
ಮನೋಜ್ ಕುಮಾರ್ ನಿರ್ದೇಶನದ ರಂಗಾಯಣ ರಘು, ಶ್ರೀರಾಮ್, ತಪಸ್ವಿನಿ ಪೂಣಚ್ಚ, ರಮಿಕಾ ಶಿವು ಮುಖ್ಯ ಪಾತ್ರದಲ್ಲಿ ನಟಿಸಿರುವ ಸಣ್ಣ ಬಜೆಟ್ ನ 'ಪ್ರೇಮದ ಊರಲಿ' ಸಿನಿಮಾ, ಇದೀಗ ಭರ್ಜರಿಯಾಗಿ ಸದ್ದು ಮಾಡುತ್ತಾ, ಬಾಕ್ಸ್ ಆಫೀಸ್ ಚಿಂದಿ ಉಡಾಯಿಸುತ್ತಿದೆ. ಸೆಪ್ಟೆಂಬರ್ 25ರಂದು ಬಿಡುಗಡೆಯಾದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಅತ್ಯುತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಚಿತ್ರ ಬಿಡುಗಡೆಯಾಗಿ 17 ದಿನಗಳಳು ಕಳೆದರೂ ಜನ ಕಿಕ್ಕಿರಿದು ಚಿತ್ರಮಂದಿರಕ್ಕೆ ಕುಟುಂಬ ಸಮೇತರಾಗಿ ಬಂದು ಚಿತ್ರ ವೀಕ್ಷಿಸುತ್ತಿದ್ದಾರೆ. ಆದರೆ ಈ ಸಿನಿಮಾ ಟಿವಿಯಲ್ಲಿ ಯಾವಾಗ ಪ್ರಸಾರ ಕಾಣಲಿದೆ? ಓಟಿಟಿಯಲ್ಲಿ ಲಭ್ಯವಿದೆಯೇ? ಎನ್ನುವ ಪ್ರಶ್ನೆ ವೀಕ್ಷಕರಲ್ಲಿ ಮೂಡಿದ್ದು, ಆ ಪ್ರಶ್ನೆಗೆ ಚಿತ್ರತಂಡ ಇದೀಗ ಉತ್ತರ ನೀಡಿದೆ.
ಪ್ರೇಕ್ಷಕರ ಅಪಾರ ಪ್ರೀತಿ, ಅಭಿಮಾನ ಹಾಗೂ ಬೆಂಬಲದೊಂದಿದೆ ‘ಪ್ರೇಮದ ಊರಲಿ’ ಚಿತ್ರವು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಈ ಸಂದರ್ಭದಲ್ಲಿ ಚಿತ್ರದಲ್ಲಿ ಡಿಜಿಟಲ್ (OTT) ಹಾಗೂ ಸ್ಯಾಟಲೈಟ್ (ಟಿವಿ) ಪ್ರಸಾರದ ಹಕ್ಕುಗಳು ಕುರಿತು ಚಿತ್ರತಂಡದಿಂದ ಒಂದು ಮಹತ್ವದ ಸ್ಪಷ್ಟನೆ ನೀಡಲು ಬಯಸುತ್ತೇವೆ. ನಮ್ಮ ಮೊದಲ ಆದ್ಯತೆ ಚಿತ್ರಮಂದಿರಗಳೇ. ಪ್ರೇಕ್ಷಕರು ‘ಪ್ರೇಮದ ಊರಲಿ’ ಚಿತ್ರವನ್ನು ದೊಡ್ಡ ಪರದೆಯ ಮೇಲೆ ವೀಕ್ಷಿಸಿ. ಅದರ ಪ್ರೀತಿ, ಭಾವನೆ ಹಾಗೂ ಅನುಭವವನ್ನು ಸಂಪೂರ್ಣವಾಗಿ ಆಸ್ಪಾಧಿಸಬೇಕು ಎಂಬುದೇ ನಮ್ಮ ಆಶಯ.
