ಪುನೀತ್ ರಾಜ್‌ಕುಮಾರ್ ಬಯೋಗ್ರಫಿ ‘ನೀನೇ ರಾಜಕುಮಾರ’ ಬಿಡುಗಡೆ ಮಾಡಿದ ಕಿಚ್ಚ

By Suvarna News  |  First Published Mar 15, 2022, 4:17 PM IST

* ಅತೀ ನಿರೀಕ್ಷಿತ ಪುನೀತ್ ರಾಜ್ ಕುಮಾರ್ ಅವರ ಬಯೋಗ್ರಫಿ ರಿಲೀಸ್
* ‘ನೀನೇ ರಾಜಕುಮಾರ್’ ಕೃತಿಯನ್ನು ಬಿಡುಗಡೆ ಮಾಡಿದ ಕಿಚ್ಚ ಸುದೀಪ್ 
* ಪತ್ರಕರ್ತ ಡಾ. ಶರಣು ಹುಲ್ಲೂರು ಬರೆದಿರುವ ಈ ಕೃತಿ
* ಈ ಕೃತಿ ಪುನೀತ್ ರಾಜ್ ಕುಮಾರ್ ಜೀವನವನ್ನು ಸೊಗಸಾಗಿ ಹಿಡಿದಿಟ್ಟಿದೆ.


 ಬೆಂಗಳೂರು, (ಮಾ.15):  ಪುನೀತ್  ರಾಜ್‌ಕುಮಾರ್​ ಅವರ ಜೀವನ ಕಥನದ ಕೃತಿ (Puneeth Rajkumar Biography) ಹೊರ ಬಂದಿದೆ. ಕಿಚ್ಚ ಇದನ್ನು ಅನಾವರಗೊಳಿಸಿದ್ದಾರೆ.

ಹವದು...ಪುನೀತ್ ರಾಜ್‌ಕುಮಾರ್(Puneeth Rajkumar) ಅವರ ಬಯೋಗ್ರಫಿ 'ನೀನೇ ರಾಜಕುಮಾರ್' ಕೃತಿಯನ್ನು  ಸಿನಿಮಾ ಪತ್ರಕರ್ತ ಡಾ. ಶರಣು ಹುಲ್ಲೂರು ಅವರು ಬರೆದಿದ್ದು, ಅದನ್ನು ಇಂದು(ಮಂಗಳವಾರ) ಬೆಂಗಳೂರಿನಲ್ಲಿ ನಟ ಕಿಚ್ಚ ಸುದೀಪ್ (Kichcha Sudeep) ಬಿಡುಗಡೆ ಮಾಡಿದರು.

Tap to resize

Latest Videos

undefined

ಜೇಮ್ಸ್ ಟೀಸರ್‌ ನೋಡಿ ತಬ್ಬಿಕೊಂಡು ಕಣ್ಣೀರಿಟ್ಟ ಶಿವಣ್ಣ- ರಾಘಣ್ಣ!

ಪತ್ರಕರ್ತ ಡಾ. ಶರಣು ಹುಲ್ಲೂರು ಬರೆದಿರುವ ಈ ಕೃತಿ ಈಗಾಗಲೇ ಬಿಡುಗಡೆಗೂ ಮುನ್ನ ಎರಡನೇ ಮುದ್ರಣ ಕಂಡಿದ್ದು, ಪುನೀತ್ ಅವರ ಕುರಿತಾಗಿ ಬಂದಂತಹ ಮೊದಲ ಬಯೋಗ್ರಫಿ ಇದು.  ಈ ಕೃತಿ ಪುನೀತ್ ರಾಜ್ ಕುಮಾರ್ ಜೀವನವನ್ನು ಸೊಗಸಾಗಿ ಹಿಡಿದಿಟ್ಟಿದೆ. 

ಕಿಚ್ಚ ಸುದೀಪ್ ಅವರ ಪುಸ್ತಕವನ್ನು ಎರಡು ವರ್ಷಗಳ ಹಿಂದೆ ಪುನೀತ್ ರಾಜ್ ಕುಮಾರ್ ಬಿಡುಗಡೆ ಮಾಡಿದ್ದರು. ಪುನೀತ್ ಅವರ ಬಯೋಗ್ರಫಿಯನ್ನು ಇದೀಗ ಸುದೀಪ್ ಅವರು ರಿಲೀಸ್ ಮಾಡಿದ್ದು ಭಾವುಕತೆಗೆ ಸಾಕ್ಷಿಯಾಯ್ತು.

