Mafia: ದುಬಾರಿ ಮೊತ್ತಕ್ಕೆ ಪ್ರಜ್ವಲ್ ದೇವರಾಜ್ ಚಿತ್ರದ ಆಡಿಯೋ ರೈಟ್ಸ್ ಖರೀದಿಸಿದ ಆನಂದ್ ಆಡಿಯೋ!

Suvarna News   | Asianet News
Published : Jan 26, 2022, 04:14 PM IST
Mafia: ದುಬಾರಿ ಮೊತ್ತಕ್ಕೆ ಪ್ರಜ್ವಲ್ ದೇವರಾಜ್ ಚಿತ್ರದ ಆಡಿಯೋ ರೈಟ್ಸ್ ಖರೀದಿಸಿದ ಆನಂದ್ ಆಡಿಯೋ!

ಸಾರಾಂಶ

ಪ್ರಜ್ವಲ್ ದೇವರಾಜ್ ಅಭಿನಯದ 'ಮಾಫಿಯಾ' ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ವಿಶೇಷವಾಗಿ ಪ್ರಜ್ವಲ್ ಸಿನಿ ವೃತ್ತಿ ಜೀವನದ 35ನೇ ಚಿತ್ರವಾಗಿದೆ. ಸಿನಿಮಾದ ಪ್ರೀ ರಿಲೀಸ್ ವ್ಯವಹಾರ ಕೂಡ ಈಗಾಗಲೇ ಉತ್ತಮವಾಗಿ ನಡೆಯುತ್ತಿದ್ದು, ಇದೀಗ ಚಿತ್ರದ ಆಡಿಯೋ ರೈಟ್ಸ್ ದುಬಾರಿ ಮೊತ್ತಕ್ಕೆ ಮಾರಾಟವಾಗಿದೆ. 

ಸ್ಯಾಂಡಲ್‌ವುಡ್‌ನ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ಅಭಿನಯದ 'ಮಾಫಿಯಾ' (Mafia) ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ವಿಶೇಷವಾಗಿ ಪ್ರಜ್ವಲ್ ಸಿನಿ ವೃತ್ತಿ ಜೀವನದ 35ನೇ ಚಿತ್ರವಾಗಿದೆ. ಸಿನಿಮಾದ ಪ್ರೀ ರಿಲೀಸ್ ವ್ಯವಹಾರ ಕೂಡ ಈಗಾಗಲೇ ಉತ್ತಮವಾಗಿ ನಡೆಯುತ್ತಿದ್ದು, ಇದೀಗ ಚಿತ್ರದ ಆಡಿಯೋ ರೈಟ್ಸ್ (Audio Rights) ದುಬಾರಿ ಮೊತ್ತಕ್ಕೆ ಮಾರಾಟವಾಗಿದೆ. ಹೌದು! ಮಾಫಿಯಾ ಚಿತ್ರದ ಆಡಿಯೋ ಹಕ್ಕುಗಳನ್ನು 'ಆನಂದ್ ಆಡಿಯೋ ಸಂಸ್ಥೆ' (Anand Audio) ಉತ್ತಮ ಬೆಲೆಗೆ ಖರೀದಿಸಿದೆ. ಇದುವರೆಗೆ ಪ್ರಜ್ವಲ್ ದೇವರಾಜ್ ಅಭಿನಯಿಸಿದ ಚಿತ್ರಗಳಲ್ಲೇ ಅತಿ ಹೆಚ್ಚು ಬೆಲೆಗೆ ಮಾರಾಟವಾದ ಆಡಿಯೋ ಇದಾಗಿದೆ ಎಂದು ತಿಳಿದು ಬಂದಿದೆ.