‘ಪ್ರೇಮದ ಊರಲಿ’ ಚಿತ್ರದ OTT ಅಥವಾ ಟಿವಿ ಪ್ರಸಾರ ಹಕ್ಕುಗಳಿಗೆ ಸಂಬಂಧಿಸಿದಂತೆ ಇದುವರೆಗೂ ಯಾವುದೇ ಸಂಸ್ಥೆ ಅಥವಾ ವೇದಿಕೆಯೊಂದಿಗೆ ಒಪ್ಪಂದ ಮಾಡಿಕೊಂಡಿಲ್ಲ ಹಾಗೂ ಯಾವುದೇ ರೀತಿಯ ಅಧಿಕೃತ ಬದ್ಧತೆಯನ್ನೂ ನೀಡಿಲ್ಲ. ಸದ್ಯಕ್ಕೆ ಚಿತ್ರದ OTT ಅಥವಾ ಟಿವಿ ಪ್ರಸಾರಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ದಾರ ಕೈಗೊಂಡಿಲ್ಲ. ಈ ಕುರಿತು ಮುಂದಿನ ದಿನಗಳಲ್ಲಿ ಯಾವುದೇ ಅಧಿಕೃತ ಮಾಹಿತಿ ಇದ್ದಲ್ಲಿ, ಅದನ್ನು ಚಿತ್ರತಂಡವೇ ನೇರವಾಗಿ ಪ್ರಕಟಿಸಲಿದೆ.
‘ಪ್ರೇಮದ ಊರಲಿ’ ಚಿತ್ರವನ್ನು ಚಿತ್ರಮಂದಿರಗಳಲ್ಲಿ ನೋಡಿ, ಪ್ರೀತಿಸಿ, ಬೆಂಬಲಿಸುತ್ತಿರುವ ಪ್ರತಿಯೊಬ್ಬ ಪ್ರೇಕ್ಷಕರಿಗೂ ನಮ್ಮ ಹೃದಯಪೂರ್ವಕ ಧನ್ಯವಾದಗಳು. ನಿಮ್ಮ ಪ್ರೀತಿಯೇ ನಮ್ಮ ಚಿತ್ರದ ನಿಜವಾದ ಗೆಲುವು -ಇಂತಿ ಪ್ರೇಮದ ಊರಲಿ ಚಿತ್ರ ತಂಡ ಎಂದು ಹೇಳುವ ಮೂಲಕ ಸದ್ಯಕ್ಕೆ ಓಟಿಟಿ ಅಥವಾ ಟಿವಿಯಲ್ಲಿ ರಿಲೀಸ್ ಆಗುವುದಿಲ್ಲ ಎನ್ನುವ ಮಾಹಿತಿ ಹಂಚಿಕೊಂಡಿದ್ದಾರೆ.
‘ಪ್ರೇಮದ ಊರಲಿ’ ಗಳಿಸಿದ್ದೆಷ್ಟು?
‘ಪ್ರೇಮದ ಊರಲಿ’ ಸಿನಿಮಾ ಬಿಡುಗಡೆಯಾಗಿ 17ನೇ ದಿನಗಳಲ್ಲಿ ಒಟ್ಟು ಭಾರತೀಯ ನೆಟ್ ಕಲೆಕ್ಷನ್ 48.22 ಕೋಟಿ ರೂಪಾಯಿ ತಲುಪಿದ್ದರೆ, ಒಟ್ಟು ಭಾರತೀಯ ಗ್ರಾಸ್ ಕಲೆಕ್ಷನ್ 56.39 ಕೋಟಿ ರೂಪಾಯಿ ಗಡಿ ದಾಟಿದೆ. ಇದರೊಂದಿಗೆ ಈ ಚಿತ್ರವು 50 ಕೋಟಿ ಕ್ಲಬ್ ಸೇರಿ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.