ಕೆಜಿಎಫ್‌-2 ಶೂಟಿಂಗ್‌ ಅನುಮತಿ ರದ್ದು ಕೋರಿ ಅರ್ಜಿ

Kannadaprabha News   | Asianet News
Published : Aug 12, 2020, 10:20 AM IST
ಕೆಜಿಎಫ್‌-2 ಶೂಟಿಂಗ್‌ ಅನುಮತಿ ರದ್ದು ಕೋರಿ ಅರ್ಜಿ

ಸಾರಾಂಶ

ಬಾಲಿವುಡ್‌ ನಟ ಸಂಜಯ್‌ ದತ್‌ ನಟಿಸುತ್ತಿರುವ ಹಿನ್ನೆಲೆಯಲ್ಲಿ ಕೆಜಿಎಫ್‌-2 ಚಿತ್ರದ ಚಿತ್ರೀಕರಣಕ್ಕೆ ನೀಡಿರುವ ಅನುಮತಿ ರದ್ದುಪಡಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಕೆಯಾಗಿದೆ.

ಬೆಂಗಳೂರು(ಆ.12): ಬಾಲಿವುಡ್‌ ನಟ ಸಂಜಯ್‌ ದತ್‌ ನಟಿಸುತ್ತಿರುವ ಹಿನ್ನೆಲೆಯಲ್ಲಿ ಕೆಜಿಎಫ್‌-2 ಚಿತ್ರದ ಚಿತ್ರೀಕರಣಕ್ಕೆ ನೀಡಿರುವ ಅನುಮತಿ ರದ್ದುಪಡಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಕೆಯಾಗಿದೆ.

ಹುಬ್ಬಳ್ಳಿಯ ಜಿ. ಶಿವಶಂಕರ್‌ ಈ ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ, ಕೆಜಿಎಫ್‌-2 ಚಿತ್ರದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್‌ ಮತ್ತು ನಟ ಸಂಜಯ್‌ ದತ್‌ ಅವರನ್ನು ಪ್ರತಿವಾದಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಯಶ್‌-ಪ್ರಭಾಸ್‌ ಬಾಲಿವುಡ್‌ ಇಂಡಸ್ಟ್ರಿಗೆ ದಾಳಿಮಾಡಲು ರೆಡಿಯಾಗಿರುವ ಸೌತ್‌ಸ್ಟಾರ್‌ಗಳು

‘ಕೆಜಿಎಫ್‌-2 ಚಿತ್ರದಲ್ಲಿ ಟಾಡಾ ಅಪರಾಧಿಯಾದ ಸಂಜಯ್‌ ದತ್‌ ನಟನೆ ಮಾಡುತ್ತಿದ್ದಾರೆ. ಅವರಿಗೆ 10 ವರ್ಷ ಜೈಲು ಶಿಕ್ಷೆಯಾಗಿತ್ತು. ಈ ವಿಚಾರ ತಿಳಿದರೂ ಸಹ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸಂಜಯ್‌ ದತ್‌ ನಟನೆಯ ಕೆಜಿಎಫ್‌-2 ಚಿತ್ರದ ಚಿತ್ರೀಕರಣಕ್ಕೆ ಹಾಗೂ ಬಿಡುಗಡೆಗೆ ಅನುಮತಿ ನೀಡಿದ್ದಾರೆ. ಇನ್ನೂ ಜನರಿಂದ ಹೆಚ್ಚು ಹಣ ಗಳಿಸಬೇಕೆಂಬ ಉದ್ದೇಶದಿಂದ ಸಂಜಯ್‌ ದತ್‌ ಅವರನ್ನು ಹಾಕಿಕೊಂಡು ಚಿತ್ರ ನಿರ್ಮಾಣ ಮಾಡಲಾಗುತ್ತಿದೆ. ಇದು ಜನತೆಯ ಘನತೆಗೆ ಧಕ್ಕೆ ತಂದಂತಾಗಿದೆ’ ಎಂದು ಅರ್ಜಿಯಲ್ಲಿ ದೂರಲಾಗಿದೆ.

ವೈರಲ್ ಆಯ್ತು ಅಧೀರ ಲುಕ್..! ಸಂಜು ಪೋಸ್ಟರ್ ತಯಾರಿಸಿದ್ಯಾರು..? ಇಲ್ಲಿ ನೋಡಿ

ಅಲ್ಲದೆ, ‘ಕೆಜಿಎಫ್‌-2 ಚಿತ್ರೀಕರಿಸಲು ಹೊಂಬಾಳೆ ಫಿಲಿಂಸ್‌ಗೆ ನೀಡಿರುವ ಅನುಮತಿ ರದ್ದುಪಡಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು. ಈ ಅರ್ಜಿ ಇತ್ಯರ್ಥವಾಗುವರೆಗೂ ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡಬೇಕು’ ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ವೆಡ್ಡಿಂಗ್ ಸೀಸನ್ ಶುರು, ಆದ್ರೆ ನನ್ನ ಮದುವೆ...... ಏನ್ ಹೇಳಿದ್ರು Sanvi Sudeep
ಡಿಸೆಂಬರ್‌ಗೆ ಸ್ಯಾಂಡಲ್‌ವುಡ್‌ ದಬ್ಬಾಳಿಕೆ: ಡೆವಿಲ್‌, 45, ಮಾರ್ಕ್‌ ಮೂವರು ಸೂಪರ್‌ಸ್ಟಾರ್‌ಗಳ ಮಹಾಯುದ್ಧ