ಪುನೀತ್ ಅವರ ಖಾಸಗಿ ಜೀವನ, ವೃತ್ತಿ ಜೀವನ, ಅಪರೂಪದ ಸಂಗತಿಗಳು ಮತ್ತು ಫೋಟೋಗಳನ್ನುಈ ಪುಸ್ತಕದಲ್ಲಿ ಸೊಗಸಾಗಿ ಹಿಡಿದಿಟ್ಟಿದ್ದಾರೆ ಲೇಖಕ ಶರಣು ಹುಲ್ಲೂರು.

ಪುನೀತ್ ರಾಜ್​ಕುಮಾರ್ ಕುರಿತಾಗಿ ಬರುತ್ತಿರುವ ಮೊದಲ ಬಯೋಗ್ರಫಿ ಇದು. ಇದರಲ್ಲಿ ಪುನೀತ್ ಜೀವನ ಕುರಿತಾದ ವಿಷಯಗಳು ಮಾತ್ರ ಇಲ್ಲ. ಅವರ ವೃತ್ತಿ ಮತ್ತು ಖಾಸಗಿ ಜೀವನ ಕುರಿತಾದ ಅಪರೂಪದ ವಿಷಯಗಳನ್ನು ಮತ್ತು ಛಾಯಾಚಿತ್ರಗಳನ್ನು ಈ ಪುಸ್ತಕ ಒಳಗೊಂಡಿದೆ. ಪುನೀತ್​ ಬಾಲ್ಯ, ಬಾಲ್ಯದಲ್ಲಿ ನಟಿಸಿದ ಸಿನಿಮಾಗಳು ಮತ್ತು ಅರಸು ಚಿತ್ರದಿಂದ ಜೇಮ್ಸ್ ಚಿತ್ರದವರೆಗಿನ ಸಮಗ್ರ ನೋಟ ಇದರಲ್ಲಿದೆ. ಒಟ್ಟು 264 ಪುಟಗಳನ್ನು ಈ ಪುಸ್ತಕ ಹೊಂದಿದ್ದು, ಒಟ್ಟು 34 ಅಧ್ಯಾಯಗಳನ್ನು ಇದು ಒಳಗೊಂಡಿದೆ.

ಕಿಚ್ಚ ಸುದೀಪ್ ಅವರ ಕುರಿತು ಶರಣು ಹುಲ್ಲೂರು ಪುಸ್ತಕ ಬರೆದಿದ್ದರು. ಎರಡು ವರ್ಷಗಳ ಹಿಂದೆ ಪುನೀತ್ ರಾಜ್ ಕುಮಾರ್ ಅವರು ಈ ಪುಸ್ತಕ ಬಿಡುಗಡೆ ಮಾಡಿದ್ದರು. ಪುನೀತ್ ಅವರ ಬಯೋಗ್ರಫಿಯನ್ನು ಇದೀಗ ಸುದೀಪ್ ಬಿಡುಗಡೆ ಮಾಡಿರುವುದು ವಿಶೇಷ.  

'ನೀನೆ ರಾಜಕುಮಾರ' ಕೃತಿಯನ್ನು ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಕಿಚ್ಚ ಸುದೀಪ್ , ಒಂದೊಳ್ಳೆಯ ಕೃತಿಯ ಮೂಲಕ ಪುನೀತ್ ರಾಜ್​​ಕುಮಾರ್ ಅವರಿಗೆ ಶರಣು ಹುಲ್ಲೂರು ನಮನ ಸಲ್ಲಿಸಿದ್ದಾರೆ. ಪುನೀತ್ ಅವರದ್ದು ಪುಸ್ತಕವಾಗುವಂತಹ ವ್ಯಕ್ತಿತ್ವ. ಈ ಕೃತಿ ಅವರ ಜೀವನವನ್ನು ಸೊಗಸಾಗಿ ಹಿಡಿದಿಟ್ಟಿದೆ. ಯಾವತ್ತಿಗೂ ನಾನು ಪುನೀತ್ ಅವರನ್ನು ಮೀಸ್ ಮಾಡಿಕೊಳ್ಳುತ್ತೇನೆ ಎಂದರು.

ಈ ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ನಿರ್ಮಾಪಕರಾದ ಜಾಕ್ ಮಂಜು, ಕುಮಾರ್ ಹಾಗೂ ಸಾವಣ್ಣ ಪ್ರಕಾಶನದ ಜಮೀಲ್ ಮತ್ತು ಲೇಖಕ ಶರಣು ಹುಲ್ಲೂರು ಉಪಸ್ಥಿತರಿದ್ದರು.

click me!