
ಪ್ರಜ್ವಲ್ ದೇವರಾಜ್ ಹಾಗೂ ಜಾಕಿ ಭಾವನಾ ಜೋಡಿಯಾಗಿ ನಟಿಸಿರುವ ಸಿನಿಮಾ ಇದು. ಹುಬ್ಬಳ್ಳಿಯಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದ ಬೃಹತ್ ವೇದಿಕೆಯಲ್ಲಿ ಹಾಡುಗಳನ್ನು ಬಿಡುಗಡೆ ಮಾಡಲಾಯಿತು. ಸಾವಿರಾರು ಜನರು ನೆರೆದಿದ್ದ ಈ ಕಾರ್ಯಕ್ರಮದಲ್ಲಿ ಡಾಲಿ ಧನಂಜಯ್, ಆಶಿಕಾ ರಂಗನಾಥ್, ದೀಪಿಕಾ ದಾಸ್, ಅದಿತಿ ಪ್ರಭುದೇವ ಹೆಜ್ಜೆ ಹಾಕಿದರು. ಜತೆಗೆ ಅನೂಪ್ ಸೀಳಿನ್ ಸಂಗೀತ ಸಂಜೆಯೂ ನಡೆಯಿತು. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
#MovieReview: ಈ ಜಂಟಲ್‌ಮನ್ ನಿಜಕ್ಕೂ 'ನಂಬರ್ ಒನ್..!'
ವೇದಿಕೆ ಮೇಲೆ ಪೊಲೀಸ್ ಡ್ರೆಸ್ನಲ್ಲಿ ಪ್ರಜ್ವಲ್ ದೇವರಾಜ್ ಎಂಟ್ರಿ ಕೊಟ್ಟರು. ದೇವರಾಜ್ ಮತ್ತು ಪ್ರಣವ್ ದೇವರಾಜ್ ವೇದಿಕೆ ಮೇಲೆ ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು. ವಿಖ್ಯಾತ್ ನಿರ್ಮಾಣದ ಈ ಚಿತ್ರದಲ್ಲಿ ರಘು ಮುಖರ್ಜಿ, ಅವಿನಾಶ್, ಧರ್ಮಣ್ಣ ಮುಂತಾದವರು ನಟಿಸಿದ್ದಾರೆ. ನರಸಿಂಹ ನಿರ್ದೇಶನದ ಈ ಸಿನಿಮಾ ಈಗ ಅದ್ದೂರಿಯಾಗಿ ಆಡಿಯೋ ಬಿಡುಗಡೆ ಮಾಡಿಕೊಂಡಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.