'ಮಾಫಿಯಾ' ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡುತ್ತಿದ್ದು, ಇದರಲ್ಲಿ 5 ಹಾಡುಗಳಿವೆ. ನಿರ್ಮಾಪಕ ಬಿ. ಕುಮಾರ್ (B.Kumar) ಮತ್ತು ನಿರ್ದೇಶಕ ಎಚ್. ಲೋಹಿತ್ (H.Lohith) ಆಡಿಯೋ ಕಂಪನಿಯೊಂದಿಗೆ ಒಪ್ಪಂದ ಪೂರ್ಣಗೊಳಿಸಿದ್ದಾರೆ. ನವೆಂಬರ್‌ನಲ್ಲಿ ಆರಂಭವಾದ ಈ ಚಿತ್ರದ ಶೂಟಿಂಗ್ ಕೊರೋನಾ (Coronavirus) ಕಾರಣದಿಂದ ಅರ್ಧಕ್ಕೆ ನಿಂತಿದೆ. ಈ  ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಪೋಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಈ ಚಿತ್ರಕ್ಕಾಗಿ ಅವರು ಹೊಸ ಶೈಲಿಯಲ್ಲಿ ಹೇರ್‌ಸ್ಟೈಲ್‌ ಮಾಡಿಸಿಕೊಂಡಿದ್ದು, ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಆ ಕೂದಲನ್ನು ಕ್ಯಾನ್ಸರ್‌ನಿಂದ ಕೂದಲು ಕಳೆದುಕೊಂಡ ರೋಗಿಗಳಿಗೆ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

Prajwal Devaraj: ಡೈನಾಮಿಕ್ ಪ್ರಿನ್ಸ್ ನಟನೆಯ 'ಗಣ' ಚಿತ್ರಕ್ಕೆ ಮುಹೂರ್ತ

'ಮಾಫಿಯಾ' ಚಿತ್ರದ ಶೀರ್ಷಿಕೆಯೇ ಹೇಳುವಂತೆ, ಇದು ಆಕ್ಷನ್ ಪ್ರಧಾನ ಕಥೆಯ ಚಿತ್ರವಾಗಿದೆ. ಅಂಡರ್‌ವರ್ಲ್ಡ್ ಸ್ಟೋರಿಯೂ ಚಿತ್ರದಲ್ಲಿದೆ. ಈ ಹಿಂದೆ 'ಮಮ್ಮಿ' ಮತ್ತು 'ದೇವಕಿ' ಚಿತ್ರಗಳನ್ನು ನಿರ್ದೇಶಿಸಿ ಜನಪ್ರಿಯವಾಗಿರುವ ಲೋಹಿತ್ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರುತ್ತಿದೆ. 'ಇದು ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಎಂಟರ್‌ಟೈನರ್‌. ಆರಂಭದಲ್ಲಿ ಪ್ರಜ್ವಲ್‌ ಅವರನ್ನು ಕಂಡರೆ ಭಯವಿತ್ತು. ಈಗ ಒಳ್ಳೆಯ ಸ್ನೇಹವಿದೆ. ಮೊದಲ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆದಿದ್ದು, ರಾಮೋಜಿ ರಾವ್‌ ಫಿಲಂ ಸಿಟಿಯಲ್ಲಿ ಶೂಟಿಂಗ್ ಪ್ಲ್ಯಾನ್‌ ಮಾಡಿದ್ದೇವೆ' ಎಂದು ಚಿತ್ರದ ಬಗ್ಗೆ ನಿರ್ದೇಶಕ ಲೋಹಿತ್ ತಿಳಿಸಿದ್ದಾರೆ.



ಇತ್ತೀಚೆಗಷ್ಟೇ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಕಲಾ ನಿರ್ದೇಶಕ ಶ್ರೀನಿವಾಸ್ ಅವರು ಪೊಲೀಸ್ ಕಂಟ್ರೋಲ್ ರೂಮ್ ಸೆಟ್ ಹಾಕಿದ್ದರು. ಅದೇ ಸೆಟ್‌ನಲ್ಲಿ ಚಿತ್ರತಂಡ ಮಾತಿಗೆ ಹಾಜರಾಯಿತು. 'ನಾನು ಮತ್ತು ನನ್ನ ಮಗ ಇಬ್ಬರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದೇವೆ. ಇಬ್ಬರು ಮೊದಲ ಬಾರಿಗೆ ಒಂದೇ ಚಿತ್ರದಲ್ಲಿ ಪೊಲೀಸ್ ಪಾತ್ರ ಮಾಡುತ್ತಿದ್ದೇವೆ. ಯುವ ತಂಡದ ಜತೆಗೆ ಕೆಲಸ ಮಾಡುತ್ತಿರುವ ಖುಷಿ ಇದೆ' ಎಂದರು ಹಿರಿಯ ನಟ ದೇವರಾಜ್ (Devaraj). ಸಾಧು ಕೋಕಿಲ (Sadhu Kokila) ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. 'ಒಂದು ಒಳ್ಳೆಯ ಸೆಟ್ ಹಾಕಿದ್ದಾರೆ. ಅಪ್ಪನ ಜತೆಗೆ ಕೆಲಸ ಮಾಡುವ ಅವಕಾಶ ಮತ್ತೆ ಸಿಕ್ಕಿದೆ' ಎಂದರು.

