
ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ (Puneeth Rajkumar) ನಿಧನರಾಗಿ ಇಂದಿಗೆ ಎರಡು ತಿಂಗಳು ಕಳೆದಿದೆ. ಅ.29ರಂದು ಅಪ್ಪು ಹೃದಯಾಘಾತಕ್ಕೆ ಒಳಗಾದ ಕರಾಳ ಸುದ್ದಿ ಕೇಳಿಬಂದಿತ್ತು. ಅವರು ಇಹಲೋಕ ತ್ಯಜಿಸಿದರು ಎಂಬ ಕಹಿ ಸುದ್ದಿ ಬಂದು ಕಿವಿಗೆ ಎರಗಿದಾಗ ಅದನ್ನು ಯಾರಿಂದಲೂ ನಂಬಲು ಸಾಧ್ಯವಾಗಿರಲಿಲ್ಲ. ಅಭಿಮಾನಿಗಳು ಮತ್ತು ಕುಟುಂಬದವರು ಈಗ ನೋವಿನ ಜೊತೆಯಲ್ಲೇ ಜೀವನ ಮುಂದುವರಿಸುವುದು ಅನಿವಾರ್ಯ ಆಗಿದೆ. ಅಪ್ಪು ಇನ್ನಿಲ್ಲ ಎಂಬ ಸತ್ಯವನ್ನು ಒಪ್ಪಿಕೊಂಡು, ಮುಂದಿನ ಕಾರ್ಯಗಳನ್ನು ಮಾಡಲಾಗುತ್ತಿದೆ. ಅಪ್ಪು ಅಗಲಿ ಇಂದಿಗೆ ಎರಡು ತಿಂಗಳು ಕಳೆದಿರುವ ಹಿನ್ನೆಲೆಯಲ್ಲಿ ಡಾ. ರಾಜ್ಕುಮಾರ್ (Dr.Rajkumar) ಕುಟುಂಬದವರು ಕಂಠೀರವ ಸ್ಟುಡಿಯೋ (Kanteerava Studio) ಆವರಣದಲ್ಲಿ ಇರುವ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.
ಪ್ರತಿದಿನ ಪುನೀತ್ ಸಮಾಧಿ ದರ್ಶನಕ್ಕೆ ಸಾವಿರಾರು ಜನರು ಆಗಮಿಸುತ್ತಲೇ ಇದ್ದಾರೆ. ಇಂದು ಬೆಳಗ್ಗೆ ರಾಘವೇಂದ್ರ ರಾಜ್ಕುಮಾರ್ (Raghavendra Rajkumar), ಪುನೀತ್ ಅವರ ಹಿರಿಯ ಅಕ್ಕ ಲಕ್ಷ್ಮಿ ಹಾಗೂ ಮಾವ ಗೋವಿಂದರಾಜ್ ಸೇರಿದಂತೆ ಕುಟುಂಬದವರು ಅಪ್ಪು ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿದ ರಾಘವೇಂದ್ರ ರಾಜ್ಕುಮಾರ್ ಅವರು, ವೈದ್ಯೋ ನಾರಾಯಣೋ ಹರಿ ಅಂತಾರೆ, ನನ್ನ ತಮ್ಮನ ಕಣ್ಣು ಎಲ್ಲರನ್ನು ನೋಡ್ತಿದೆ, ಅಪ್ಪು ಎಲ್ಲೂ ಹೋಗಿಲ್ಲ. ಎರಡು ಕಣ್ಣುಗಳನ್ನು ಬಿಟ್ಟು ಹೋಗಿದ್ದಾರೆ, ಅಭಿಮಾನಿಗಳಿಗೆ ಕಣ್ಣು ನೀಡಿ ಹೋಗಿದ್ದಾರೆ. ವ್ಯಕ್ತಿ ಹೋದ ಮೇಲೂ ಈ ರೀತಿ ಆಗಬೇಕು. ನೇತ್ರದಾನದ ಅರಿವು ನಮಗಿರಬೇಕು. ಪುನೀತ್ ಹೋಗುತ್ತಾ ಬದಲಾವಣೆ ತಂದರು. ಅಪ್ಪಾಜಿಯವರು ಯಾವಾಗಲೂ ನೇತ್ರದಾನ ಮಾಡೋಕೆ ಹೇಳುತ್ತಿದ್ದರು. ನಾವೂ ಕುಟುಂಬದ ಎಲ್ಲಾ ಸದಸ್ಯರೂ ಕೂಡ ನೇತ್ರದಾನಕ್ಕೆ ನೋಂದಣಿ ಮಾಡಿದ್ದೇವೆ ಎಂದು ಹೇಳಿದರು.
Karunada Ratna: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್‌ಗೆ ಚಂದನವನದ ಗೌರವ!
