮಳೆಯಾಗುತ್ತಲೇ ಇದೆ. ಇವರಿಬ್ಬರೂ ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು ನಿಜವಾದರೂ ಅದರಲ್ಲಿ ನಿವೇದಿತಾ ಅವರದ್ದೇ ತಪ್ಪಿದೆ ಎನ್ನುವುದು ಚಂದನ್​ ಶೆಟ್ಟಿ ಅಭಿಮಾನಿಗಳ ಮಾತು. ಇದೇ ಕಾರಣಕ್ಕೆ, ನಿವೇದಿತಾ ಅವರ ವಿಡಿಯೋ ಕಂಡಾಗಲೆಲ್ಲಾ ಅವರ ವಿರುದ್ಧ ಕಮೆಂಟ್​ಗಳೇ ಹರಿದಾಡುತ್ತಿವೆ. ಆದರೆ ಇದ್ಯಾವುದಕ್ಕೂ ನಿವೇದಿತಾ ತಲೆ ಕೆಡಿಸಿಕೊಳ್ಳುತ್ತಿಲ್ಲ. ಅದಕ್ಕೆ ಉತ್ತರವಾಗಿ ಮಾಜಿ ಪತಿಯ ಜೊತೆಯೇ  ಮುದ್ದು ರಾಕ್ಷಸಿ ಚಿತ್ರ ಮಾಡಿದ್ದಾರೆ.  ಈ ಚಿತ್ರವನ್ನು ಪುನೀತ್ ಶ್ರೀನಿವಾಸ್ ಕಥೆ ಚಿತ್ರಕಥೆಯನ್ನು ಬರೆದು ನಿರ್ದೇಶಿಸಿದ್ದಾರೆ.ಮೋಹನ್ ಕುಮಾರ್ ಈ ಮುದ್ದು ರಾಕ್ಷಸಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಎಂ.ಎಸ್ ತ್ಯಾಗರಾಜ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಎ ಕರುಣಾಕರ್ ಚಿತ್ರದ ಛಾಯಾಗ್ರಹಣ ಮಾಡಿದ್ದಾರೆ. ಇನ್ನೂ ಸೈಕೋ ಥ್ರಿಲ್ಲರ್ ಕಥಾಹಂದರ ಈ ಚಿತ್ರದ ಚಿತ್ರೀಕರಣ ಬಹುತೇಕ ಬೆಂಗಳೂರಿನಲ್ಲಿಯೇ ನಡೆದಿದೆ. ಈ ವರ್ಷಾಂತ್ಯದಲ್ಲಿ ಈ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. 

ಹಸೆಮಣೆ ಏರಲು ಸಜ್ಜಾರಿಗೋ ಲಕ್ಷ್ಮೀ ನಿವಾಸ ಚಿನ್ನುಮರಿ ಭರ್ಜರಿ ರೀಲ್ಸ್​! ಚಿಂದಿ ಉಡಾಯಿಸಿದ ನಟಿ...

click me!