
ಬೆಂಗಳೂರು (ಆ.14): ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿರುವ ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ಆದರೆ, ಜಾಮೀನು ತೀರ್ಪು ಬರುವ ಮುನ್ನವೇ ಪವಿತ್ರಾ ಗೌಡ ಮಾಡಿರುವ ಇನ್ಸ್‌ಟಾಗ್ರಾಂ ಪೋಸ್ಟ್ ಎಲ್ಲರ ಗಮನ ಸೆಳೆದಿದೆ. ನಾನು ತಾಳ್ಮೆ ಮಾತ್ತು ನಂಬಿಕೆಯನ್ನ ಆಯ್ಕೆ ಮಾಡಿಕೊಳ್ಳುತೇನೆ. ಫಲಿತಾಂಶ ತಡ ಆದರೂ ದೇವರ ಮೇಲೆ ನಂಬಿಕೆ ಇಡಿ ಎಂದು ಅವರು ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ.
ಈ ಪೋಸ್ಟ್ ಮಾಡಿದ ಕೆಲವೇ ಹೊತ್ತಿನಲ್ಲಿ ಅವರಿಗೆ ಜಾಮೀನು ರದ್ದಾಗಿರುವ ಸುದ್ದಿ ಸಿಕ್ಕಿದೆ.ಸುಪ್ರೀಂ ಕೋರ್ಟ್‌ನಿಂದ ಜಾಮೀನು ರದ್ದಾಗದೇ ಇರುವ ತೀರ್ಪಿನ ನಿರೀಕ್ಷೆಯಲ್ಲಿ 'ಡಿ' ಗ್ಯಾಂಗ್ ಇತ್ತು. ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಇರೋರಿಗೆ ಒಂದಿಷ್ಟು ತಿಂಗಳುಗಳ ಬಳಿಕ ಜಾಮೀನು ಸಿಕ್ಕಿತ್ತು. ಆದರೆ ಈಗ ಜಾಮೀನು ರದ್ದಾಗಿದೆ. ಆರೋಪಿಗಳಿಗೆ ನೀಡಿ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಇನ್ಸ್‌ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದ ಪವಿತ್ರಾ ಗೌಡ,"ಸತ್ಯವು ಎಲ್ಲಕ್ಕಿಂತ ಹೆಚ್ಚು ಶಕ್ತಿಶಾಲಿ, ನ್ಯಾಯವನ್ನು ಯಾವಾಗಲೂ ಕೊಡುತ್ತದೆ.ಸತ್ಯವು ಈ ಜಗತ್ತಿನಲ್ಲಿರುವ ಎಲ್ಲಕ್ಕಿಂತ ಹೆಚ್ಚಿನ ಶಕ್ತಿಯನ್ನು ಹೊಂದಿದೆ. ಎಷ್ಟೇ ಸಮಯ ತೆಗೆದುಕೊಂಡರೂ, ನ್ಯಾಯವು ಯಾವಾಗಲೂ ತನ್ನ ದಾರಿಯನ್ನು ಕಂಡುಕೊಳ್ಳುತ್ತದೆ ಹಾಗೂ ಕೊಡುತ್ತದೆ' ಎಂದು ಬರೆದಿದ್ದ ಗ್ರಾಫಿಕ್ ಅನ್ನು ಹಂಚಿಕೊಂಡಿದ್ದರು.
ಜಾಮೀನು ರದ್ದತಿ ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಪೀಠ, ಕರ್ನಾಟಕ ಹೈಕೋರ್ಟ್ ನೀಡಿದ ಜಾಮೀನು ಚಿಂತಿಸುವಂತೆ ಮಾಡಿದೆ. 7 ಆರೋಪಿಗಳ ಜಾಮೀನು ನಿರ್ಧರಿಸುವಾಗ ಹೈಕೋರ್ಟ್ ಖುಲಾಸೆಗೊಳಿಸುವಂತೆ ಆದೇಶ ಹೊರಡಿಸಿದೆ. ಪ್ರತಿಯೊಂದು ಜಾಮೀನು ಕೊಡುವಾಗ ಹೈಕೋರ್ಟ್ ಇಂಥ ಆದೇಶವನ್ನೇ ನೀಡುತ್ತದೆಯೇ? ಎಂದು ಪ್ರಶ್ನಿಸಿತ್ತು.
ಜೊತೆಗೆ ವಿವೇಚನಾಧಿಕಾರವನ್ನು ಹೈಕೋರ್ಟ್ ತಪ್ಪಾಗಿ ಪ್ರಯೋಗಿಸಿದೆ. ಹೈಕೋರ್ಟ್ ನಿಜಕ್ಕೂ ತನ್ನ ಬುದ್ಧಿಯನ್ನು ಬಳಸಿದೆಯೇ? ಎಂದು ಅಸಮಾಧಾನ ಹೊರಹಾಕಿತ್ತು. ಹೈಕೋರ್ಟ್ ರೀತಿ ನಾವು ಮತ್ತದೇ ತಪ್ಪು ಮಾಡುವುದಿಲ್ಲ. ದೋಷಿ ಅಥವಾ ನಿರ್ದೋಷಿ ಎಂಬುದನ್ನು ನಾವು ನಿರ್ಧರಿಸುವುದಿಲ್ಲ. ಸೆಷನ್ಸ್ ಕೋರ್ಟ್ ನ್ಯಾಯಾಧೀಶರು ಇಂತಹ ತಪ್ಪು ಮಾಡಬಹುದು. ಆದರೆ ಹೈಕೋರ್ಟ್ ಜಡ್ಜ್ ಅಂತಹ ತಪ್ಪು ಮಾಡುತ್ತಾರೆಂದರೆ ಹೇಗೆ? ಎಂದು ಹೇಳಿತ್ತು.
ಇದರ ಬೆನ್ನಲ್ಲಿಯೇ ಗುರುವಾರ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಪರ್ದಿವಾಲಾ ಹಾಗೂ ಮಹೇಂದ್ರರನ್ ಇದ್ದ ಪೀಠ, ರೇಣುಕಾಸ್ವಾಮಿ ಕೊಲೆ ಆರೋಪ ಹೊತ್ತಿರುವ 7 ಮಂದಿಯ ಜಾಮೀನು ರದ್ದು ಮಾಡಿದ್ದಲ್ಲದೆ, ಎಲ್ಲರನ್ನೂ ತಕ್ಷಣವೇ ಬಂಧಿಸುವಂತೆ ಆದೇಶ ನೀಡಿದೆ. ಅದರೊಂದಿಗೆ ವಿಚಾರಣೆಯನ್ನು ಬೇಗ ಮುಗಿಸುವಂತೆಯೂ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.