ಓ ಮೈ ಲವ್ ಜುಲೈ 15ಕ್ಕೆ ರಾಜ್ಯಾದ್ಯಂತ ಬಿಡುಗಡೆ, ಬೆಂಬಲಿಸಿ, ಹರಸಿ ಎಂದ ಚಿತ್ರತಂಡ

Published : Jul 01, 2022, 08:21 PM IST
ಓ ಮೈ ಲವ್ ಜುಲೈ 15ಕ್ಕೆ ರಾಜ್ಯಾದ್ಯಂತ ಬಿಡುಗಡೆ, ಬೆಂಬಲಿಸಿ, ಹರಸಿ ಎಂದ ಚಿತ್ರತಂಡ

ಸಾರಾಂಶ

* ಓ ಮೈ ಲವ್ ಜುಲೈ 15ಕ್ಕೆ ರಾಜ್ಯಾದ್ಯಂತ ಬಿಡುಗಡೆ * ಕೋಟೆನಾಡಿನ ಜನರು ನಮ್ಮ ಸಿನಿಮಾ ಬೆಂಬಲಿಸಿ, ಹರಸಿ ಎಂದ ಓ ಮೈ ಲವ್ ಚಿತ್ರತಂಡ. * ಚಿತ್ರದುರ್ಗ ನಮ್ಮ ಫ್ಯಾಮಿಲಿಗೆ ಎರಡನೇ ತವರು ಮನೆ ಇದ್ದಂಗೆ ಎಂದ ನಟ ಅಕ್ಷಿತ್ ಶಶಿಕುಮಾರ್.

ಕುಟುಂಬ, ಡ್ರಾಮ, ಕಾಮಿಡಿ, ಪ್ರೀತಿ ಎಲ್ಲವನ್ನೂ ಒಳಗೊಂಡು ಕುಟುಂಬ ಸಮೇತ ಕುಳಿತು‌ ನೋಡುವ ಚಿತ್ರ ಓ ಮೈ ಲವ್ ಜುಲೈ 15ಕ್ಕೆ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ ಎಂದು ಚಿತ್ರದ ನಿರ್ದೇಶಕ ಸ್ಟೈಲ್ ಶ್ರೀನು ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಇಂದು(ಶುಕ್ರವಾರ) ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಓ ಮೈ ಲವ್ ಚಿತ್ರದ ಹಾಡುಗಳು, ಟೀಸರ್, ಗ್ಲಿಂಪ್ಸ್ ಹಾಗೂ ಟ್ರೇಲರ್ ಮೂಲಕ ಸದ್ದು ಮಾಡಿರುವ ಈ ಸಿನಿಮಾಕ್ಕೆ ದಿನದಿಂದ ದಿನಕ್ಕೆ ನಿರೀಕ್ಷೆ ಹೆಚ್ಚುತ್ತಲೇ ಇದೆ. ಅಕ್ಷಿತ್ ಶಶಿಕುಮಾರ್ ಹಾಗೂ ಕೀರ್ತಿ ಕಲ್ಕೆರಿ ಪ್ರಮುಖ ಭೂಮಿಕೆಯಲ್ಲಿರುವ ಈ ಸಿನಿಮಾ ಜುಲೈ 15ರಂದು ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಲಿದೆ ಎಂದರು.

ಶಿವರಾಜ್‌ಕುಮಾರ್, ಉಪೇಂದ್ರ, ತೆಲುಗು ಚಿತ್ರರಂಗದ ಸಿನಿಮಾ ಬ್ರಹ್ಮ ಕೆ.ರಾಘವೇಂದ್ರರಾವ್, ಮಾಜಿ ಪೊಲೀಸ್ ಆಯುಕ್ತರಾದ, ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹಾಡು ಹಾಗೂ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡಿದ್ದು, ಈ ಸಿನಿಮಾಕ್ಕೆ ಕಥೆ ಬರೆದು ಜಿ.ಸಿ.ಬಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಜಿ.ರಾಮಾಂಜಿನಿ ನಿರ್ಮಿಸಿದ್ದಾರೆ ಎಂದು ಹೇಳಿದರು.

ಚಿತ್ರದ ಎಲ್ಲಾ ಹಾಡುಗಳಿಗೆ ಡಾ.ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದು, ಚರಣ್ ಅರ್ಜುನ್ ಸಂಗೀತ ಸಂಯೋಜಿಸಿದ್ದಾರೆ. ಮುರಳಿ ನೃತ್ಯ ನಿರ್ದೇಶನ ಹಾಡುಗಳಿಗಿದೆ. ಎಸ್.ನಾರಾಯಣ್, ಸಾಧುಕೋಕಿಲ, ದೇವಗಿಲ್, ಟೆನ್ನಿಸ್ ಕೃಷ್ಣ, ಪವಿತ್ರಾ ಲೋಕೇಶ್ ಹಾಗೂ ಸಂಗೀತಾ, ದೀಪಿಕಾ ಆರಾಧ್ಯ, ಪೃಥ್ವಿರಾಜ್, ಆನಂದ್, ಶಿಲ್ಪಾ ರವಿ, ಭಾಗ್ಯಶ್ರೀ, ರಾಮ್ ಕುಮಾರ್ ಸೇರಿದಂತೆ ಮೊದಲಾದವರು ಚಿತ್ರದ ತಾರಾಗಣದಲ್ಲಿದ್ದಾರೆ ಎಂದು ತಿಳಿಸಿದರು.

ಚಿತ್ರದ ನಟ ಅಕ್ಷಿತ್ ಶಶಿಕುಮಾರ್ ಮಾತನಾಡಿ, ನಮಗೆ ಎರಡನೇ ಮನೆ ಅಂದರೆ ಚಿತ್ರದುರ್ಗ. ಕಾರಣ ನನ್ನ ತಂದೆ ಶಶಿಕುಮಾರ್ ಸಂಸದರಾದಾಗ ಹೆಚ್ಚಿನ ಸಮಯವನ್ನು ಇಲ್ಲಿಯೇ ಕಳೆದಿದ್ದೇನೆ. ನನ್ನ ತಂದೆಗೆ ನೀಡಿದ ಸಹಕಾರವನ್ನು ನನಗೂ ಸಹ ನೀಡಿ ಆರೈಸಿ ಎಂದು ಮನವಿ‌ ಮಾಡಿದರು.ಪತ್ರಿಕಾಗೋಷ್ಠಿಯಲ್ಲಿ ನಟಿ ಕೀರ್ತಿ ಕಲ್ಕೆರಿ, ಹಾಜರಿದ್ದರು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ರಗಡ್‌ ಕಾಪ್‌, ಮ್ಯಾಕ್ಸಿಮಮ್‌ ಮಾಸ್‌.. 'ಮಾರ್ಕ್' ಕಥೆ ಬಗ್ಗೆ ಸ್ಫೋಟಕ ಸತ್ಯ ಬಿಚ್ಚಿಟ್ಟ ಕಿಚ್ಚ ಸುದೀಪ್!
ಸುದೀಪ್​ಗೆ ಸ್ತ್ರೀದೋಷ ಇದೆಯಾ? ಬಹು ದೊಡ್ಡ ರಹಸ್ಯ ರಿವೀಲ್​ ಮಾಡಿದ ಕಿಚ್ಚ ಹೇಳಿದ್ದೇನು?