Mafia: ಪ್ರಜ್ವಲ್ ದೇವರಾಜ್-ಅದಿತಿ ಪ್ರಭುದೇವ ಹೊಸ ಚಿತ್ರಕ್ಕೆ ಮುಹೂರ್ತ

ಇಲ್ಲಿ ನನ್ನ ತಂದೆ ಅವರು ನನ್ನ ಹಿರಿಯ ಪೊಲೀಸ್ ಅಧಿಕಾರಿ ಪಾತ್ರ. ಈ ಚಿತ್ರದ ಮೂಲಕ ಹೊಸ 'ಮಾಫಿಯಾ' ಕತೆ ಹೇಳುತ್ತಿದ್ದಾರೆ ನಿರ್ದೇಶಕರು. ತುಂಬಾ ಅಚ್ಚುಕಟ್ಟಾಗಿ ಚಿತ್ರವನ್ನು ರೂಪಿಸುತ್ತಿದ್ದಾರೆ ಎಂದು ಪ್ರಜ್ವಲ್ ದೇವರಾಜ್ ಹೇಳಿಕೊಂಡರು. 'ಶೂಟಿಂಗ್ ತಯಾರಿ ನೋಡಿದಾಗ ಇವರು ಹೊಸಬರು ಅನಿಸುವುದಿಲ್ಲ. ಎಲ್ಲರು ನುರಿತ ತಂತ್ರಜ್ಞರಂತೆ ಕಾಣುತ್ತಿದ್ದಾರೆ. ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಜತೆಗೆ ಕೆಲಸ ಮಾಡುತ್ತಿರುವುದಕ್ಕೆ ಖುಷಿ ಇದೆ' ಎಂದು ಸಾಧು ಕೋಕಿಲ ತಿಳಿಸಿದ್ದಾರೆ. 

ಇನ್ನು ನಟಿ ಅದಿತಿ ಪ್ರಭುದೇವ (Aditi Prabhudeva) ಇದೇ ಮೊದಲ ಬಾರಿಗೆ ಪ್ರಜ್ವಲ್‌ ದೇವರಾಜ್‌ಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್. ಬಿ ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಡಿಫ‌ರೆಂಟ್‌ ಡ್ಯಾನಿ ಸಾಹಸ ನಿರ್ದೇಶನ,  ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಹಾಗೂ ತರುಣ್‌ ಕ್ಯಾಮೆರಾ ಕೈಚಳಕವಿದೆ. 'ಮಾಫಿಯಾ' ಚಿತ್ರದ ಗ್ಲಿಂಪ್ಸ್ ವಿಡಿಯೋವನ್ನು ನಟ ಧ್ರುವ ಸರ್ಜಾ ಇಂದು ಬಿಡುಗಡೆ ಮಾಡಲಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಟಾಕ್ಸಿಕ್ ಸಿನಿಮಾ ರಿಲೀಸ್ ಸಮೀಪಿಸುತ್ತಿದ್ದಂತೆ ಐಟಿ ಪ್ರಕರಣದಲ್ಲಿ ನಟ ಯಶ್‌ಗೆ ಹೈಕೋರ್ಟ್ ರಿಲೀಫ್
ಜ್ಯೋತಿಷಿ ವೇಣು ಸ್ವಾಮಿ ಭವಿಷ್ಯ: ಸಮಂತಾ ಬಾಳಲ್ಲಿ ನಿಜವಾಯ್ತು, ಆದ್ರೆ ರಶ್ಮಿಕಾ ಲೈಫಲ್ಲಿ ಸುಳ್ಳಾಗಲಿ ಅಂತಿರೋ ಫ್ಯಾನ್ಸ್!