
ಗೋಲ್ಡನ್ ಸ್ಟಾರ್ ಗಣೇಶ್ ಪತ್ನಿ ಶಿಲ್ಪಾ ಗಣೇಶ್ ನಿರ್ಮಿಸಿರುವ ‘ಪಿಚ್ಚರ್’ ಸಿನಿಮಾ ಜುಲೈ 24ರಂದು ತೆರೆಗೆ ಬರುತ್ತಿದೆ. ಸಂದೀಪ್ ಬೆದ್ರ ನಿರ್ದೇಶನದ, ನಿತ್ಯಪ್ರಕಾಶ್ ಬಂಟ್ವಾಳ್ ಮತ್ತು ಅಮೃತಾ ನಾಯಕ, ನಾಯಕಿಯಾಗಿ ನಟಿಸಿರುವ ಈ ಚಿತ್ರದ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು.
ಶಿಲ್ಪಾ ಗಣೇಶ್, ‘ನೀವು ಮಂಗಳೂರಿನವರು. ತುಳು ಚಿತ್ರವೊಂದನ್ನು ನಿರ್ಮಿಸಿ ಎಂದು ಸ್ನೇಹಿತರು ಹೇಳುತ್ತಿದ್ದರು. ಒಳ್ಳೆಯ ಕತೆ ಸಿಕ್ಕರೆ ಮಾಡೋಣ ಅಂತ ಹೇಳಿದ್ದೆ. ಈ ಚಿತ್ರದ ಕತೆ ನನಗೂ ಗಣೇಶ್ ಅವರಿಗೂ ಇಷ್ಟವಾಗಿ ನಿರ್ಮಿಸಿದ್ದೇವೆ. ಇದು ದೊಡ್ಡ ಬಜೆಟ್ ಚಿತ್ರ. ಇಲ್ಲಿಯವರೆಗೂ ತುಳು ಚಿತ್ರದ ಚಿತ್ರೀಕರಣ ಕಾಶ್ಮೀರದಲ್ಲಿ ಆಗಿಲ್ಲ. ಇದೇ ಮೊದಲ ಬಾರಿಗೆ ನಮ್ಮ ಚಿತ್ರದ ಹಾಡೊಂದರ ಚಿತ್ರೀಕರಣ ಕಾಶ್ಮೀರದಲ್ಲಿ ನಡೆದಿದೆ’ ಎಂದರು.
ಗೋಲ್ಡನ್‌ಸ್ಟಾರ್ ಗಣೇಶ್, ‘ನಾನು, ನನ್ನ ಅಭಿನಯದ ಚಿತ್ರಗಳ ಅಥವಾ ಅತಿಥಿಯಾಗಿ ಬಂದ ಚಿತ್ರಗಳ ಪತ್ರಿಕಾಗೋಷ್ಠಿಯಲ್ಲಿ ಮಾತ್ರ ಭಾಗವಹಿಸಿತ್ತಿದ್ದೆ. ಈಗ ನಮ್ಮ ಸಂಸ್ಥೆಯಿಂದ ನಿರ್ಮಾಣವಾಗಿರುವ ಚಿತ್ರದ ಭಾಗವಾಗಿ ಈ ಪತ್ರಿಕಾಗೋಷ್ಠಿಗೆ ಬಂದಿದ್ದೇನೆ. ಇದೊಂದು ಅವಿಭಕ್ತ ಕುಟುಂಬದ ಕಥೆಯೂ ಹೌದು. ಜೊತೆಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ’ ಎಂದರು.
ನಿತ್ಯಪ್ರಕಾಶ್ ಬಂಟ್ವಾಳ ಹಾಗೂ ಅಮೃತಾ ಸುದು ತಮ್ಮ ಪಾತ್ರದ ಕುರಿತು ಮಾತನಾಡಿದರು. ದೇವದಾಸ್ ಕಾಪಿಕಾಡ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರ್, ನವೀನ್ ಪಡೀಲ್ ನಟಿಸಿರುವ ಈ ಚಿತ್ರವು ಕನ್ನಡ ಹಾಗೂ ತುಳು ಭಾಷೆಯಲ್ಲಿ ತೆರೆಗೆ ಬರಲಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.