
'ಅರ್ಜುನ್ ಗೌಡ' (Arjun Gowda) ಚಿತ್ರದ ಬಳಿಕ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ಪೊಲೀಸ್ ಪಾತ್ರದಲ್ಲಿ ಅಭಿನಯಿಸುತ್ತಿರುವ 'ಮಾಫಿಯಾ' (Mafia) ಚಿತ್ರವು ಈಗಾಗಲೇ ಟೈಟಲ್ನಿಂದಲೇ (Title) ಸ್ಯಾಂಡಲ್‌ವುಡ್ (Sandalwood) ಹಾಗೂ ಸೌತ್ ಸಿನಿಮಾ ರಂಗದಲ್ಲಿ ಸದ್ದು ಮಾಡುತ್ತಿದೆ. ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ 'ಮಾಫಿಯಾ' ಚಿತ್ರ ನಿರ್ಮಾಣವಾಗುತ್ತಿದ್ದು, ಗಣರಾಜ್ಯೋತ್ಸವದ ದಿನದಂದು (Republic Day) ಏಕಕಾಲದಲ್ಲಿ ಚಿತ್ರದ ಟೀಸರ್ (Teaser) ಮೂರೂ ಭಾಷೆಗಳಲ್ಲಿ ಬಿಡುಗಡೆಯಾಗಿದೆ.
ಕನ್ನಡದಲ್ಲಿ ಧ್ರುವ ಸರ್ಜಾ, ಸತೀಶ್ ನೀನಾಸಂ ಹಾಗೂ ರಿಷಬ್ ಶೆಟ್ಟಿ, ತೆಲುಗಿನಲ್ಲಿ ಸುಧೀರ್ ಬಾಬು ಮತ್ತು ರಾಜಶೇಖರ್ ಹಾಗೂ ತಮಿಳಿನಲ್ಲಿ ಸತ್ಯರಾಜ್, ವೆಂಕಟ್ ಪ್ರಭು, ಪಾರ್ಥಿಬನ್ ಹಾಗೂ ನಿರ್ದೇಶಕ ಶಿಶೀಂದ್ರನ್ 'ಮಾಫಿಯಾ' ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ಟೀಸರ್‌ನಲ್ಲಿ ಸಖತ್ ಮಾಸ್ ಆಗಿ ಪ್ರಜ್ವಲ್ ದೇವರಾಜ್ ಕಾಣಿಸಿಕೊಂಡಿದ್ದು, ಅನೂಪ್ ಸೀಳಿನ್ (Anoop Seelin) ಅವರ ಸಂಗೀತ ಸಂಯೋಜನೆ ಟೀಸರ್ನ ಮಾಸ್ ಗುಣವನ್ನು ಮತ್ತಷ್ಟು ಹೆಚ್ಚಿಸಿದೆ. 'ಮಾಫಿಯಾ' ಚಿತ್ರದ ಟೀಸರ್ ಆನಂದ್ ಆಡಿಯೋ (Anand Audio) ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ.
Mafia: ದುಬಾರಿ ಮೊತ್ತಕ್ಕೆ ಪ್ರಜ್ವಲ್ ದೇವರಾಜ್ ಚಿತ್ರದ ಆಡಿಯೋ ರೈಟ್ಸ್ ಖರೀದಿಸಿದ ಆನಂದ್ ಆಡಿಯೋ!