ನಟ ಪುನೀತ್ ಅವರಿಂದ ಪ್ರೇರಣೆಗೊಂಡ ನೇತ್ರದಾನ ದೊಡ್ಡ ಪ್ರಮಾಣದಲ್ಲಿ ನಡೆಯಲು ಆರಂಭವಾಗಿದೆ. ಅವರ ನಿಧನದ ನಂತರ 400 ಕಣ್ಣುಗಳನ್ನು ದಾನ ಕೊಡಲಾಗಿದ್ದು, 10 ಸಾವಿರ ಮಂದಿ ನೇತ್ರದಾನಕ್ಕೆ(Eye Donation) ನೋಂದಣಿ ಮಾಡಿಸಿದ್ದಾರೆ ಎಂದು ನಾರಾಯಣ ನೇತ್ರಾಲಯ (Narayana Nethralaya) ವ್ಯವಸ್ಥಾಪಕ ನಿರ್ದೇಶಕ ಡಾ.ಕೆ.ಭುಜಂಗ ಶೆಟ್ಟಿ (Dr.K Bhujang Shetty) ಹೇಳಿದರು. ಡಾ.ವೇಮಗಲ್ ನಾರಾಯಣಸ್ವಾಮಿ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕಾಡುಮಲ್ಲೇಶ್ವರ ಗೆಳೆಯರ ಬಳಗ ಜಂಟಿಯಾಗಿರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ನಟ 'ಪುನೀತ್ ರಾಜಕುಮಾರ್ ಸ್ಮರಣೆ, ಸಂಸ್ಕೃತಿ ಸಿರಿ' ಪ್ರಶಸ್ತಿ ಪ್ರದಾನ ಹಾಗೂ ಡಾ.ರಾಜ್‌ಕುಮಾರ್-ಪುನೀತ್ ರಾಜ್‌ಕುಮಾರ್ ಗೀತನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪುನೀತ್ ರಾಜ್ಕುಮಾರ್ ಅವರ ಡ್ರೀಮ್ ಪಾಜೆಕ್ಟ್ 'ಗಂಧದ ಗುಡಿ' (Gandhada Gudi) ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿತ್ತು. ವಿಡಿಯೋದಲ್ಲಿ ಪುನೀತ್ ರಾಜ್‌ಕುಮಾರ್ ಮತ್ತು ವೈಲ್ಡ್‌ಲೈಫ್ ಫೋಟೋಗ್ರಾಫರ್ ಅಮೋಘವರ್ಷ (Amoghavarsha) ಅವರು ಕಾಣಿಸಿಕೊಂಡಿದ್ದಾರೆ. ಅಶ್ವಿನಿ (Ashwini Puneeth Rajkumar) ಅವರು ನಿರ್ಮಾಣ ಮಾಡಿರುವ ಈ ವಿಡಿಯೋವನ್ನು, ಅಮೋಘವರ್ಷ ನಿರ್ದೇಶನ ಮಾಡಿದ್ದಾರೆ, ಅಜನೀಶ್ ಲೋಕನಾಥ್ (Ajaneesh Loknath ) ಸಂಗೀತವಿದೆ. ಆನೆ, ಹುಲಿ, ಹಾವು ಸೇರಿದಂತೆ ಸುಂದರವಾದ ಪ್ರಕೃತಿ ಸೌಂದರ್ಯದ ದೃಶ್ಯಗಳನ್ನು ಅದ್ಭುತವಾಗಿ ಸೆರೆ ಹಿಡಿಯಲಾಗಿದೆ. ವಿಡಿಯೋ ಕೊನೆಯಲ್ಲಿ ಅಪ್ಪು ಆಕಾಶ ನೋಡುತ್ತಿರುವ ವಿಡಿಯೋ ತೋರಿಸಿ 2022ರಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
Puneeth Rajkumar: ಮದುವೆ ಆಮಂತ್ರಣದಲ್ಲಿ ಅಪ್ಪು ಭಾವಚಿತ್ರ ಪ್ರಕಟಿಸಿ ಗೌರವ ಸಲ್ಲಿಸಿದ ಜೋಡಿ
ಇನ್ನು ಇತ್ತೀಚೆಗೆ ನಟ ಶ್ರೀಮುರಳಿ (SriiMurali) ಅವರು ಪುನೀತ್ ರಾಜ್ಕುಮಾರ್ ಅವರ ಸಾಧನೆಯನ್ನು ಕನ್ನಡ ಪಠ್ಯ ಪುಸ್ತಕಕ್ಕೆ ಸೇರಿಸುವ ವಿಚಾರವಾಗಿ ಒತ್ತಾಯ ಮಾಡಿದ್ದಾರೆ. ಕನ್ನಡ ಪಠ್ಯ ಪುಸ್ತಕದಲ್ಲಿ ಪುನೀತ್ ಅವರ ಸಾಧನೆ ಸೇರಿಸಬೇಕು. ಅಪ್ಪು ಅವರು ಸಾಧನೆ ಮಾಡಿದ್ದಾರೆ, ಅದನ್ನ ನಾವು ಗೌರವಿಸಬೇಕು. ಅಭಿಮಾನಿಗಳು ಹೇಳುತ್ತಿರುವುದು ನ್ಯಾಯವಾಗಿದೆ. ಅದನ್ನು ಗಮನಹರಿಸಿ ಮಾಡುವುದು ಒಳ್ಳೆಯದು. ಸರ್ಕಾರ ಇದರ ಬಗ್ಗೆ ಗಮನಹರಿಸಬೇಕು ಎಂದು ತಿಳಿಸಿದ್ದರು. ಪುನೀತ್ ತಮ್ಮ ಅದ್ಭುತ ವ್ಯಕ್ತಿತ್ವ, ಸರಳತೆ ಹಾಗೂ ವಿನಯವಂತಿಕೆಯಿಂದ ಎಲ್ಲರಿಗೂ ಪ್ರಿಯವಾಗಿದ್ದರು. ಮುಗ್ಧ ನಗುವಿನಿಂದ ಕನ್ನಡಿಗರ ಹೃದಯದಲ್ಲಿ ರಾರಾಜಿಸುತ್ತಿರುವ ಕರ್ನಾಟಕದ ಈ ಅಮೂಲ್ಯ ರತ್ನ ಎಂದೆಂದಿಗೂ ಅಮರರಾಗಿರುತ್ತಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.