ಅಷ್ಟೇ ಅಲ್ಲದೇ 'ಮಾಫಿಯಾ' ಚಿತ್ರದ ಆಡಿಯೋ ರೈಟ್ಸ್ (Audio Rights) ದೊಡ್ಡ ಮೊತ್ತಕ್ಕೆ ಸೇಲ್ ಆಗಿದ್ದು, ಒಟ್ಟು 5 ಹಾಡುಗಳು ಚಿತ್ರದಲ್ಲಿರಲಿವೆ. ಆಡಿಯೋ ಹಕ್ಕುಗಳನ್ನು ಆನಂದ್ ಆಡಿಯೋ ಸಂಸ್ಥೆ ಖರೀದಿಸಿದೆ. ಇದುವರೆಗೆ ಪ್ರಜ್ವಲ್ ದೇವರಾಜ್ ಅಭಿನಯಿಸಿದ ಚಿತ್ರಗಳಲ್ಲೇ ಅತಿ ಹೆಚ್ಚು ಬೆಲೆಗೆ ಮಾರಾಟವಾದ ಆಡಿಯೋ ಇದಾಗಿದೆ ಎಂದು ತಿಳಿದು ಬಂದಿದೆ. ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಪೋಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಈ ಚಿತ್ರಕ್ಕಾಗಿ ಅವರು ಹೊಸ ಶೈಲಿಯಲ್ಲಿ ಹೇರ್‌ಸ್ಟೈಲ್ ಮಾಡಿಸಿಕೊಂಡಿದ್ದು, ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಆ ಕೂದಲನ್ನು ಕ್ಯಾನ್ಸರ್‌ನಿಂದ ಕೂದಲು ಕಳೆದುಕೊಂಡ ರೋಗಿಗಳಿಗೆ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
'ಮಾಫಿಯಾ' ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ಗೆ ನಾಯಕಿಯಾಗಿ ಅದಿತಿ ಪ್ರಭುದೇವ (Aditi Prabhudeva) ನಟಿಸುತ್ತಿದ್ದಾರೆ. ದೇವರಾಜ್ (Devaraj) ಅವರು ಸಹ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 'ಜಯಮ್ಮನ ಮಗ' ಹಾಗೂ 'ರಜನಿಕಾಂತ್' ಚಿತ್ರಗಳಿಗೆ ಕೆಲಸ ಮಾಡಿ, 'ಮಮ್ಮಿ' ಹಾಗೂ 'ದೇವಕಿ' ಚಿತ್ರಗಳನ್ನು ನಿರ್ದೇಶನ ಮಾಡಿದ್ದ ಎಚ್. ಲೋಹಿತ್ (H.Lohith) ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. 'ಮಾಫಿಯಾ' ಚಿತ್ರದ ಶೀರ್ಷಿಕೆಯೇ ಹೇಳುವಂತೆ, ಇದು ಆಕ್ಷನ್ ಪ್ರಧಾನ ಕಥೆಯ ಚಿತ್ರವಾಗಿದೆ. ಅಂಡರ್‌ವರ್ಲ್ಡ್ ಸ್ಟೋರಿಯೂ ಚಿತ್ರದಲ್ಲಿದೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ. (Kumar B) ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
Prajwal Devaraj: ಡೈನಾಮಿಕ್ ಪ್ರಿನ್ಸ್ ನಟನೆಯ 'ಗಣ' ಚಿತ್ರಕ್ಕೆ ಮುಹೂರ್ತ
ಇನ್ನು 'ಮಾಫಿಯಾ' ಚಿತ್ರದಲ್ಲಿ ದೊಡ್ಡ ತಾರಾಬಳಗವಿದ್ದು, ಸಾಧುಕೋಕಿಲ, ಶೈನ್ ಶೆಟ್ಟಿ, ವಾಸುಕಿ ವೈಭವ್, ಸಾಧು ಕೋಕಿಲ, ಒರಟ ಪ್ರಶಾಂತ್ ಸೇರಿದಂತೆ ಮುಂತಾದವರು ಪಾತ್ರಕ್ಕೆ ಬಣ್ಣಹಚ್ಚುತ್ತಿದ್ದಾರೆ. 'ಟಗರು', 'ಸಲಗ' ಮುಂತಾದ ಚಿತ್ರಗಳಿಗೆ ಸಂಭಾಷಣೆ ಬರೆದು ಗಮನ ಸೆಳೆದಿರುವ ಮಾಸ್ತಿ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ. ಅನೀಶ್ ತರುಣ್ ಕುಮಾರ್ ಕ್ಯಾಮರಾ ಕೈಚಳಕ, ಡಿಫರೆಂಟ್ ಡ್ಯಾನಿ ಸಾಹಸ ಸಂಯೋಜಿಸುತ್ತಿದ್ದು, ಪ್ರಮೋದ್ ಮರವಂತೆ, ಧನಂಜಯ್ ರಂಜನ್ ಸಾಹಿತ್ಯ ಬರೆದಿದ್ದಾರೆ. ಅನೂಪ್ ಸೀಳಿನ್ ಸಂಗೀತ ನೀಡುತ್ತಿದ್ದಾರೆ. 'ಮಾಫಿಯಾ' ಚಿತ್ರವು ಕನ್ನಡದೊಂದಿಗೆ ತಮಿಳು ಹಾಗೂ ತೆಲುಗಿನಲ್ಲೂ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.